ವೈದ್ಯರ ಮೇಲೆ ಹಲ್ಲೆ: ಪ್ರತಿಭಟನಾ ಮೆರವಣಿಗೆ

•ಆರೋಪಿಗಳನ್ನು ಬಂಧಿಸುವವರೆಗೆ ಖಾಸಗಿ ಆಸ್ಪತ್ರೆ-ಔಷಧ ಅಂಗಡಿಗಳು ಬಂದ್‌ •ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ

Team Udayavani, Jul 19, 2019, 10:33 AM IST

kopala-tdy-2..

ಗಂಗಾವತಿ: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಗಾಂಧಿ ವೃತ್ತದಲ್ಲಿ ವೈದ್ಯರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಗಂಗಾವತಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದರಿಂದ ಮೃತ ವ್ಯಕ್ತಿ ಕಡೆಯವರು ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರನ್ನು ಥಳಿಸಿದ ಘಟನೆ ಖಂಡಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಭಾರತೀಯ ವೈದ್ಯಕೀಯ ಸಂಘ, ರಾಜ್ಯ ಔಷಧ ವಿತರಕರು, ವ್ಯಾಪಾರಿಗಳ ಸಂಘ ಮತ್ತು ರಕ್ತ ಪರೀಕ್ಷಕರ ಸಂಘದ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಐಎಂಎ ನಿಯೋಜಿತ ರಾಜ್ಯಾಧ್ಯಕ್ಷ ಡಾ| ಮಧುಸೂದನ್‌ ಕಾರಿಗನೂರು ಮಾತನಾಡಿ, ಆಸ್ಪತ್ರೆ ವೈದ್ಯ ಹಾಗೂ ರಕ್ತ ಪರೀಕ್ಷೆ ಮಾಡುವ ಸಿಬ್ಬಂದಿ ಮೇಲೆ ಮೃತ ವ್ಯಕ್ತಿ ಕಡೆಯವರು ಹಲ್ಲೆ ಮಾಡಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ವೈದ್ಯರ ಮೇಲೆ ನಿರಂತರ ಹಲ್ಲೆಯಾಗುತ್ತಿವೆ. ವೈದ್ಯರು ಅಭದ್ರತೆಯ ಮಧ್ಯೆ ರೋಗಿಗಳಿಗೆ ಚಿಕಿತ್ಸೆ ನೀಡಬೇಕಿದ್ದು, ಸರಕಾರ ಸೂಕ್ತ ಭದ್ರತೆ ನೀಡಬೇಕು. ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಆರೋಪಿಗಳನ್ನು ಬಂಧಿಸುವವರೆಗೆ ಖಾಸಗಿ ಆಸ್ಪತ್ರೆಗಳು ಮತ್ತು ಔಷಧ ಅಂಗಡಿಗಳ ಕಾರ್ಯ ಸ್ಥಗಿತವಾಗಿರುತ್ತದೆ. ಕೂಡಲೇ ಪೊಲೀಸರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಂತರ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಐಎಂಎ ಅಧ್ಯಕ್ಷ ಶ್ರೀನಿವಾಸ ರಡ್ಡಿ, ಔಷಧ ವ್ಯಾಪಾರಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರು, ಡಾ| ಮಲ್ಲನಗೌಡ, ವೈದ್ಯರಾದ ಮಾಧವ ಶೆಟ್ಟಿ, ಸೋಮರಾಜು, ಮಧುಸೂದನ್‌, ಹನುಮಂತಪ್ಪ, ಎಸ್‌.ವಿ. ಹಂದ್ರಾಳ, ವಿ.ವಿ. ಚಿನಿವಾಲರ್‌, ಸಂಗಮ ಪಾಟೀಲ್, ಅಮರೇಶ ಕನ್ನಾಳ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.