ಸರ್ಕಾರಗಳ ಸಾಧನೆಯೊಂದಿಗೆ ಜನರನ್ನು ಆಕರ್ಷಿಸಿ; ಸಿ.ವಿ. ಚಂದ್ರಶೇಖರ
ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಬೇಕು
Team Udayavani, Feb 4, 2023, 6:17 PM IST
ಕೊಪ್ಪಳ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಧನೆಯೊಂದಿಗೆ ಬಿಜೆಪಿ ಕಾರ್ಯಕರ್ತರು ಜನರನ್ನು ಪಕ್ಷಕ್ಕೆ ಆಕರ್ಷಿಸಬೇಕು ಎಂದು ಬಿಜೆಪಿ ಮುಖಂಡ ಸಿ.ವಿ. ಚಂದ್ರಶೇಖರ ಹೇಳಿದರು.
ಭಾಗ್ಯನಗರದ 12ನೇ ವಾರ್ಡ್‌ನ ಮಾರುತೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬಿಜೆಪಿ ಗ್ರಾಮೀಣ ಮಂಡಲದಿಂದ ನಡೆದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಸರ್ಕಾರವು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಡಬಲ್ ಇಂಜಿನ್ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ತೆರಳಿ, ಆಶೀರ್ವಾದ ಮಾಡುವಂತೆ ಮನವೊಲಿಸಬೇಕು. ಈ ಮೂಲಕ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಬೇಕು. ಇದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರವೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಸರ್ಕಾರಗಳ ಸಾಧನೆಗಳನ್ನು ಮನವರಿಕೆ ಮಾಡಿದರು. ಬಿಜೆಪಿ ಮುಖಂಡರಾದ ಚಂದ್ರಶೇಖರ್ ಕವಲೂರ, ಚಂದ್ರಶೇಖರ್ ಪಾಟೀಲ್ ಹಲಗೇರಿ, ಭಾಗ್ಯನಗರದ ಬಿಜೆಪಿ ಮುಖಂಡ ರಾಘವೇಂದ್ರ ಪಾನಘಂಟಿ, ಸುಬ್ಬಯ್ಯ, ಶ್ರೀನಿವಾಸ ಹ್ಯಾಟಿ, ಕೊಟ್ರೇಶ್ ಶೇಡ್ಮಿ, ರಾಜೇಶ್ ತಟ್ಟಿ, ಕೊಟ್ರೇಶ್ ಕವಲೂರು, ಸುರೇಶ್ ದರಗದಕಟ್ಟಿ, ಯಮನೂರ ಹಾದಿಮನಿ, ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.