ಸಾರ್ವಜನಿಕರಿಗೆ ರೋಟಾ ವೈರಸ್ ಲಸಿಕೆ ಜಾಗೃತಿ ಅತ್ಯವಶ್ಯ
Team Udayavani, Jul 27, 2019, 9:19 AM IST
ಕೊಪ್ಪಳ: ನಗರದ ಹಳೆಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ರೋಟಾ ವೈರಸ್ ಲಸಿಕೆ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಡಾ| ಲಿಂಗರಾಜ ಮಾಹಿತಿ ನೀಡಿದರು.
ಕೊಪ್ಪಳ: ರೋಟಾ ವೈರಸ್ ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಅಗತ್ಯವಾಗಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಲಿಂಗರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ರೋಟಾ ವೈರಸ್ ಲಸಿಕೆಯ ಪರಿಚಯ ಕುರಿತು ನಗರದ ಹಳೆಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಮಟ್ಟದ ಮಾಧ್ಯಮ ಮಿತ್ರರ ತರಬೇತಿ ಕಾರ್ಯಾಗಾರದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೋಟಾ ವೈರಸ್ ಲಸಿಕೆ ನವಜಾತ ಶಿಶುಗಳ ಆರೋಗ್ಯ ರಕ್ಷಣೆ ಮಾಡುವಂತಹ ಲಸಿಕೆಯಾಗಿದೆ. ಈ ಲಸಿಕೆಯನ್ನು ಮಗು ಹುಟ್ಟಿದ ಆರು ವಾರಗಳಿಂದ 14ನೇ ವಾರದವರೆಗೂ ಮಗುವಿಗೆ ಹಾಕಬೇಕು. ಇದರಿಂದ ಮಗುವಿನ ಬೆಳವಣಿಗೆಯಲ್ಲಿ ಹೆಚ್ಚಿನ ಪ್ರಗತಿ ಕಾಣಬಹುದು. ರೋಟಾ ವೈರಸ್‌ನಿಂದಾಗುವ ಅತಿಸಾರ ಭೇದಿಯ ವಿರುದ್ಧ ಮಕ್ಕಳ ರಕ್ಷಣೆ ಮಾಡುವ ಸಲುವಾಗಿ ಭಾರತ ಸರ್ಕಾರವು ರೋಟಾ ವೈರಸ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಪರಿಚಯಿಸಲಾಗುತ್ತಿದೆ. ಸದ್ಯ ರೋಟಾ ವೈರಸ್ ಲಸಿಕೆ ಭಾರತದ ಹನ್ನೊಂದು ರಾಜ್ಯದಲ್ಲಿ ಜಾರಿಯಲ್ಲಿದೆ ಎಂದರು.
ರೋಟಾ ವೈರಸ್ ಲಸಿಕೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ವೈದ್ಯರು ಹಾಗೂ ಆರೋಗ್ಯ ಮೇಲ್ವಿಚಾರಕರಿಗೆ ಈ ಕುರಿತು ತರಬೇತಿಗಳನ್ನು ನೀಡಲಾಗುತ್ತಿದೆ. ಪ್ರಪಂಚಾದ್ಯಂತ 94 ದೇಶದಲ್ಲಿ ರೋಟಾ ವೈರಸ್ ಲಸಿಕೆ ಜಾರಿಯಲ್ಲಿದೆ. ಈ ಲಸಿಕೆ ನಮ್ಮ ದೇಶದಲ್ಲಿಯೂ ಜಾರಿಯಲ್ಲಿದ್ದು, ಆರಂಭದಲ್ಲಿ ವಿದೇಶಗಳು ತಯಾರಿಸಿದ ರೋಟಾ ವೈರಸ್ ಲಸಿಕೆ ತೆರೆಸಿಕೊಳ್ಳಲಾಗುತ್ತಿತ್ತು. ಈಗ ನಮ್ಮ ರಾಷ್ಟ್ರದಲ್ಲೇ ಈ ಲಸಿಕೆ ತಯಾರಿಸಲಾಗುತ್ತಿದೆ. ರೋಟಾ ವೈರಸ್‌ನಿಂದಾಗಿ ಪ್ರತಿ ವರ್ಷ 79 ಸಾವಿರ ಮಕ್ಕಳು ಸಾವಿಗಿಡಾಗುತ್ತಾರೆ. ರೋಟಾ ವೈರಸ್ ಲಸಿಕೆ ನೀಡುವುದರಿಂದ ಮಕ್ಕಳ ಸಾವಿನ ಪ್ರಮಾಣ ಕುಂಠಿತಗೊಳ್ಳುವುದು. ರೋಟಾ ವೈರಸ್ ಲಸಿಕೆ ಹಾಕುವುದರಿಂದ ಮಗುವಿಗೆ ಮುಂದೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ ಎಂದರು.
ಒಂದೂವರೇ ತಿಂಗಳ ಮಗುವಿಗೆ 2.5 ಎಂಎಲ್ ಡೋಸ್ ಹಾಕಬೇಕು. ಒಂದು ಮಗುವಿಗೆ ಉಪಯೋಗ ಮಾಡಿದ ಸೂಜಿ ಮತ್ತೆ ಬೇರೆ ಮಗುವಿಗೆ ಉಪಯೋಗ ಮಾಡುವುದಿಲ್ಲ. ಎಚ್ಐವಿ ಮತ್ತು ಅಪೌಷ್ಟಿಕದಿಂದ ಬಳಲುತ್ತಿರುವ ಮಗುವಿಗೂ ಈ ರೋಟಾ ಲಸಿಕೆ ಹಾಕಬಹುದು. ಇದರಿಂದ ಆ ಮಗು ಆರೋಗ್ಯವಂತವಾಗುತ್ತದೆ. ಆದ್ದರಿಂದ ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ| ಮಹೇಶ ಎಂ.ಜಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಜಂಬಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ| ರಾಮಾಂಜನೇಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಂ. ಅವಿನಾಶ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.