ಕೆಲಸದ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷ್ಯ ಸಲ್ಲ: ಬೆನ್ನೂರ
Team Udayavani, Dec 13, 2018, 3:28 PM IST
ಯಲಬುರ್ಗಾ: ಗ್ರಾಮೀಣ ಭಾಗದ ಜನತೆ ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಪರಿಣಾಮ ರೋಗ ರುಜಿನಗಳು ಆವರಿಸುತ್ತಿವೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.
ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಜನಜಾಗೃತಿ ಕಲಾರಂಗ ಸಂಸ್ಥೆ ಕುಷ್ಟಗಿ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜನಜಾಗೃತಿ ನಿಮಿತ್ಯ ಏರ್ಪಡಿಸಲಾಗಿದ್ದ ಬೀದಿನಾಟಕ ಹಾಗೂ ಜಾನಪದ ಗೀತೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನತೆ ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಪರಿಣಾಮ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಅನಾರೋಗ್ಯ ಪೀಡಿತರಾಗಿ ಸಮಸ್ಯೆ ಎದುರಿಸುವ ಮುನ್ನ ಮುನ್ನೆಚ್ಚರಿಕೆ ವಹಿಸಿದರೆ ಹಣದ ಜತೆಗೆ ಸಮಯವನ್ನು ಉಳಿಸಬಹುದು. ಬಹುತೇಕ ರೋಗಗಳು ನಾವು ಸೇವಿಸುವ ಆಹಾರ ಹಾಗೂ ನೀರಿನಿಂದ ಹರಡುತ್ತವೆ ಎಂದರು. ಎಪಿಎಂಸಿ ಮಾಜಿ ಸದಸ್ಯ ಶಿವಸಂಗಪ್ಪ ಹುಚನೂರು ಮಾತನಾಡಿ, ಗ್ರಾಮೀಣ ಭಾಗದ ಜನತೆ ಕಾಲಕಾಲಕ್ಕೆ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಿರುವುದು ಅತ್ಯಗತ್ಯವಾಗಿದೆ. ರೋಗಗಳ ಬಗ್ಗೆ ಅರಿವಿಲ್ಲದೆ ಕೊನೆಯ ಹಂತದಲ್ಲಿ ಪ್ರಾಣವನ್ನೇ ಕಳೆದುಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅದಕ್ಕೆ ಅವಕಾಶ ನೀಡಬಾರದು, ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಾಗ ಹಮ್ಮಿಕೊಳ್ಳಬೇಕು ಎಂದರು.
ಗ್ರಾಪಂ ಸದಸ್ಯ ಚನ್ನಪ್ಪ ಗೇದಗೇರಿ, ಜಿಲ್ಲಾ ತಾಯ್ತನ ರಕ್ಷಣಾ ವೇದಿಕೆಯ ಸದಸ್ಯ ಆದಪ್ಪ ಮುರಡಿ, ಮುಖಂಡರಾದ ಬಸವಂತಪ್ಪ ಕುದರಿಮೋತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ಮಧು ಎಸ್.ಎಂ., ಆರೋಗ್ಯಮಿತ್ರ ಗೋವಿಂದರಾವ್ ಮರಾಠೆ, ಆರೋಗ್ಯ ಸಹಾಯಕಿ ಪಿ. ಸುಶೀಲಾ, ಆರೋಗ್ಯ ಸಹಾಯಕ ಮಲ್ಲಯ್ಯ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು, ಶಾಲಾ ಮಕ್ಕಳು ಹಾಜರಿದ್ದರು. ಕಲಾ ತಂಡದವರು ತಾಯಿ ಮರಣ, ಶಿಶು ಮರಣ ಕಡಿಮೆ ಮಾಡುವ ಉದ್ದೇಶದಿಂದ ಬೀದಿ ನಾಟಕ ಹಾಗೂ ಜಾನಪದ ಗೀತೆಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.