ಪ್ರತಾಪಗೌಡಗೆ ಭರ್ಜರಿ ಜಯ: ವಿಜಯೇಂದ್ರ
Team Udayavani, Mar 21, 2021, 9:12 PM IST
ತಾವರಗೇರಾ: ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಅವರು ಶನಿವಾರ ಮಸ್ಕಿಗೆ ಹೋಗುವ ಸಂದರ್ಭದಲ್ಲಿ ಪಟ್ಟಣದ ಜೈಜನಾಥ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹಾಗೂ ಪಕ್ಷದ ಮುಖಂಡರು ಚುನಾವಣೆ ನಡೆಯುತ್ತಿರುವ ಮಸ್ಕಿ ಕ್ಷೇತ್ರದ ಉಸ್ತುವಾರಿ ನನಗೆ ನೀಡಿದ್ದಾರೆ. ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಬಿಜೆಪಿಗೆ ಮತ ನೀಡುವ ಮೂಲಕ ಪ್ರತಾಪಗೌಡ ಪಾಟೀಲ್ ಅವರನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ. ಇದೇ ವೇಳೆ ಮುಖಂಡರು ಶ್ಯಾಮೀದಲಿ ದರ್ಗಾ ಅಭಿವೃದ್ಧಿಗೆ, ಮೆಣೇಧಾಳ ರಾಯರ ಬೃಂದಾವನ ನಿರ್ಮಾಣಕ್ಕೆ, ವೈಜನಾಥ ದೇವಸ್ಥಾನ ಅಭಿವೃದ್ಧಿಗೆ ತಲಾ 1 ಕೋಟಿ ರೂ. ಅನುದಾನ ಮಂಜೂರು ಮತ್ತು ಸೂರ್ಯವಂಶ ಕ್ಷತ್ರೀಯ ಸಮಾಜವನ್ನು ಎಸ್ಸಿ ಮೀಸಲಾತಿ ಪಟ್ಟಿಗೆ ಸೇರಿಸಲು, ಸರ್ಕಾರಕ್ಕೆ ಒತ್ತಡ ತರುವಂತೆ ಮನವಿ ಮಾಡಿದರು.
ಶಾಸಕ ಬಸವರಾಜ ದಢೇಸುಗೂರು, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ಜಿಪಂ ಸದಸ್ಯ ಕೆ. ಮಹೇಶ, ಮುಖಂಡರಾದ ನವೀನ ಗುಳಗಣ್ಣವರ, ಅಮರೇಶ ಕುಳಗಿ, ಚಂದ್ರಶೇಖರ ನಾಲತವಾಡ, ಮಂಜುನಾಥ ಜೂಲಕುಂಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.