ಅಂಜನಾದ್ರಿಯಲ್ಲಿ ಅನ್ಯಧರ್ಮಿಯರು ವ್ಯಾಪಾರ ಮಾಡದಂತೆ ಹಿಂಜಾವೇ ಹಾಕಿದ್ದ ಬ್ಯಾನರ್ ತೆರವು
Team Udayavani, Nov 29, 2022, 5:47 PM IST
ಗಂಗಾವತಿ: ಹನುಮಮಾಲೆ ವಿಸರ್ಜನೆ ಸಂದರ್ಭದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳು ವ್ಯಾಪಾರ ಮಾಡಬಾರದು. ಹಿಂದುಗಳು ಹಿಂದುಗಳಿಗಾಗಿ ಹಿಂದುಗಳಿಗೋಸ್ಕರ್ ಎಂದು ಹಿಂದೂ ಜಾಗರಣಾ ವೇದಿಕೆಯವರು ಆನೆಗೊಂದಿ ಹನುಮನಹಳ್ಳಿ ಹಾಗೂ ಅಂಜನಾದ್ರಿ ಸುತ್ತಲೂ ಹಾಕಿದ್ದ ಬ್ಯಾನರ್ ಮತ್ತು ಬಂಟಿಂಗ್ಸ್ ತಾಲೂಕು ಮತ್ತು ಜಿಲ್ಲಾಡಳಿತ ತೆರವು ಮಾಡಿಲಾಗಿದೆ.
ಬ್ಯಾನರ್ ಹಾಕಿದವರನ್ನು ಪತ್ತೆ ಮಾಡಿ ಕೇಸ್ ದಾಖಲಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ಮತ್ತು ಅಂಜನಾದ್ರಿ ದೇಗುಲದ ವಿಶೇಷ ಅಧಿಕಾರಿ ಬಸವಣೆಪ್ಪ ಕಲಶೆಟ್ಟಿ ತಿಳಿಸಿದ್ದಾರೆ.
ಅಂಜನಾದ್ರಿಯಲ್ಲಿ ಅನ್ಯ ಧರ್ಮದವರು ವ್ಯಾಪಾರ ವಹಿವಾಟು ಮಾಡಬಾರದು. ಹಿಂದುಗಳ ಕ್ಷೇತ್ರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು. ಇದಕ್ಕೆ ಜಿಲ್ಲಾಡಳಿತ ಇತರೆ ಧರ್ಮಿರನ್ನು ಖಾಲಿ ಮಾಡಿಸುವಂತೆ ಹಿಂದೂ ಜಾಗರಣಾ ವೇದಿಕೆಯವರು ಒಂದು ವಾರದ ಮುಂಚೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಮಂಗಳವಾರ ಅಂಜನಾದ್ರಿ ಸುತ್ತಮುತ್ತ ಅನ್ಯ ಧರ್ಮಿಯರು ವ್ಯಾಪಾರ ಮಾಡಬಾರದೆಂದು ಬ್ಯಾನರ್ ಬಂಟಿಂಗ್ಸ್ ಹಾಕಿದ್ದರು. ಸಂಘಪರಿವಾರದವರ ಈ ಕೆಲಸದ ಕುರಿತು ಪ್ರಗತಿಪರರು, ಸಿಪಿಐಎಂ ಹಾಗೂ ಕಾಂಗ್ರೆಸ್ ಪಕ್ಷದವರು ಟೀಕೆ ವ್ಯಕ್ತಪಡಿಸಿದ್ದರು. ಕೂಡಲೇ ಎಚ್ಚತ್ತ ಜಿಲ್ಲಾಡಳಿತ ಹಿಂದೂ ಜಾಗರಣಾ ವೇದಿಕೆಯವರು ಹಾಕಿದ್ದ ಬ್ಯಾನರ್ ತೆರವು ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ಯು.ನಾಗರಾಜ, ತಾ.ಪಂ.ಇಒ ಮಹಾಂತಗೌಡ ಪಾಟೀಲ್, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ಮಂಜುನಾಥ, ಪಿಡಿಒ ಕೆ.ಕೃಷ್ಣಪ್ಪ, ಕಂದಾಯ ನಿರೀಕ್ಷ ಮಂಜುನಾಥ ಸ್ವಾಮಿ ಸೇರಿ ಇತರೆ ಇಲಾಖೆಯವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.