ಡೆಂಘೀ ಜ್ವರ ತಡೆಗೆ ನಿಗಾ ವಹಿಸಿ

•ವಸತಿ ನಿಲಯಗಳಿಗೆ ಸೊಳ್ಳೆ ಪರದೆ ವಿತರಿಸಿ•ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಿ

Team Udayavani, Jul 27, 2019, 9:24 AM IST

kopala-tdy-2

ಕೊಪ್ಪಳ: ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ಸಭೆಯಲ್ಲಿ ಜಿಪಂ ಸಿಇಒ ರಘುನಂದನ್‌ ಮೂರ್ತಿ ಮಾತನಾಡಿದರು.

ಕೊಪ್ಪಳ: ಜಿಲ್ಲೆಯಲ್ಲಿ ಡೆಂಘೀ ಜ್ವರ ಬಾರದಂತೆ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಜಿಪಂ ಸಿಇಒ ರಘುನಂದನ್‌ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ-2019ರ ಅಂಗವಾಗಿ ನಡೆದ ಜಿಲ್ಲಾಮಟ್ಟದ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಪಂ, ಬಾಪೂಜಿ ಸೇವಾ ಕೇಂದ್ರ, ಅಟಲ್ಜಿ ಸೇವಾ ಕೇಂದ್ರ, ಅಂಗನವಾಡಿ, ಶಾಲಾ ಕಾಲೇಜು ಹಾಗೂ ಜನನಿಬೀಡ ಸ್ಥಳಗಳಲ್ಲಿ ಡೆಂಘೀ ಜ್ವರದ ಲಕ್ಷಣಗಳು, ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಭಿತ್ತಿಪತ್ರ ಅಂಟಿಸಬೇಕು. ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಹೆಚ್ಚಾಗಿ ಬಳಸುವುದರಿಂದ ಆ ಮಾಧ್ಯಮವನ್ನು ಜಾಗೃತಿ ಮೂಡಿಸಲು ಬಳಸಿಕೊಳ್ಳಿ. ಡೆಂಘೀ ವಿರೋಧಿ ಮಾಸಾಚರಣೆ ಕುರಿತ ಜಾಥಾ ಮಾತ್ರವಲ್ಲದೇ ವಿವಿಧ ಇಲಾಖೆಗಳಿಂದ ಹಮ್ಮಿಕೊಳ್ಳುವ ವಿವಿಧ ಜಾಥಾಗಳಲ್ಲಿ ಡೆಂಘೀ ಕುರಿತು ಜಾಗೃತಿ ಮೂಡಿಸುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದರು.

ಜಿಲ್ಲೆ ಈಗಾಗಲೇ ಮಲೇರಿಯಾ ಮುಕ್ತದತ್ತ ಸಾಗುತ್ತಿದೆ. ಅದರಂತೆ ಡೆಂಘೀ ಜ್ವರ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಪರಸ್ಪರ ಸಮನ್ವಯತೆಯಿಂದ ಮುನ್ನಡೆಯಬೇಕು. ಡೆಂಘೀ ಜಾಗೃತಿ ಕುರಿತು ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಚರ್ಚಾ ಸ್ಪರ್ಧೆ, ಪ್ರಾರ್ಥನೆ ಸಮಯದಲ್ಲಿ ಡೆಂಘೀ ಕುರಿತು 5 ನಿಮಿಷಗಳ ಜಾಗೃತಿ ಭಾಷಣ ಏರ್ಪಡಿಸುವಂತೆ, ಶಾಲಾ ಸುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ಕ್ರಮಕೈಗೊಂಡು, ಸ್ವಚ್ಛತೆ ನಿರ್ವಹಿಸಲು ಸೂಚನೆ ನೀಡಬೇಕು. ವಸತಿ ಶಾಲೆಗಳ ಕಿಟಕಿಗಳಿಗೆ ಸೊಳ್ಳೆಗಳು ಪ್ರವೇಶವಾಗದಂತೆ ಪರದೆ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು. ಡೆಂಘೀ ಬಾಧಿತ ಪ್ರದೇಶಗಳಲ್ಲಿ ಧೂಮೀಕರಣ (ಫಾಗಿಂಗ್‌) ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಕೃಷಿ ಇಲಾಖೆ ಅಧಿಕಾರಿಗಳಿಂದ ಜಿಲ್ಲೆಯ ಕೃಷಿ ಹೊಂಡಗಳ ಮಾಹಿತಿ ಪಡೆದು ಕೃಷಿ ಹೊಂಡಗಳಲ್ಲಿ ಲಾರ್ವಾಹಾರಿ ಮೀನು ಬಿಡಬೇಕು. ಜಿಲ್ಲೆಯಲ್ಲಿ ಸ್ಥಳಾವಕಾಶದ ಲಭ್ಯತೆ ಅನುಸಾರ ಲಾರ್ವಾಹಾರಿ ಮೀನುಗಳ ಉತ್ಪಾದನೆ ಹಾಗೂ ಅಭಿವೃದ್ಧಿಗೆ ಮೀನಿನ ಹೊಂಡಗಳನ್ನು ನಿರ್ಮಿಸಬೇಕು ಮತ್ತು ಲಾರ್ವಾಹಾರಿ ಮೀನುಗಳನ್ನು ಅವಶ್ಯಕತೆ ಇರುವೆಡೆ ಬಳಸಬೇಕು. ಅನುಪಯುಕ್ತ ಮತ್ತು ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ನಗರದ ಸ್ವಚ್ಛತೆ, ಸೂಕ್ತ ಒಳಚರಂಡಿ ವ್ಯವಸ್ಥೆ, ನೀರು ಸರಬರಾಜು ಪೈಪ್‌ ಪರೀಕ್ಷಿಸುವುದು, ಅಲ್ಲಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೊಳ್ಳೆಗಳ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ಸಿಂಪಡಿಸಬೇಕು. ರೋಗಗಳು ಉಲ್ಬಣವಾದ ಸಂದರ್ಭದಲ್ಲಿ ಒಳಾಂಗಣ ಧೂಮೀಕರಣ ಅಥವಾ ಒಳಾಂಗಣ ಕೀಟನಾಶಕಗಳನ್ನು ಸಿಂಪರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರಕಾಶ ಮಾತನಾಡಿ, ಡೆಂಘೀ ಜ್ವರವು ಈಡೀಸ್‌ ಸೊಳ್ಳೆಯಿಂದ ಹರಡುತ್ತದೆ. ಇದು ಹಗಲು ಹೊತ್ತಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಮಕ್ಕಳು, ಗರ್ಭಿಣಿಯರು ಹಾಗೂ ವಯಸ್ಸಾದವರಲ್ಲಿ ಈ ಜ್ವರದ ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತವೆ. ಸಾರ್ವಜನಿಕರು ಮನೆಯಲ್ಲಿ ಹಾಗೂ ಮನೆಯ ಸುತ್ತಲಿನ ಪ್ರದೇಶದಲ್ಲಿ ನೀರನ್ನು ಹೆಚ್ಚು ದಿನ ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಸಂಗ್ರಹಣಾಧಿಕಾರಿಗಳನ್ನು ಆಗಾಗ ಸ್ವಚ್ಛಗೊಳಿಸಬೇಕು. ನೀರು ಸಂಗ್ರಹವಾಗುವ ಅನುಪಯುಕ್ತ ವಸ್ತುಗಳಾದ ತೆಂಗಿನ ಕಾಯಿ ಚಿಪ್ಪು, ಅನುಪಯುಕ್ತ ಟೈರು, ಬಳಕೆ ಇಲ್ಲದ ನೀರಿನ ಟ್ಯಾಂಕ್‌ಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು ಎಂದರು.

ತೀವ್ರ ಮೈ-ಕೈ ನೋವು, ತಲೆನೋವು, ಕಣ್ಣಿನ ನೋವು ಈ ಜ್ವರದ ಲಕ್ಷಣವಾಗಿದ್ದು, ಯಾವುದೇ ಜ್ವರ ಕಾಣಿಸಿದರೂ ಕೂಡಲೇ ರಕ್ತಪರೀಕ್ಷೆ ಮಾಡಿಸಬೇಕು. ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗದ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಕೃಷಿ ಹೊಂಡದಂತಹ ನೀರಿನ ಸಂಗ್ರಹದ ಅಗತ್ಯವಿರುವೆಡೆ ಗಪ್ಪಿ ಹಾಗೂ ಗ್ಯಾಂಬ್ಯೂಸಿಯಾ ಎಂಬ ಲಾರ್ವಾಹಾರಿ ಮೀನು ಬಿಡಲಾಗುತ್ತದೆ. ಈ ಮೀನುಗಳು ಸೊಳ್ಳೆಯು ಲಾರ್ವಾ ಹಂತದಲ್ಲಿರುವಾಗಲೇ ಅವನ್ನು ಭಕ್ಷಿಸುವುದರಿಂದ ಸೊಳ್ಳೆಗಳ ಉತ್ಪಾದನೆ ನಿಯಂತ್ರಿಸಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಕುಮಾರ ಯರಗಲ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಲಿಂಗರಾಜ ಸೇರಿದಂತೆ ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.