ನಿಯೋಜಿತ ಸಿಬ್ಬಂದಿಗೆ ಜವಾಬ್ದಾರಿಯಿರಲಿ: ಸೈಯಿದಾ
ಬೆಳೆ ಅಂದಾಜು ಸಮೀಕ್ಷೆ ಆರಂಭ ನಿರ್ಲಕ್ಷ್ಯ ವಹಿಸಿದರೆ ಕ್ರಮ ಬೆಳೆ ವಿಮೆ ಲಾಭ ರೈತರಿಗೆ ಒದಗಿಸಿ
Team Udayavani, Jul 19, 2019, 3:54 PM IST
ಕೊಪ್ಪಳ: ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಸಿಬ್ಬಂದಿಗೆ ಬೆಳೆ ಸಮೀಕ್ಷಾ ಕಿಟ್ ವಿತರಿಸಲಾಯಿತು.
ಕೊಪ್ಪಳ: ಬೆಳೆ ಅಂದಾಜು ಸಮೀಕ್ಷೆ ಕಾರ್ಯಕ್ಕೆ ನೇಮಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಡಿಸಿ ಸೈಯಿದಾ ಅಯಿಷಾ ಬೆಳೆ ಕಟಾವು ಕಾರ್ಯಕರ್ತ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ನಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಬೆಳೆ ಕಟಾವು ಪ್ರಯೋಗಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿರ್ಲಕ್ಷ್ಯ ಬೇಡ: ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಪಂರಾ ಇಲಾಖೆಗಳು ಹಂತ ಹಂತವಾಗಿ ಕಾರ್ಯನಿರ್ವಹಿಸುತ್ತಿವೆ. ಸಮೀಕ್ಷೆ ಕಾರ್ಯವು ರೈತರಿಗೆ ಬೆಳೆ ವಿಮೆ ಸೇರಿದಂತೆ ಸರ್ಕಾರದ ಇತರ ಯೋಜನೆಗಳಿಗೆ ಪೂರಕವಾಗಿರುವುದರಿಂದ ಈ ಕಾರ್ಯಕ್ಕೆ ನೇಮಿಸಿದ ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಕೃಷಿ ಇಲಾಖೆಯಿಂದ ಬಿಡುಗಡೆಯಾದ ತಂತ್ರಾಂಶ ಬಳಸಿಕೊಂಡು ವಿಮಾ ಅಧಿಕಾರಿಗಳೊಂದಿಗೆ ನಿಯಮಾನುಸಾರ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಯಾವುದೇ ನಿರ್ಲಕ್ಷ್ಯ ತೋರಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ: ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನ ಎಂ. ಶೇಖ್ ಮಾತನಾಡಿ, 2016-17ನೇ ಸಾಲಿನಿಂದ ತಂತ್ರಾಂಶ ಆಧಾರಿತ ಬೆಳೆ ಸಮೀಕ್ಷೆ ನಡೆಯುತ್ತಿದೆ. ಅಧಿಕಾರಿಗಳು ಈ ತಂತ್ರಾಂಶ ಕುರಿತು ಸಂಪೂರ್ಣ ತಿಳಿದು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಬೆಳೆ ಸಮೀಕ್ಷೆಯ ಎಲ್ಲ ಹಂತದ ಪ್ರಕ್ರಿಯೆ ಕುರಿತು ತಂತ್ರಾಂಶದಲ್ಲಿ ಮಾಹಿತಿಯಿದೆ. ಅದರನುಸಾರ ಕಟಾವಿನ ವೇಳೆ ವಿವಿಧ ಹಂತಗಳ ಛಾಯಾಚಿತ್ರ ಮತ್ತು ವಿಡಿಯೋ ಮಾಡುವುದು ಕಡ್ಡಾಯ. ಒಂದೇ ತೆರನಾದ ಛಾಯಚಿತ್ರ ಇರದಂತೆ ಎಚ್ಚರ ವಹಿಸಿ. ಇದರಿಂದ ವಿಮಾ ಕಂಪನಿ ಆಕ್ಷೇಪಣೆ ನಿರ್ವಹಿಸಲು ಸಹಾಯಕವಾಗುತ್ತದೆ ಎಂದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಮಾತನಾಡಿ, ಬೆಳೆ ಸಮೀಕ್ಷೆ ತಂತ್ರಾಂಶವು ವರ್ಷದಿಂದ ವರ್ಷಕ್ಕೆ ಉನ್ನತೀಕರಣಗೊಳ್ಳುತ್ತಿದೆ. ಅದಕ್ಕೆ ತಕ್ಕಂತೆ ಅಧಿಕಾರಿಗಳು ತಂತ್ರಾಂಶದ ಹೊಸ ಕಾರ್ಯಶೈಲಿ ಅರಿತು ಬೆಳೆ ಅಂದಾಜು ವಿಮೆ ಸಮೀಕ್ಷೆ ನಡೆಸಬೇಕು. ಬೆಳೆ ವಿಮೆಯ ಲಾಭವನ್ನು ಜಿಲ್ಲೆಯ ರೈತರಿಗೆ ಒದಗಿಸಬೇಕು ಎಂದರು.
ಈಗಾಗಲೇ ಸಮೀಕ್ಷಾ ಅಧಿಕಾರಿಗಳಿಗೆ ಒದಗಿಸಲಾದ ಯೋಜನಾ ಪಟ್ಟಿಯಲ್ಲಿ ನೀಡಲಾದ ಬೆಳೆಗಳ ಸಮೀಕ್ಷೆ ಮಾತ್ರ ಮಾಡಬೇಕು. ನೀರಾವರಿ ಮತ್ತು ಮಳೆ ಆಶ್ರಿತ ಬೆಳೆ ಇದ್ದರೆ ಆಯಾ ಬೆಳೆಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು. ಪ್ರತಿ ಪ್ರಯೋಗಕ್ಕೂ ಮೂಲ ಸರ್ವೆ ನಂಬರ್ ಸೇರಿದಂತೆ ಹೆಚ್ಚುವರಿಯಾಗಿ ಅದಕ್ಕೆ 4 ಸರ್ವೆ ನಂಬರ್ ಅಪಲೋಡ್ ಮಾಡಬೇಕು. ಆಯ್ಕೆಯಾದ ಸರ್ವೆ ನಂಬರಿನ ರೈತರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕಟಾವಿನ ದಿನಾಂಕ ಮತ್ತು ಸಮಯವನ್ನು ಒಂದು ದಿನ ಮುಂಚಿತವಾಗಿ ವಿಮಾ ಕಂಪನಿ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.
ಕನ್ನಡದಲ್ಲಿ ಇಲಾಖೆ ತಂತ್ರಾಂಶ: ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ಇಲಾಖೆ ತಂತ್ರಾಂಶ ಸಂಪೂರ್ಣ ಕನ್ನಡ ಭಾಷೆಯಲ್ಲಿದೆ. ಇದು ಸಮೀಕ್ಷೆ ಕಾರ್ಯಕ್ಕೆ ಸಹಕಾರಿಯಾಗಿದೆ. ನಮೂನೆ-1 ಮತ್ತು 2ರಲ್ಲಿ ಡಿಸಿ ಆದೇಶದಂತೆ ಕಡ್ಡಾಯವಾಗಿ ಸಮೀಕ್ಷೆಗೆ ನೇಮಿಸಿದ ಮೂಲ ಕಾರ್ಯಕರ್ತರೇ ತಂತ್ರಾಂಶದಲ್ಲಿ ಭರ್ತಿ ಮಾಡಬೇಕು ಹಾಗೂ ಕ್ಷೇತ್ರ ಭೇಟಿಗೆ ಮೂಲ ಕಾರ್ಯಕರ್ತರೇ ಖುದ್ದು ಹಾಜರಾಗಬೇಕು. ಪ್ರಸಕ್ತ ವರ್ಷ ಏಐಸಿ ವಿಮಾ ಕಂಪನಿಯು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದು, ಆ ಕಂಪನಿ ಅಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ನೀಡಿ ಬೆಳೆ ಕಟಾವು ದಿನ ಅವರನ್ನು ಹಾಜರಿರುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಕೃಷಿ ಇಲಾಖೆಯಿಂದ ಬೆಳೆ ಕಟಾವಿಗೆ ಸಂಬಂಧಿಸಿದ ಕಿಟ್‌ಗಳನ್ನು ವಿತರಿಸಲಾಯಿತು. ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆಗಮಿಸಿ ಬೆಳೆ ಕಟಾವು ಕಾರ್ಯಕರ್ತರಿಗೆ ಬೆಳೆ ಕಟಾವು ಕಿಟ್ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.