ಬೇಡಿಕೆ ಈಡೇರಿಕೆಗೆ “ಅತಿಥಿ’ಗಳ ಬೆಳಗಾವಿ ಚಲೋ


Team Udayavani, Nov 15, 2018, 6:00 AM IST

suvarna-vidhana-soudha.jpg

ಕೊಪ್ಪಳ: ರಾಜ್ಯಾದ್ಯಂತ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ವೇದನೆ ಅರಣ್ಯ ರೋದನವಾಗಿದೆ. ಸರ್ಕಾರದ ನಡೆಗೆ ಬೇಸತ್ತು ಪ್ರಸಕ್ತ ಚಳಿಗಾಲ ಅಧಿವೇಶನದ ವೇಳೆ ಬೆಳಗಾವಿ ಚಲೋ ನಡೆಸಲು ಇವರು ಸಿದ್ಧರಾಗಿದ್ದಾರೆ.

ಹಿಂದಿನ ಯಾವುದೇ ಸರ್ಕಾರಗಳು ಅತಿಥಿ ಉಪನ್ಯಾಸಕರ ನೋವು ಆಲಿಸಿಲ್ಲ. ಸೇವೆ ಕಾಯಂ ಮಾಡಿಕೊಳ್ಳಲು ಕಾನೂನು ತೊಡಕಿದೆ ಎನ್ನುವ ಮಾತು ಹೇಳಿಕೊಂಡೇ ಎಲ್ಲ ಸರ್ಕಾರಗಳೂ ದಿನಗಳನ್ನು ಮುಂದೂಡುತ್ತ ಬಂದಿವೆ. ಸರ್ಕಾರಿ ಕಾಲೇಜುಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉಪನ್ಯಾಸಕರ ಜೀವನವೇ ಅತಂತ್ರವಾಗಿದೆ. ಸರ್ಕಾರವೂ ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ. ಇತ್ತ ಸಾವಿರಾರು ಉಪನ್ಯಾಸಕರ ವಯೋಮಿತಿಯೂ ಮುಗಿದು ಹೋಗಿದೆ. ಸರ್ಕಾರದ ಮೇಲೆ ನಂಬಿಕೆಯಿಡುತ್ತಲೇ ನಿರಂತರ ಹೋರಾಟ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಇಂದಿಗೂ ಸೇವಾ ಭದ್ರತೆಯ ಅಭದ್ರತೆ ಕಾಡುತ್ತಿದೆ.

ರಾಜ್ಯದಲ್ಲಿ ನೇಮಕಾತಿ ಹೊಂದಿದ ಉಪನ್ಯಾಸಕರಿಗಿಂತ ಅತಿಥಿ ಉಪನ್ಯಾಸಕರ ಸಂಖ್ಯೆಯೇ ಬಹುಪಾಲಿದೆ. ಅದೆಷ್ಟೋ ಕಾಲೇಜುಗಳಲ್ಲಿ ಇವರ ಸೇವೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ನೀತಿ ಪಾಠ ಹೇಳುವ ನಮಗೆ ಸೇವಾ ಭದ್ರತೆ ಕೊಡಿ ಎಂದು ಅತಿಥಿ ಉಪನ್ಯಾಸಕರು ನಿರಂತರ ಸರ್ಕಾರದ ಮುಂದೆ ಮಂಡಿಯೂರಿ ಬೇಡಿಕೊಳ್ಳುತ್ತಿದ್ದಾರೆ. ಆದರೆ, ಸರ್ಕಾರ ಇವರ ಬೇಡಿಕೆಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ.

ಜೆಡಿಎಸ್‌ ಪ್ರಣಾಳಿಕೆಯಲ್ಲಿ ಭರವಸೆ:
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಭರವಸೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರ ರಚನೆಯಾಗಿ ಐದು ತಿಂಗಳು ಪೂರೈಸುತ್ತಾ ಬಂದರೂ ಸ್ಪಷ್ಟ ಸಂದೇಶ ಮುಖ್ಯಮಂತ್ರಿ ಅವರಿಂದ ಸಿಗುತ್ತಿಲ್ಲ. ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳಿ ಎಂದು ಉಪನ್ಯಾಸಕರು ಸಿಎಂ ಮುಂದೆ ಗೋಗರೆದಾಗ ಭರವಸೆಯ ಮಾತನ್ನಾಡಿದ್ದಾರೆ. ಆದರೆ, ಇಲಾಖೆಯ ಹಂತದಲ್ಲಿ ಯಾವುದೇ ಸಭೆಗಳು ನಡೆದಿಲ್ಲ. ನಾವು ಹೊರಗಡೆ ಕೂಲಿ ಮಾಡಿದರೆ ತಿಂಗಳಿಗೆ 15 ಸಾವಿರದಷ್ಟು ಹಣ ಸಿಗುತ್ತೆ. ಆದರೆ, ಉಪನ್ಯಾಸಕ ಸ್ಥಾನದ ಹುದ್ದೆ ಅದಕ್ಕಿಂತಲೂ ಕಡೆಯಾಗಿದೆ. ಹೆಸರಿಗಷ್ಟೇ ಗೌರವ, ಆದರೆ ಉಪಜೀವನ ನಡೆಸೋದು ಕಷ್ಟವಾಗಿದೆ ಎನ್ನುತ್ತಿದ್ದಾರೆ ಅತಿಥಿ ಉಪನ್ಯಾಸಕರು.

ಯುಜಿಸಿ ನಿಯಮವೂ ಪಾಲನೆಯಿಲ್ಲ:
ರಾಜ್ಯ ಸರ್ಕಾರ ಯುಜಿಸಿ ನಿಯಮಾವಳಿಯನ್ನೂ ಪಾಲನೆ ಮಾಡುತ್ತಿಲ್ಲ. ಒಂದು ತರಗತಿಗೆ ಸಾವಿರ ರೂ.ವೇತನ ನೀಡಬೇಕು. ಕನಿಷ್ಟ ಒಂದು ತಿಂಗಳಿಗೆ ಅತಿಥಿ ಉಪನ್ಯಾಸಕನಿಗೆ 25 ಸಾವಿರ ರೂ. ವೇತನ ನೀಡಬೇಕೆಂದು ಯುಜಿಸಿ ನಿಯಮವೇ ಹೇಳುತ್ತಿದೆ. ಆದರೆ, ಸರ್ಕಾರ ಎಂಎ, ಎಂಫಿಲ್‌ ಪದವಿ ಪೂರೈಸಿದವರಿಗೆ 11,500 ರೂ.ಹಾಗೂ ಪಿಎಚ್‌ಡಿ, ನೆಟ್‌, ಸ್ಲೆಟ್‌ ಆದವರಿಗೆ 13 ಸಾವಿರ ರೂ.ನೀಡುತ್ತಿದೆ.

ನಾಲ್ಕು ತಿಂಗಳಿಂದ ವೇತನವಿಲ್ಲ
ಅತಿಥಿ ಉಪನ್ಯಾಸಕರನ್ನು ಸರ್ಕಾರ ಸೇವೆಗೆ ತೆಗೆದುಕೊಂಡು ನಾಲ್ಕು ತಿಂಗಳು ಗತಿಸಿವೆ. ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿಸಿಲ್ಲ. ಪ್ರಾದೇಶಿಕ ಕಚೇರಿಗಳ ಹಂತದಲ್ಲಿ ಇನ್ನೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆಯೇ ದೊರೆತಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ವೇತನವಿಲ್ಲದೇ ಉಪನ್ಯಾಸಕರು ಅವರಿವರ ಬಳಿ ಸಾಲ ಮಾಡಿ ಜೀವನ ನಡೆಸುವ ದು:ಸ್ಥಿತಿ ಬಂದೊದಗಿದೆ. ಇದಕ್ಕೆ ಬೇಸತ್ತು ಚಳಿಗಾಲದ ಅ ಧಿವೇಶನದ ವೇಳೆ ಬೆಳಗಾವಿ ಚಲೋ ನಡೆಸಿ ಮೈತ್ರಿ ಸರ್ಕಾರ ಎಚ್ಚರಿಸುವ ಕೆಲಸಕ್ಕೆ ಅಣಿಯಾಗುತ್ತಿದ್ದಾರೆ.

ಹಲವು ವರ್ಷದಿಂದ ನಾವು ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ನಮಗೆ ಸೇವಾ ಭದ್ರತೆ ಕೊಡುತ್ತೇವೆ ಎಂದು ಮೂರೂ ಪಕ್ಷದವರು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿದ್ದೇವೆ. ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳಾಗಿದ್ದರೂ ಭರವಸೆ ಈಡೇರುತ್ತಿಲ್ಲ. ಇದರಿಂದ ಬೇಸತ್ತು ಬೆಳಗಾವಿ ಚಲೋ ನಡೆಸಬೇಕೆಂದಿದ್ದೇವೆ.
– ಡಾ.ಎಚ್‌. ಸೋಮಶೇಖರ ಶಿವಮೊಗ್ಗಿ, ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ.

– ದತ್ತು ಕಮ್ಮಾರ 

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.