ಬಾಲ್ಯ ವಿವಾಹ ತಡೆಗಟ್ಟಲು ‘ಭಾಗ್ಯಲಕ್ಷ್ಮೀ’ ಸಹಕಾರಿ
ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ
Team Udayavani, Jun 29, 2019, 2:09 PM IST
ಯಲಬುರ್ಗಾ: ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಫಲಾನುಭವಿಗಳಿಗೆ ಶಾಸಕ ಹಾಲಪ್ಪ ಆಚಾರ್ ಭಾಗ್ಯಲಕ್ಮೀ್ಮ ಬಾಂಡ್ ವಿತರಿಸಿದರು.
ಯಲಬುರ್ಗಾ: ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಭ್ರೂಣ ಹತ್ಯೆ, ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.
ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಾಂಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳಾ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಇದು ಸಹಕಾರಿಯಾಗಿದೆ. ಲಿಂಗಾನುಪಾತ ಕಾಯ್ದುಕೊಳ್ಳಲು ಈ ಯೋಜನೆ ಮಹತ್ವದ್ದಾಗಿದೆ. ಬಡ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ ಅನ್ವಯವಾಗಲಿದೆ. ಕುಟುಂಬದಲ್ಲಿ ಮಕ್ಕಳ ಮಿತಿ ಇರುವುದರಿಂದ ಜನಸಂಖ್ಯೆ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಶೇ. 50ರಷ್ಟು ಇರುವುದರಿಂದ ಸರಕಾರ ಹಲವು ಯೋಜನೆ ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಪರಿವರ್ತನೆಯಾಗಿ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಸರಕಾರ ಮಹಿಳೆಯರಿಗಾಗಿ ವಿಶೇಷ ಯೋಜನೆ ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದರು.
ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಸೇರಿದಂತೆ ಹಲವರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಧಿಧೀಮಂತ ನಾಯಕರಾಗಿದ್ದಾರೆ. ರೈತ ನಾಯಕರಾಗಿ ಕೃಷಿಕರ, ಬಡವರ ನಾಡಿ ಮಿಡಿತಕ್ಕೆ ಅನುಗುಣವಾಗಿ ಒಳ್ಳೆಯ ಕಾರ್ಯಗಳನ್ನು ಕೈಗೊಂಡಿದ್ದರು. ಸಮಾಜದ ಎಲ್ಲಾ ವರ್ಗದವರನ್ನೂ ಅರ್ಥೈಸಿಕೊಂಡು ಮುನ್ನಡೆಸಿದ್ದರು ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಮ್ಮ ಕಾರನೂರು ಪ್ರಾಸ್ತವಿಕ ಮಾತನಾಡಿದರು. ಒಟ್ಟು 530 ಫಲಾನುಭವಿಗಳಿಗೆ ಬಾಂಡ್ ವಿತರಣೆ ಮಾಡಲಾಯಿತು.
ಜಿಪಂ ಸದಸ್ಯರಾದ ಗಂಗಮ್ಮ ಗುಳಗಣ್ಣನವರ, ಪ್ರೇಮಾ ಕುಡಗುಂಟಿ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಸದಸ್ಯರಾದ ಶರಣಪ್ಪ ಈಳಿಗೇರ, ರಾಮಚಂದ್ರ ಹೊಸಮನಿ, ಶಂಕರಗೌಡ ಬೇವೂರು, ಜಗನ್ನಾಥಗೌಡ ಪಾಟೀಲ, ದುರಗಮ್ಮ ಗಾದಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸಪಾಟೀಲ, ವೀರಣ್ಣ ಹುಬ್ಬಳ್ಳಿ, ಈರಪ್ಪ ಕುಡಗುಂಟಿ, ಹಂಚ್ಯಾಳಪ್ಪ ತಳವಾರ, ಶಿವಶಂಕರರಾವ್ ದೇಸಾಯಿ, ಶಕುಂತಲಾದೇವಿ ಪಾಟೀಲ, ಶಿವಲೀಲಾ ದಳವಾಯಿ, ತಹಶೀಲ್ದಾರ್ ರಮೇಶ ಅಳವಂಡಿಕರ್, ಡಿ. ಮೋಹನ್, ಶರಣಪ್ಪ ವಟಗಲ್, ಮಹೇಶ ನಿಡಶೇಷಿ, ಲಲಿತಾ ನಾಯಕ್, ಮಾಧವಿ ವೈದ್ಯ, ರಾಜೇಶ್ವರಿ, ನಜ್ಮಾಬೇಗಂ, ಹಾಲೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.