ಬಿಡಾಡಿ ದನಗಳ ಹಾವಳಿ; ವಾಹನ ಸವಾರರ ಪರದಾಟ
Team Udayavani, Dec 11, 2021, 3:30 PM IST
ಕಾರಟಗಿ: ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬಿಡಾಡಿ ದನಗಳ ಹಾವಳಿಮಿತಿಮೀರಿದ್ದು, ಎಲ್ಲೆಂದರಲ್ಲಿ ಗುಂಪುಗುಂಪಾಗಿ ಕಂಡುಬರುತ್ತಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅದರಲ್ಲೂ ದ್ವಿಚಕ್ರವಾಹನ ಸವಾರರ ಗೋಳು ಹೇಳತೀರದಾಗಿದೆ.
ತಾಲೂಕು ಕೇಂದ್ರವಾದ ಪಟ್ಟಣಕ್ಕೆ ವ್ಯಾಪಾರ-ವಹಿವಾಟಿಗಾಗಿ ನಿತ್ಯ ನೂರಾರು ಜನರು ಬರುತ್ತಾರೆ. ರಾಜ್ಯ ಹೆದ್ದಾರಿಯೂ ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳುಸಂಭವಿಸಿ ಹಲವಾರು ದ್ವಿಚಕ್ರವಾಹನ ಸವಾರರುಗಾಯಗೊಂಡಿದ್ದಾರೆ. ಈ ಕುರಿತುಎಚ್ಚರ ವಹಿಸಬೇಕಾದ ಪೊಲೀಸ್ ಇಲಾಖೆ ಮತ್ತು ಪುರಸಭೆ ನಿದ್ರೆಗೆ ಜಾರಿದ್ದು, ಬಿಡಾಡಿ ದನಗಳನ್ನು ನಿಯಂತ್ರಿಸುವವರು ಯಾರು ಎಂಬುದು ಸಾರ್ವಜನಿಕರ ಅಹವಾಲಾಗಿದೆ.
ಅಲ್ಲದೆ ಬೀದಿ ಬದಿಯ ಹೂವು-ಹಣ್ಣು ಸೇರಿದಂತೆ ಇತರೆದಿನಸಿ ವ್ಯಾಪಾರಿಗಳು ಕೂಡ ಬಿಡಾಡಿದನಗಳ ಹಾವಳಿಗೆ ತೀವ್ರ ಬೇಸತ್ತು ಹೋಗಿದ್ದಾರೆ.ವ್ಯಾಪಾರ ನಡೆಸುವುದೇ ದುಸ್ತರವಾಗಿದೆ. ಸ್ವಲ್ಪಯಾಮಾರಿದರೂ ತರಕಾರಿಗಳಿಗೆ ಬಾಯಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತವೆ. ನಿತ್ಯವೂ ತೊಂದರೆಅನುಭವಿಸುವಂತಾಗಿದೆ ಎಂಬುದು ತರಕಾರಿವ್ಯಾಪಾರಸ್ಥರ ಗೋಳಾಗಿದೆ. ಪೊಲೀಸ್ ಇಲಾಖೆಹಾಗೂ ಪುರಸಭೆ ಆಡಳಿತ ಈಗಲಾದರೂಎಚ್ಚೆತ್ತುಕೊಂಡು ಬಿಡಾಡಿ ದನಗಳ ಮಾಲೀಕರಿಗೆನೋಟಿಸ್ ಜಾರಿ ಮಾಡಿ ದನಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.