ಗಂಗಾವತಿ: ವಿವಾದಕ್ಕೆ ತಿರುಗಿದ ಬಿಪಿನ್ ರಾವತ್ ವೃತ್ತ; 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ

Team Udayavani, Dec 16, 2021, 10:27 PM IST

ಗಂಗಾವತಿ: ವಿವಾದಕ್ಕೆ ತಿರುಗಿದ ಬಿಪಿನ್ ರಾವತ್ ವೃತ್ತ; 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ

ಗಂಗಾವತಿ: ನಗರದ ಇಸ್ಲಾಂಪುರ ರಸ್ತೆಯಲ್ಲಿರುವ ವೃತ್ತವೊಂದಕ್ಕೆ ಇತ್ತೀಚೆಗೆ ನಿಧನರಾದ ಭಾರತೀಯ ಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಹೆಸರನ್ನು ನಾಮಕರಣ ಮಾಡಿ ವೃತ್ತ ಉದ್ಘಾಟನೆ ಮಾಡಲಾಗಿದೆ.

ಇದೀಗ ವೃತ್ತಕ್ಕೆ ನಾಮಕರಣ ಮಾಡಿದ ಬಗ್ಗೆ ವಿವಾದ ಉಂಟಾಗಿದ್ದು ಇಸ್ಲಾಂಪುರದ ಸ್ಥಳೀಯರು ನಾಮಫಲಕವನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.ಇದರಿಂದ ಇಸ್ಲಾಂಪುರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಸ್ಥಳಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ತಾಲೂಕಾ ಆಡಳಿತದ ಅಧಿಕಾರಿಗಳು ನಗರಸಭೆ ಅಧಿಕಾರಿಗಳು ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ .

ದೇಶಕ್ಕಾಗಿ ತಮ್ಮ ಜೀವನವನ್ನು ಹುತಾತ್ಮ ಗೊಳಿಸಿಕೊಂಡ ಬಿಪಿನ್ ರಾವತ್ ಅವರ ಹೆಸರಿನಲ್ಲಿ ಇಸ್ಲಾಂಪುರದ ರಸ್ತೆಯ ವೃತ್ತದಲ್ಲಿ ನಾಮಫಲಕ ಅಳವಡಿಸಿ ವೃತ್ತ ಎಂದು ಉದ್ಘಾಟಿಸಲಾಗಿದೆ.ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಬಿಪಿನ್ ರಾವತ್ ದೇಶಭಕ್ತರಾಗಿದ್ದು ಅವರನ್ನು ಸರ್ವಜನರು ಸ್ಮರಿಸಬೇಕು ಆದ್ದರಿಂದ ಯುವಜನರಿಗೆ ಸ್ಫೂರ್ತಿ ಆಗಲೆಂದು ವೃತ್ತ ನಾಮಕರಣ ಮಾಡಲಾಗಿದೆ ಆದ್ದರಿಂದ ಇದನ್ನು ತೆರವುಗೊಳಿಸುವ ಪ್ರಶ್ನೆನೇ ಇಲ್ಲ ಈ ಹಿಂದೆ ಆಡಳಿತ ನಡೆಸಿದವರು ನಗರದಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ವೃತ್ತಗಳ ನಿರ್ಮಾಣ ಮಾಡಿದ್ದಾರೆ ಇದೀಗ ಯಾಕೆಬಖ್ಯಾತೆ ತೆಗೆದಿದ್ದಾರೆ . ಈ ದೇಶದಲ್ಲಿರುವ ಪ್ರತಿಯೊಬ್ಬರೂ ಸೇನೆಯನ್ನ ಜನರನ್ನ ಪ್ರೀತಿ ಮಾಡಬೇಕು ರಾಜಕೀಯ ಕಾರಣಕ್ಕಾಗಿ ಯಾರನ್ನೂ ಟೀಕಿಸಬಾರದು.ಚುನಾಯಿತ ಜನಪ್ರತಿನಿಧಿ ಅಲ್ಲದವರ ಜೊತೆ ವಕ್ಫ್ ಇಲಾಖೆಯ ವಾಣಿಜ್ಯ ಮಳಿಗೆಗಳನ್ನು ಉದ್ಘಾಟನೆ ಮಾಡಿಸುವ ಮುಖಂಡರು ದೇಶಭಕ್ತ ಬಿಪಿನ್ ರಾವತ್ ವೃತ್ತ ನಾಮಫಲಕ ಉದ್ಘಾಟನೆಗೆ  ಯಾಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಪೊಲೀಸರು ಇಂಥ ಸಂಘರ್ಷ ಮತ್ತು ಗೊಂದಲ ಉಂಟು ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಶಾಂತಿ ಕಾಪಾಡುವಂತೆ   ಶಾಸಕ ಪರಣ್ಣ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ವೃತ್ತ ನಾಮಫಲಕ ತೆರವಿಗೆ ಆಗ್ರಹ : ಈ ಹಿಂದೆ ಸ್ಥಳೀಯರು 2015ರಲ್ಲಿ ನಗರಸಭೆಯಲ್ಲಿ ಇಸ್ಲಾಂಪುರ್ ರಸ್ತೆಯಲ್ಲಿರುವ ವೃತ್ತಕ್ಕೆ ಇಸ್ಲಾಂಪುರ ವೃತ್ತ ಎಂದು ನಾಮಕರಣ ಮಾಡಲು  ಮನವಿ ಸಲ್ಲಿಸಿದ್ದರೂ ಆಗ ನಗರಸಭೆ ಪರವಾನಗಿ ನೀಡಿದೆ ಈಗ ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಬಿಪಿನ್ ರಾವತ್ ಅವರ ಹೆಸರನ್ನು ಇಲ್ಲಿ ನಾಮಕರಣ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ ಇದು ಸರಿಯಲ್ಲ ಬಿಪಿನ್ ರಾವತ್ ಹೆಸರಿನಲ್ಲಿ ಬೃಹತ್ ವೃತ್ತ ನಿರ್ಮಾಣ ಮಾಡಲು ಎಲ್ಲರೂ ಸಹಕಾರ ನೀಡುತ್ತೇವೆ ಈಗ ಹಾಕಿರುವ ನಾವು ನಾಮಫಲಕವನ್ನು ತೆರವುಗೊಳಿಸುವಂತೆ ನಗರಸಭೆ ಸದಸ್ಯ ಶ್ಯಾಮೀದ್ ಮನಿಯಾರ್ ಒತ್ತಾಯಿಸಿದ್ದಾರೆ .

ನಿಷೇಧಾಜ್ಞೆ ಜಾರಿ : ಬಿಪಿನ್ ರಾವತ್ ವೃತ್ತ ನಿರ್ಮಾಣ ನಾಮಫಲಕ ಅಳವಡಿಕೆ ಮಾಡಿರುವ ಕುರಿತು ಇಸ್ಲಾಂಪುರದಲ್ಲಿ ವಿವಾದ ಉಂಟಾಗಿದ್ದು ಶಾಂತಿಯನ್ನು ಕಾಪಾಡಲು ತಾಲೂಕು ಆಡಳಿತ ಇಸ್ಲಾಂಪುರಕ್ಕೆ ಸೀಮಿತಗೊಳಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ 4 ಜನರಿಗೂ ಹೆಚ್ಚು ಜನ ಸೇರಿ  ಗುಂಪುಗೂಡಿ ತಿರುಗಾಡಬಾರದು ಯಾವುದೇ ಕಾರ್ಯಕ್ರಮಗಳನ್ನ ಪ್ರತಿಭಟನೆಯನ್ನು ಮಾಡದಂತೆ ಸೂಚನೆ ನೀಡಲಾಗಿದೆ .ಇಲ್ಲಿಯ ಪ್ರತಿಯೊಂದು ಘಟನೆಗಳನ್ನು ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದು ತಹಸೀಲ್ದಾರ್ ಯು .ನಾಗರಾಜ ಉದಯವಾಣಿಗೆ ತಿಳಿಸಿದ್ದಾರೆ .

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.