ಬಿಜೆಪಿಯಿಂದ ಅಭಿವೃದ್ಧಿ ಅಸಾಧ್ಯ: ತಂಗಡಗಿ


Team Udayavani, Apr 14, 2019, 4:48 PM IST

Udayavani Kannada Newspaper
ಕೊಪ್ಪಳ: ಬಿಜೆಪಿ ಐದು ವರ್ಷಗಳಿಂದಲೂ ಬರಿ ಸುಳ್ಳು ಹೇಳಿಕೊಂಡೇ ಬಂದಿದೆ. ಖಾತೆಗೆ 15 ಲಕ್ಷ ಹಣ ಹಾಕ್ತಿವಿ ಅಂದ್ರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದ್ರು, ರೈತರ ಆದಾಯ ದ್ವಿಗುಣ ಮಾಡುತ್ತೇವೆ ಅಂದ್ರು ಈ ಮೂರು ಪ್ರಶ್ನೆಗಳ ಬಗ್ಗೆ ಮೊದಲು ಉತ್ತರಿಸಲಿ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಬಿಜೆಪಿ ನಾಯಕರಿಗೆ ಸವಾಲ್‌ ಹಾಕಿದ್ದಾರೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಗಂಗಾವತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಬರಿ ಭಾಷಣ ಮಾಡಿದರು. ಮೋದಿ ಸೇರಿ ಬಿಜೆಪಿ ನಾಯಕರಿಗೆ ನಾವು ಮೂರು ಪ್ರಶ್ನೆ ಹಾಕಿದ್ದೆವು. ಇದಕ್ಕೆ ಮೋದಿ ಸೇರಿ ಬಿಜೆಪಿ ಅಭ್ಯರ್ಥಿಗಳು ಉತ್ತರಿಸಲಿ ಎಂದಿದ್ದೆ. ಯಾರೂ ಉತ್ತರಿಸಿಲ್ಲ. ಬರಿ ಮೋದಿ.. ಮೋದಿ.. ಎಂದು ಯುವಕರು ಕೂಗೂವ ಉದ್ಯೋಗ ಸೃಷ್ಟಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರಲ್ಲದೇ, ರೈತರ ಆದಾಯ ದ್ವಿಗುಣಗೊಳಿಸುವ ಕುರಿತು ಬಿಜೆಪಿ ಹೇಳಿಕೊಂಡಿತ್ತು. ಎಲ್ಲಿ ರೈತರಿಗೆ ಆದಾಯ ದ್ವಿಗುಣಗೊಳಿಸಿದ ಕುರಿತು ತೋರಿಸಿ ಎನ್ನುವ ಮಾತನ್ನಾಡಿದರು.
ಮೋದಿ ಬರಿ ಭಾಷಣಕ್ಕೆ ಮತ್ತು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಈ ಮೂರು ಪ್ರಶ್ನೆಗೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದರಲ್ಲದೇ, ಸಂಗಣ್ಣ ಕರಡಿ ಅವರನ್ನು ಸೋಲಿಸಲು ಗಂಗಾವತಿಗೆ ಮೋದಿ ಬಂದಿದ್ದಾರೆ. ಅವರಿಂದ ಅಭಿವೃದ್ಧಿ ಏನೂ ಆಗಿಲ್ಲ. ಮೋದಿ ಭಾಷಣದಲ್ಲಿ ಅಭಿವೃದ್ಧಿಯ ಬಗ್ಗೆ ಏನೂ ಮಾತನಾಡಲಿಲ್ಲ. ನಾವು ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿದ್ದರು. ದಾಖಲೆಗಳೇ ಹೇಳುತ್ತವೆ. ಅವರು ದಾಖಲೆ ತೋರಿಸಲಿ ಇಲ್ಲವೇ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಾದರೂ ಹೇಳಲಿ ಎಂದರು. ಗಂಗಾವತಿಯಲ್ಲಿ ಮೋದಿ ಮೈತ್ರಿ ಸರ್ಕಾರವನ್ನು 20 ಪರ್ಸೆಂಟೇಜ್‌ ಸರ್ಕಾರ ಎಂದು ಜರಿದಿದ್ದಾರೆ. ಭವಿಷ್ಯ ಗಂಗಾವತಿ ಮತ್ತು ಕನಕಗಿರಿ ತಾಲೂಕಿನ ಬಿಜೆಪಿ ಶಾಸಕರು ಸೇರಿ 20 ಪರ್ಸೆಂಟ್‌ ಇರಬೇಕೆಂದು ಲೇವಡಿ ಮಾಡಿದರು.
ಸಂಗಣ್ಣ ಕರಡಿ ಐದು ವರ್ಷ ಸಂಸದರಾಗಿ ಕೆಲಸ ಮಾಡಿದ್ದಾರೆ. ನಮ್ಮಲ್ಲಿನ ರೈಸ್‌ ಪಾರ್ಕ್‌ಗೆ ಹಣ ತಂದಿದ್ದಾರಾ? ರೈತರ ಖಾತೆಗೆ 6 ಸಾವಿರ ಹಣ ಹಾಕುತ್ತೇವೆ ಎಂದಿದ್ದರು. ಈವರೆಗೂ ರೈತರಿಗೆ ಹಣ ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಕನಕಗಿರಿ ಭಾಗದಲ್ಲಿ ಸಿಂಗಪೂರು ಸೇತುವೆ ನಿರ್ಮಾಣದ ಬಗ್ಗೆ ಕರಡಿ ಮಾತನಾಡುತ್ತಿದ್ದಾರೆ. ಎಲ್ಲಿ ಕೆಲಸವಾಗಿದೆ ಎಂದು ನಮಗೆ ತಿಳಿಯುತ್ತಿಲ್ಲ. ಯಾವ ಸೇತುವೆ ಎಂದೂ ಕಾಣುತ್ತಿಲ್ಲ. ಯಾವ ಅನುದಾನ ಯಾವ ಖಾತೆಯಿಂದ ಬಂದಿದೆ ಎನ್ನುವ ಮಾಹಿತಿ, ಆದೇಶ ಪ್ರತಿಯನ್ನಾದರೂ ಕೊಡಲಿ ನೋಡೋಣ ಎಂದರು.
ಸಿಎಂ ಹೇಳಿಕೆ ತರವಲ್ಲ: ದೇಶದ ಸೈನಿಕರ ಬಗ್ಗೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಯಾರೂ ಸಹಿತ ಹಗುರವಾಗಿ
ಮಾತನಾಡುವುದು ತರವಲ್ಲ. ಯಾರೇ ಮಾತನಾಡಿದರೂ ಅದು ತಪ್ಪು. ಸೈನಿಕರು ದೇಶದ ಗಡಿ ಕಾಯ್ತಾರೆ.
ಅವರನ್ನು ಮುಂದಿಟ್ಟು ರಾಜಕಾರಣ ಮಾಡುವುದು ತರವಲ್ಲ ಎಂದರಲ್ಲದೇ, ಮೋದಿ ಸರ್ಜಿಕಲ್‌ ಸ್ಟ್ರೈಕ್‌ನ್ನು ಚುನಾವಣೆಗೆ ಬಳಕೆ ಮಾಡುತ್ತಿದ್ದಾರೆ. ಯೋಧರ ಮೇಲೆ ಭಯೋತ್ಪಾದಕರು ದಾಳಿ ಮಾಡುವ ಮುನ್ನ ಕೇಂದ್ರದ ಗುಪ್ತಚರಕ್ಕೆ ಮಾಹಿತಿ ಗೊತ್ತಾಗಲಿಲ್ಲವೇ? ಹಾಗಾದರೆ ಗುಪ್ತದಳ ಏನು ಕೆಲಸ ಮಾಡುತ್ತಿತ್ತು? ಕೇಂದ್ರಕ್ಕೆ ಇದರ ಬಗ್ಗೆ ಜವಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರಲ್ಲದೇ, ಮೋದಿ ಗೆಲ್ಲಬೇಕು ಅಂತಾರೆ ಆದರೆ ಮೋದಿ ಏನು ಸಾಧನೆ ಮಾಡಿದ್ದಾರೆ ತೋರಿಸಲಿ. ಏ. 19ಕ್ಕೆ ಸಿಂಧನೂರು, ಸಿರಗುಪ್ಪಾ, ಕನಕಗಿರಿ ಭಾಗಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸುವ ನಿರೀಕ್ಷೆಯಿದೆ. ದಿನಾಂಕ ನಿದಗಿಯಾಗಿಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಕೃಷ್ಣಾ ಇಟ್ಟಂಗಿ, ಮುತ್ತು ಕುಷ್ಟಗಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.