ಎಂಬಿಪಿ ವಿರುದ್ಧ ಬಿಜೆಪಿ ಪ್ರತಿಭಟನೆ
ಗೃಹ ಸಚಿವರಿಂದ ಪ್ರಜಾತಂತ್ರ ಹತ್ತಿಕ್ಕುವ ಕೆಲಸ•ರಾಜ್ಯದಲ್ಲಿ ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ
Team Udayavani, May 7, 2019, 1:14 PM IST
ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಹಾಗೂ ದಬ್ಟಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಜಿಲ್ಲಾ ಘಟಕದ ಮುಖಂಡರು ಪ್ರತಿಭಟನೆ ನಡೆಸಿದರು.
ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಪತ್ರಕರ್ತರ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಮಟ್ಟದ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಮೈತ್ರಿ ಸರ್ಕಾರದಲ್ಲಿನ ಹಲವು ಶಾಸಕರು, ಮುಖಂಡರು ಮಾಧ್ಯಮ ಕ್ಷೇತ್ರ ಸೇರಿದಂತೆ ಕೆಲವು ವ್ಯಕ್ತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಶಾಸಕ ನಾರಾಯಣಗೌಡ ನಟ ಯಶ್, ದರ್ಶನ ಅವರಿಗೆ ಬೆದರಿಕೆ ಹಾಕಿದ್ದು, ಬೇಳೂರು ಗೋಪಾಲಕೃಷ್ಣ ಮೋದಿ ಹತ್ಯೆ ಮಾಡುವ ಮಾತನ್ನಾಡಿದ್ದು ಸೇರಿದಂತೆ ಹಲವು ಪ್ರಕರಣಗಳ ಕುರಿತು ಬಿಜೆಪಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೂ ಮೈತ್ರಿ ಸರ್ಕಾರಕ್ಕೆ ಮಾಧ್ಯಮ ಕ್ಷೇತ್ರ ಸಿಂಹ ಸ್ವಪ್ನವಾಗಿದೆ. ರಾಜ್ಯ ಸರ್ಕಾರದ ಕುರಿತು ದಿನಕ್ಕೊಂದು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸಿಎಂ ಹಗುರವಾಗಿ ಮಾತನಾಡುತ್ತಿದ್ದಾರೆ. ಬಹಿಷ್ಕಾರ ಮಾಡುತ್ತಿದ್ದಾರೆ. ಇನ್ನೂ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪತ್ರಕರ್ತರನ್ನು ಉದ್ದೇಶ ಪೂರ್ವಕವಾಗಿ ಬಂಧಿಸಿ ಕ್ರಮಕೈಗೊಳ್ಳಲು ಮುಂದಾಗುತ್ತಿದ್ದಾರೆ. ಅವರ ದಬ್ಟಾಳಿಕೆ ಮಿತಿ ಮೀರಿದೆ. ಸ್ವಾತಂತ್ರ್ಯ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಬಿಜೆಪಿ ಮುಖಂಡರಾದ ಗವಿಸಿದ್ದಪ್ಪ ಕರಡಿ, ಚಂದ್ರು ಕವಲೂರು, ಶ್ರೀನಿವಾಸ ಪೂಜಾರ, ಗಿರಿಶಾನಂದ ಜ್ಞಾನಸುಂದರ್ ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
MUST WATCH
ಹೊಸ ಸೇರ್ಪಡೆ
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.