ಸೋರುತಿಹುದು ಬ್ರಿಡ್ಜ್ ಕಂ ಬ್ಯಾರೇಜ್‌

•ಹೊಸ ಸೇತುವೆ ಕಟ್ಟಿದ್ದಾರೆನ್ನುವ ಖುಷಿ ಮಾಯ•ಗೇಟ್‌ಗಳ ಮೂಲಕ ಹರಿದು ಹೋಗುತ್ತಿದೆ ನೀರು

Team Udayavani, Jul 19, 2019, 10:22 AM IST

kopala-tdy-1..

ಕೊಪ್ಪಳ: ತಾಲೂಕಿನ ಬೋಚನಹಳ್ಳಿ ಸಮೀಪದಲ್ಲಿ ಇತ್ತೀಚೆಗೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆಯಾದರೂ ಮಳೆ ನೀರು ನಿಲ್ಲುತ್ತಿಲ್ಲವಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಹಳ್ಳಕ್ಕೆ ನೀರು ಹರಿದು ಬಂದಿದ್ದು, ಗೇಟ್‌ಗಳ ಮಧ್ಯದಲ್ಲಿ ಅಧಿಕ ನೀರು ವ್ಯರ್ಥವಾಗಿ ಸೋರಿಕೆಯಾಗುತ್ತಿದೆ. ಹೊಸ ಸೇತುವೆ ಕಟ್ಟಿದ್ದಾರೆ ಎನ್ನುವ ಖುಷಿ ರೈತರಿಗೆ ಕೆಲವೇ ದಿನಗಳಲ್ಲಿ ಮಾಯವಾಗಿದೆ.

ಅಂದಾಜು 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಡಿ ಬ್ರಿಡ್ಜ್ ಈ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಬೋಚನಹಳ್ಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಳವಂಡಿ ಹಳ್ಳದಿಂದ ನೀರು ಹರಿದು ಬಂದಿದ್ದು, 18 ಗೇಟ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆಯಾಗುತ್ತಿದೆ. ಈ ಬಗ್ಗೆ ಯಾರೊಬ್ಬರೂ ಗಮನ ಹರಿಸುತ್ತಿಲ್ಲ.

ಈ ಹಳ್ಳದಲ್ಲಿ ನೀರು ಸುತ್ತಲಿನ ನೂರಾರು ರೈತರಿಗೆ ಆಸರೆಯಾಗಿದೆ. ಬೋಚನಹಳ್ಳಿಯ ಶೇ.90 ರೈತರು ಇದೇ ಹಳ್ಳವನ್ನು ಆಶ್ರಯಿಸಿದ್ದು, ನೀರಾವರಿ ಸೌಲಭ್ಯ ಪಡೆಯುತ್ತಾರೆ. ಇದೇ ನೀರಿನಿಂದ ಎಲ್ಲರ ಬೋರ್‌ವೆಲ್ಗಳು ಪುನಃ ನೀರು ತುಂಬಿಕೊಂಡು ರೀಚಾರ್ಜ್‌ ಆಗಲಿವೆ. ಆದರೆ ಹೊಸ ಸೇತುವೆ ಕಟ್ಟಿದರೂ ವ್ಯರ್ಥ ಎನ್ನುವಂತಾಗಿದೆ. ಗೇಟ್‌ಗಳ ಮೂಲಕ ನೀರು ನಿತ್ಯವೂ ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಸರ್ಕಾರ ರೈತರ ಅನುಕೂಲಕ್ಕಾಗಿ ಹಳ್ಳಗಳಿಗೆ ಸೇತುವೆ ನಿರ್ಮಿಸುತ್ತಿದೆ. ಆದರೆ ಗುತ್ತಿಗೆದಾರರ ಕಳಪೆ ಕೆಲಸದಿಂದ ಹೊಸ ಸೇತುವೆ ಕಟ್ಟಿದರೂ ವ್ಯರ್ಥ ಎನ್ನುವಂತಾಗಿದೆ. ಗೇಟ್‌ಗಳ ಮೂಲಕ ನೀರು ನಿತ್ಯವೂ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಸೇತುವೆ ಎರಡೂ ಬದಿಯಲ್ಲಿ ಕಲ್ಲು ಹಾಕಲಾಗಿದೆ. ಆದರೆ ಯರೆ ಮಣ್ಣಿನಲ್ಲಿಯೇ ಆ ಕಲ್ಲುಗಳನ್ನು ಇಟ್ಟಿದ್ದರಿಂದ ಅದು ಕುಸಿಯುತ್ತಿದೆ. ಕನಿಷ್ಟ ಪಕ್ಷ ಕೆಂಪು ಮಣ್ಣು ಹಾಕಿ ಗಟ್ಟಿಗೊಳಿಸಿ ಪುಡಿ ಕಲ್ಲುಗಳನ್ನು ಹಾಕಬೇಕಿತ್ತು. ಮಳೆ ನೀರಿನಿಂದ ಆ ತಡೆಗೋಡೆ ನೆನೆದು ಕುಸಿಯುತ್ತಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು, ಗುತ್ತಿಗೆದಾರರು ಈ ಕೂಡಲೇ ಸಮಸ್ಯೆ ಆಲಿಸಿ ರೈತರ ಅನುಕೂಲಕ್ಕಾಗಿ ನಿರ್ಮಿಸಿರುವ ಬ್ರಿಜ್ಡ್ ಕಂ ಬ್ಯಾರೇಜ್‌ ಅನ್ನು ಪುನಃ ದುರಸ್ತಿ ಮಾಡಿಸಿ ನೀರು ನಿಲ್ಲುವಂತೆ ಮಾಡಿ ರೈತರ ಬಾಳಿಗೆ ಬೆಳಕಾಗಬೇಕಿದೆ.

•ಸರ್ಕಾರದ ಪ್ರಯತ್ನ ವ್ಯರ್ಥ

•ಹಾಕಿದ ತಡೆಗೋಡೆಯೂ ನೆನೆದು ಕುಸಿಯುತ್ತಿದೆ

•ದುರಸ್ತಿ ಮಾಡಿಸಿ ನೀರು ನಿಲ್ಲುವಂತೆ ಮಾಡಬೇಕಿದೆ

ನಮ್ಮ ಗ್ರಾಮ ಸಮೀಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ಅನ್ನು ನಿರ್ಮಿಸಲಾಗಿದೆ. ಇತ್ತೀಚೆಗೆ ಮಳೆ ಬಂದು ನೀರು ಸಂಗ್ರಹವಾಗಿದೆ. ಆದರೆ ಸಂಗ್ರಹಗೊಂಡ ನೀರೆಲ್ಲ ಗೇಟ್‌ಗಳ ಮೂಲಕ ಸೋರಿಕೆಯಾಗಿ ಹರಿದು ಹೋಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಹೆಚ್ಚು ಗಮನ ಹರಿಸಿ ಹರಿದು ಹೋಗುವ ನೀರು ಉಳಿಸಿಕೊಳ್ಳಬೇಕಿದೆ.•ಕುಳಳ್ಳೆಪ್ಪ ಹುಲಕೋಟಿ,ಗ್ರಾಮಸ್ಥ

ಬೋಚನಹಳ್ಳಿ ಸಮೀಪದ ಸೇತುವೆ ನಮ್ಮ ಇಂಜಿನಿಯರ್‌ಗಳ ಎಡವಟ್ಟಿನಿಂದ ಕೆಲ ತಾಂತ್ರಿಕ ತೊಂದರೆಯಾಗಿದೆ. 2 ಕೋಟಿ ರೂ.ಗಳಿಗೆ ಟೆಂಡರ್‌ ಕರೆಯಲಾಗಿತ್ತು. ಅಷ್ಟು ಕಾಮಗಾರಿ ಮಾಡಿದೆ. ಇನ್ನೂ 2 ಕೋಟಿ ಅವಶ್ಯಕತೆಯಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಬೋಚನಹಳ್ಳಿ ಸ್ಥಳಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವೆ.•ಬಿ.ಟಿ.ಮೋಹನ, ಸಣ್ಣ ನೀರಾವರಿ ಇಲಾಖೆ ಅಭಿಯಂತರ ಕೊಪ್ಪಳ

 

•ದತ್ತು ಕಮ್ಮಾರ

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.