Gangavati: ನಿಯಮ ಉಲ್ಲಂಘಿಸಿದ ರಸಗೊಬ್ಬರ ಅಂಗಡಿಗಳ ಪರವಾನಿಗೆ ರದ್ದು
Team Udayavani, Apr 20, 2023, 7:40 PM IST
ಗಂಗಾವತಿ: ಕೃಷಿ ಇಲಾಖೆಯ ನಿಯಮ ಉಲ್ಲಂಘಿಸಿದ ನಗರದ ಶ್ರೀದೀಪ್ ಟ್ರೇಡಿಂಗ್ ಕಂಪನಿ ಹಾಗೂ ಶ್ರೀ ಸಂದೀಪ್ ಆಗ್ರೋ ಏಜೆನ್ಸಿ ಚಿಲ್ಲರೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಗೊಳಿಸಿ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲು ಆದೇಶ ಹೊರಡಿಸಿದ್ದಾರೆ.
ಕೃಷಿ ಇಲಾಖೆಯಿಂದ ಒಬ್ಬ ವ್ಯಕ್ತಿ ಅರ್ಹತಾ ಪ್ರಮಾಣ ಸಲ್ಲಿಸಿ ವಿವಿಧಡೆ ಚಿಲ್ಲರೆ ರಸಗೊಬ್ಬರ ಮಾರಾಟ ಪರವಾನಿಗೆ ಪಡೆದು ನಿಯಮ ಉಲ್ಲಂಘನೆ ಕುರಿತು ಕಾರಣ ಕೇಳುವ ನೋಟಿಸ್‌ಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ನಗರದ ಶ್ರೀದೀಪ್ ಟ್ರೇಡಿಂಗ್ ಕಂಪನಿ ಹಾಗೂ ಶ್ರೀ ಸಂದೀಪ್ ಆಗ್ರೋ ಏಜೆನ್ಸಿ ಎಂಬ ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲಿನೆ ಸೂಕ್ತ ಸಮಜಾಯಿಸಿ ಇಲ್ಲದ ಕಾರಣ ಎರಡು ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಲಾಗಿದೆ. ರಸಗೊಬ್ಬರ ನಿಯಂತ್ರ ಆದೇಶ, ೧೯೮೫ ರ ನಿಯಮ ೩೧ರ ಅನ್ವಯ ಸದರಿ ಚಿಲ್ಲರೆ ರಸಗೊಬ್ಬರ ಅಂಗಡಿಗಳ ಪರವಾನಿಗೆ ರದ್ದುಗೊಳಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲು ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: IPL ಸಿರಾಜ್ ಬಿಗು ದಾಳಿ; ಪಂಜಾಬ್ ವಿರುದ್ಧ ಜಯದ ನಗೆ ಬೀರಿದ ಕೊಹ್ಲಿ ಬಳಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.