ಸಂಭ್ರಮದ ತಿಂಥಣಿ ಮೌನೇಶ್ವರ ಜಾತ್ರೆ
Team Udayavani, May 20, 2019, 4:17 PM IST
ನಾರಾಯಣಪುರ: ಜಗದ್ಗುರು ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯೂ ಪುರವಂತರ ಸೇವೆಯೊಂದಿಗೆ, ಮಂಗಲ ವಾದ್ಯ ಮೇಳಗಳೊಟ್ಟಿಗೆ ಶನಿವಾರ ಸಂಭ್ರಮದಿಂದ ಜರುಗಿತು.
ಪಲ್ಲಕ್ಕಿ ಉತ್ಸವ ಮುನ್ನಾ ದಿನವಾದ ಶುಕ್ರವಾರ ಗುಹಾ ದೇವಾಲಯದಲ್ಲಿರುವ ದೇವರ ಉತ್ಸವ ಮೂರ್ತಿಗಳನ್ನು ಹಾಗೂ ಪೂಜಾ ಸಾಮಗ್ರಿಗಳನ್ನು ಹೊರ ತೆಗೆದು ಸಕಲ ವಾದ್ಯ ಮೇಳಗಳೊಂದಿಗೆ ಕೃಷ್ಣಾ ನದಿ ತೀರಕ್ಕೆ ತೆರಳಿ ಗಂಗಾ ಪೂಜೆಯನ್ನು ನೆರವೇರಿಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಅಹೋರಾತ್ರಿ ಭಜನೆ ನಡೆಸಲಾಯಿತು.
ವಿಶೇಷ ಜೋಡು ಪಲ್ಲಕ್ಕಿ ಉತ್ಸವ: ಶನಿವಾರ ಬೆಳಗ್ಗೆ ಶ್ರೀ ಮೌನೇಶ್ವರರ ಹಾಗೂ ವೀರಭದ್ರದೇವರ ಉತ್ಸವ ಮೂರ್ತಿ ಹಾಗೂ ಪೂಜಾ ಸಾಮಗ್ರಿಗಳನ್ನು ಹೊತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಗೆ ದೇವಸ್ಥಾನದಿಂದ ಚಾಲನೆ ದೊರೆಯಿತು. ಮೆರವಣಿಗೆ ಪಟ್ಟಣದ ಮಹರ್ಷಿ ವಾಲ್ಮೀಕಿ ವೃತ್ತ ಮಾರ್ಗದಿಂದ ಬಂಡೆಗುಡ್ಡ ಕ್ಯಾಂಪ್, ಕೆಬಿಜೆಎನ್ನೆಲ್ ವಸತಿ ಗೃಹದ ಮಾರ್ಗವಾಗಿ ಆಗಮಿಸಿ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ತಲುಪಿತು. ರಾತ್ರಿಯೇ ದೇವರುಗಳ ಪೂಜಾ ಸಾಮಗ್ರಿಗಳನ್ನು ಗುಹಾದೇವಾಲಯದಲ್ಲಿ ಪುನಃ ಪ್ರವೇಶವಾಗುವ ಮೂಲಕ ಜಾತ್ರೆಯೂ ಮಂಗಲೋತ್ಸವಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ದೇವತೆ ದುರ್ಗಾದೇವಿಗೆ ಉಡಿ ತುಂಬಲಾಯಿತು. ಗ್ರಾಮದ ಮಹಿಳೆಯರು ಇಷ್ಟ ದೇವರಾದ ತಿಂಥಣಿ ಮೌನೇಶ್ವರ ಹಾಗೂ ಶ್ರೀ ವೀರಭದ್ರ ದೇವರುಗಳ ದರ್ಶನ ಪಡೆದು ಕಾಯಿ ಕರ್ಪೂರ, ನೈವೇದ್ಯ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ದೈವ ಮಂಡಳಿಯಿಂದ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ಭಕ್ತಿ ಭಾವದಿ, ವೀರಾವೇಶದಿಂದ ಪುರವಂತರ ಸೇವೆಯ ಪ್ರದರ್ಶನ ನೋಡುಗರ ಮಂತ್ರ ಮುಗ್ದರನ್ನಾಗಿಸಿತು. ಮೆರವಣಿಗೆಯಲ್ಲಿ ಯುವಕರು ತಿಂಥಣಿ ಮೌನೇಶ್ವರ ಮಹಾರಾಜಕೀ, ಶ್ರೀ ವೀರಭದ್ರದೇವರ ಹೆಸರಲ್ಲಿ ಜಯಘೋಷಗಳನ್ನು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.