ಬಾಲ್ಯವಿವಾಹ ಸಾಮಾಜಿಕ ಪಿಡುಗು


Team Udayavani, Feb 4, 2020, 3:57 PM IST

kopala-tdy-1

ಯಲಬುರ್ಗಾ: ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಕಠಿಣ ಕಾನೂನುಗಳು ಇದ್ದರೂ ಬಾಲ್ಯ ವಿವಾಹ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಕಾಯ್ದೆ ಉದ್ದೇಶ ಸಫಲವಾಗಬೇಕಾದರೆ ಸಾಮಾಜಿಕ ಅರಿವು ಅಗತ್ಯ ಎಂದು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶರಣಮ್ಮ ಕಾರನೂರು ಹೇಳಿದರು.

ಪಟ್ಟಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಹಾಗೂ ರೋಣ ಸಮನ್ವಯ ಕಲಾ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬಾಲ್ಯ ವಿವಾಹ ನಿಷೇಧ ಹಾಗೂ ಇಲಾಖೆಯ ವಿವಿಧ ಕಾರ್ಯಕ್ರಮಗಳ ಜಾಗೃತಿ ಬೀದಿ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯವಿವಾಹ ಎಂಬುದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಅಪ್ರಾಪ್ತ ವಯಸ್ಸಿನ ಮಕ್ಕಳು ಇದರಿಂದ ಪರದಾಡುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಅಪ್ರಾಪ್ತ ವಯಸ್ಸಿನ ಮಕ್ಕಳು ಹಸಿ ಮಡಕೆ ಇದ್ದ ಹಾಗೆ. ಈ ಹಸಿ ಮಡಕೆಗೆ ನೀರು ತುಂಬಿದರೆ ಹೇಗೆ ಒಡೆಯುತ್ತದೆಯೋ ಅದೇ ರೀತಿ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡುವ ನಿಮ್ಮ ಮಕ್ಕಳ ಭವಿಷ್ಯ ಕೂಡ ಅದೇ ರೀತಿ ಹಾಳಾಗುತ್ತದೆ ಎಂದರು.

ಮಕ್ಕಳಿಗೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಿ, ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕೇ ಹೊರತು, ಚಿಕ್ಕ ವಯಸ್ಸಿನ ಮಕ್ಕಳನ್ನು ಬಾಲ್ಯವಿವಾಹದ ನರಕಕ್ಕೆ ತಳ್ಳಿ ಅವರ ಜೀವನ ಹಾಳು ಮಾಡಬೇಡಿ ಎಂದು ಮನವಿ ಮಾಡಿದರು.

ಮಕ್ಕಳನ್ನು ಗೃಹಬಂಧನಕ್ಕೆ ಒಳಪಡಿಸದೇ ಸರಕಾರದಿಂದ ಸಿಗುವ ಸೌಲಭ್ಯ ಪಡೆದುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಲು ಅವಕಾಶ ಕೊಡಿ, ರಾಜರಾಮ್‌ ಮೋಹನ್‌ ರಾಯ್‌, ದಯಾನಂದ ಸರಸ್ವತಿ ಮುಂತಾದ ಹೋರಾಟಗಾರರ ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಹೋರಾಡಿದ್ದಾರೆ. ನಮ್ಮ ದೇಶದಲ್ಲಿ ಅನಕ್ಷರಸ್ಥ ಹಾಗೂ ಬಡ ಕುಟುಂಬಗಳು ಬಾಲ್ಯವಿವಾಹ ಮಾಡುತ್ತಿವೆ. ಮಕ್ಕಳ ಸಂಖ್ಯೆ ಹೆಚ್ಚಾಗಿದ್ದಾಗಲೂ ಬಾಲ್ಯದಲ್ಲೇ ಮಕ್ಕಳಿಗೆ ಮದುವೆ ಮಾಡಲಾಗುತ್ತಿದೆ. ಇದಕ್ಕೆ ಪ್ರೋತ್ಸಾಹ ನೀಡುವಂತಹವರು. ಯಾರೇ ಆಗಿದ್ದರೂ ಅವರ ಮೇಲೆ ಮೊಕದ್ದಮೆ ಹೂಡಿ ಕಾನೂನಿನ ಪ್ರಕಾರ ಒಂದು ಲಕ್ಷ ರೂ. ದಂಡ ಮತ್ತು ಕಠಿಣ ಕಾರಾಗೃಹ ವಾಸದ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಎಲ್ಲೇ ಬಾಲ್ಯವಿವಾಹ ನಡೆದರೆ ತಕ್ಷಣ ಮಕ್ಕಳ ಸಹಾಯವಾಣಿಗೆ ದೂರು ಸಲ್ಲಿಸಿದರೆ, ಅವರು ತಕ್ಷಣ ಒಂದು ಮಗುವಿನ ರಕ್ಷಣೆ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದ್ಬಳಕೆ ಪಡಿಸಿಕೊಳ್ಳಬೇಕು. ಜಾಗೃತಿ ಬೀದಿ ನಾಟಕ ಕಾರ್ಯಕ್ರಮ ಪಟ್ಟಣದ 5 ಸ್ಥಳಗಳಲ್ಲಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶವಾದ ಮುಧೋಳ, ಸಂಗನಾಳದಲ್ಲಿಯೂ ಜಾಗೃತಿ ಬೀದಿನಾಟಕ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮೇಲ್ವಿಚಾರಕಿ ಮಾಧವಿ ವೈದ್ಯ, ಕಲಾ ಸಂಘದ ಶರಣಪ್ಪ ಹಿರೇಮನಿ, ಮಂಜುನಾಥ ತೆಗ್ಗಿ ಇತರರು ಇದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.