ಪ್ರವಾಸಿ ತಾಣಗಳ ಸುತ್ತಮುತ್ತ ಮಕ್ಕಳ ಭಿಕ್ಷಾಟನೆ


Team Udayavani, Nov 30, 2019, 6:02 PM IST

KOPALA-TDY-3

ಗಂಗಾವತಿ: ನಗರ ಸೇರಿ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಭಿಕ್ಷಾಟನೆ ಮಾಡುತ್ತಿದ್ದು,ಇದನ್ನು ತಡೆಯಬೇಕಾದ ವಿವಿಧ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ.

ನಗರದ ಕೇಂದ್ರ ಬಸ್‌ ನಿಲ್ದಾಣ, ಸಿಬಿಎಸ್‌ ವೃತ್ತ, ಗಂಜ್‌ ಇಂದಿರಾ ಗಾಂಧಿ ವೃತ್ತ ಮತ್ತು ತಾಲೂಕಿನ ಕಿಷ್ಕಿಂದಾ ಅಂಜನಾದ್ರಿಬೆಟ್ಟ, ಪಂಪಾ ಸರೋವರ, ಆದಿಶಕ್ತಿ ಮಂದಿರ, ವಿರೂಪಾಪೂರಗಡ್ಡಿ ಪ್ರದೇಶದಲ್ಲಿ ಶಾಲೆ ಬಿಟ್ಟ ಮಕ್ಕಳು ವ್ಯಾಪಕವಾಗಿ ಭಿಕ್ಷಾಟನೆ ಮಾಡುವ ದಂಧೆಯಲ್ಲಿ ತೊಡಗಿದ್ದು ಇದಕ್ಕೆ ಪಾಲಕರೇ ಕಾರಣರಾಗಿದ್ದಾರೆ. ಕನಕಗಿರಿ, ಸಿದ್ದಾಪೂರ, ತಾವರಗೇರಾ, ಕಂಪ್ಲಿ, ಶ್ರೀರಾಮ ನಗರಗಳಿಂದ ಪ್ರತಿದಿನ ಬೆಳಗ್ಗೆ ಗಂಗಾವತಿ ಸೇರಿ ಸುತ್ತಲಿನ ಪ್ರದೇಶಗಳಿಗೆ ಆಗಮಿಸುವ 8ರಿಂದ 16 ವರ್ಷದೊಳಗಿನ ಮಕ್ಕಳು ಬೆಳಗ್ಗೆಯಿಂದ ಸಂಜೆವರೆಗೆ ಭಿಕ್ಷೆ ಬೇಡಿ ಹಣ ಸಂಪಾದಿಸುತ್ತಿದ್ದಾರೆ.

ಪ್ರತಿ ಅಂಗಡಿಗಳಿಗೆ ಹೋಗುವ ಭಿಕ್ಷೆ ಬೇಡುವ ಮಕ್ಕಳು ಪ್ರತಿದಿನ 200ರಿಂದ 500 ರೂ. ವರೆಗೆ ಹಣ ಸಂಪಾದನೆ ಮಾಡಿ ಪಾಲಕರಿಗೆಕೊಡಬೇಕಿದೆ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರತಿ ಊರಿಗೆ ಶಾಲೆ, ಅಂಗನವಾಡಿ ಆರಂಭಿಸಿದ್ದರೂ ಭಿಕ್ಷೆ ಬೇಡುವ ಮಕ್ಕಳು ಶಾಲೆ ಕಡೆ ಮುಖ ಮಾಡುತ್ತಿಲ್ಲ. ಪ್ರತಿದಿನ 25-30 ಮಕ್ಕಳು ಭಿಕ್ಷಾಟನೆ ಮಾಡುತ್ತಿದ್ದಾರೆ. ಪ್ರತಿ ಬಾರಿ ಮಕ್ಕಳ ಗಣತಿ ಸಂದರ್ಭದಲ್ಲಿ ಈ ಮಕ್ಕಳ ಗಣತಿಯಾಗುತ್ತದೆ. ಪಾಲಕರು ಮಾತ್ರ ಮಕ್ಕಳನ್ನು ಶಾಲೆ ಕಳಿಸದೇ ಭಿಕ್ಷೆ ಬೇಡಲು ಕಳುಹಿಸುತ್ತಾರೆ. ಭಿಕ್ಷಾಟನೆ ಮಾಡುವ ಮಕ್ಕಳು ಬಾಲಾಪರಾಧಿ ಗಳಾಗಿ ಇಡೀ ಸಮಾಜಕ್ಕೆ ಕಂಟಕ ಪ್ರಾಯರಾಗುತ್ತಾರೆ. ಇದನ್ನು ಹೋಗಲಾಡಿಸಲು ಯುಸೆಸ್ಕೋ ಭಾರತದಲ್ಲಿ ಭಿಕ್ಷಾಟನೆ ಮಾಡುವ ಮಕ್ಕಳಿಗೆ ಪುನರ್‌ ವಸತಿ ಕಲ್ಪಿಸಲು ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡಿದ್ದು ಯೋಜನೆ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ.

ತಾಲೂಕಿನ ಖ್ಯಾತ ಪ್ರವಾಸಿ ತಾಣಗಳಾದ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ಆನೆಗೊಂದಿ ನವವೃಂದಾವನ, ಚಿಂತಾಮಣಿ, ಶ್ರೀರಂಗನಾಥ ಗುಡಿ, ಶಬರಿ ಗುಹೆ ಋಷಿಮುಖ ಪರ್ವತ ವಿರೂಪಾಪೂರಗಡ್ಡಿ ಪ್ರದೇಶಕ್ಕೆ ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿಯೂ ಭಿಕ್ಷುಕರ ಕಾಟ ತೀವ್ರವಾಗಿದ್ದು ಕೆಲವೊಮ್ಮೆ ಪ್ರವಾಸಿಗರು ಮುಜುಗರಕ್ಕೊಳಗಾಗುವ ಸನ್ನಿವೇಶಗಳು ನಡೆಯುತ್ತವೆ. ಭಿಕ್ಷಾಟನೆ ಅಪರಾಧವಾಗಿದ್ದರೂ ಈ ಕೆಟ್ಟ ದಂಧೆಯಿಂದ ಮಕ್ಕಳನ್ನು ಹೊರಗೆ ತರುವಲ್ಲಿ ಅ ಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ.

ಭಿಕ್ಷೆ ಬೇಡುವ ಮಕ್ಕಳನ್ನು ಪಾಲಕರ ಮನವೊಲಿಸಿ ಮಕ್ಕಳ ಕಲ್ಯಾಣ ಮತ್ತು ಪುನರ್ವಸತಿ ಕೇಂದ್ರಗಳಿಗೆ ಕಳಿಸಲು ಯೋಜನೆ ಇದ್ದರೂ ಯಾವ ಅಧಿಕಾರಿಗಳು ಮನಸ್ಸಿಗೆ ಹಚ್ಚಿಕೊಂಡು ಕೆಲಸ ಮಾಡುತ್ತಿಲ್ಲ. ಕಾರ್ಮಿಕ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ ಮತ್ತು ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಿಕ್ಷಾಟನೆ ಮಾಡುವ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಯೋಜನೆ ಇದೆ. ಈ ಯೋಜನೆ ಅನುಷ್ಠಾನಕ್ಕೆ ವಿವಿಧ ಇಲಾಖೆ ಅಧಿ ಕಾರಿಗಳು ಮನಸ್ಸು ಮಾಡುತ್ತಿಲ್ಲ. ಭಿಕ್ಷಾಟನೆ ಮಾಡಲು ವಿವಿಧ ಊರುಗಳಿಂದ ಆಗಮಿಸುವ ಮಕ್ಕಳನ್ನು ಅಧಿಕಾರಿಗಳು ಪತ್ತೆ ಮಾಡಿ ಅವರ ಪಾಲಕರ ಮನಪರಿವರ್ತಿಸುವ ಮೂಲಕ ಮಕ್ಕಳನ್ನು ಭಿಕ್ಷಾಟನೆಯ ಪಿಡುಗಿನಿಂದ ತಪ್ಪಿಸಲು ಸಾಧ್ಯವಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಪುನರ್ವಸತಿ ಕೇಂದ್ರದ ಅಧಿಕಾರಿಗಳು ನಿರಂತರ ಕಾರ್ಯಚರಣೆ ಮಾಡಬೇಕಿದೆ.

ಭಿಕ್ಷಾಟನೆ ದೊಡ್ಡ ಅಪರಾಧ. ಮಕ್ಕಳು ಭಿಕ್ಷೆ ಬೇಡುವ ಪದ್ಧತಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಗಂಗಾವತಿ ಸುತ್ತಲಿನ ಪ್ರವಾಸಿ ತಾಣಗಳ ಹತ್ತಿರ ಭಿಕ್ಷೆ ಬೇಡದಂತೆ ಜಾಗೃತಿ ಮೂಡಿಸಲಾಗಿದೆ. ಹಲವು ಭಾರಿ ಭಿಕ್ಷುಕರನ್ನು ಬಳ್ಳಾರಿ ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮಕ್ಕಳು ಭಿಕ್ಷೆ ಬೇಡದಂತೆ ತಡೆಯಲು ಪಾಲಕರಿಗೆ ಜಾಗೃತಿ ಮೂಡಿಸಲಾಗುತ್ತದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜತೆ ಮಾತನಾಡಿ ಭಿಕ್ಷಾಟನೆ ತಡೆಯಲಾಗುತ್ತದೆ.-ಗಂಗಪ್ಪ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.