13ರೊಳಗೆ ಕುಡಿವ ನೀರಿನ ಕಾಮಗಾರಿ ಪೂರ್ಣಗೊಳಿಸಿ

200 ಗ್ರಾಮಗಳಲ್ಲಿ ಡಿಬಿಒಟಿ ಕಾಮಗಾರಿ ಪೂರ್ಣಗೊಂಡಿಲ್ಲ ; ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಯ ಪ್ರಗತಿ ಪರಿಶೀಲನೆ

Team Udayavani, Jun 10, 2022, 3:07 PM IST

16

ಕೊಪ್ಪಳ: ಡಿಬಿಒಟಿ ಕಾಮಗಾರಿಗೆ ಹೆಚ್ಚು ಕಾರ್ಮಿಕರನ್ನು ನಿಯೋಜಿಸಿ, 200 ಗ್ರಾಮಗಳಿಗೆ ಬಾಕಿ ಇರುವ ನೀರು ಸರಬರಾಜು ಕಾಮಗಾರಿಯನ್ನು ಜೂ. 13ರೊಳಗಾಗಿ ಪೂರ್ಣಗೊಳಿಸಬೇಕೆಂದು ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್‌ ಅವರು ಹೇಳಿದರು.

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಡಿಬಿಒಟಿ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಡಿಬಿಒಟಿ ಕಾಮಗಾರಿಗಳು ಯಲಬುರ್ಗಾ ಮತ್ತು ಕುಷ್ಟಗಿಯಲ್ಲಿ 2017ರ ಅ. 6ಕ್ಕೆ ಪ್ರಾರಂಭವಾಗಿ 2021ರ ಅ. 5ರಂದು ಪೂರ್ಣಗೊಳ್ಳಬೇಕಿತ್ತು. ಆದರೆ ಈ ಕಾಮಗಾರಿ ಪ್ರಾರಂಭವಾಗಿ 3 ವರ್ಷ ಕಳೆದರೂ ಸುಮಾರು 200 ಗ್ರಾಮಗಳಲ್ಲಿ ಡಿಬಿಇಟಿ ಕಾಮಗಾರಿಗೆ ಪೂರ್ಣಗೊಂಡಿಲ್ಲ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡು ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಸೂಚಿಸಿದರು.

236 ಒಎಚ್‌ಟಿ ನೀರಿನ ಟ್ಯಾಂಕ್‌ಗಳನ್ನು ಹಾಗೂ ಎಂಬಿಆರ್‌ ನಿಂದ ಒಎಚ್‌ಟಿ ಟ್ಯಾಂಕ್‌ಗಳಿಗೆ ನೀರಿನ ಪೈಪ್‌ಲೈನ್‌ ಜೋಡಣೆ ಮಾಡುವುದು ಇನ್ನೂ 5.9 ಕಿ.ಮೀ. ಬಾಕಿ ಇದ್ದು, ಬಾಕಿ ಕಾಮಗಾರಿಯನ್ನು ಜುಲೈ-2022 ರ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಕುಷ್ಟಗಿ ತಾಲೂಕಿನಲ್ಲಿ 9 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 3 ಎಂಬಿಆರ್‌ಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವ ಜೊತೆಗೆ ಒಎಚ್‌ಟಿಗಳಿಂದ ನಳಗಳಿಗೆ ಪೂರೈಕೆ ಮಾಡುವ ನೀರಿನ ಗುಣಮಟ್ಟವನ್ನು ಎಫ್‌ಟಿಕೆ ಕಿಟ್‌ ಮುಖಾಂತರ ಪ್ರತಿ ಹಂತದಲ್ಲಿ ಪರಿಶೀಲನೆ ಮಾಡಿ, ವ್ಯತ್ಯಾಸವಾಗದಂತೆ ಶುದ್ಧ ನೀರನ್ನು ಪೂರೈಸಬೇಕು ಹಾಗೂ 18 ಗ್ರಾಮಗಳಲ್ಲಿ ಬಾಕಿ ಇರುವ ರಿಕ್ಲೋರಿನೇಷನ್‌ ಯೂನಿಟ್‌ ಮಾಡುವುದು ಬೇಗನೆ ಪೂರ್ಣಗೊಳಿಸಬೇಕು ಎಂದರು.

ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟಾರೆ 331 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಇದುವರೆಗೆ 295 ಗ್ರಾಮಗಳಲ್ಲಿ ಕಾಮಗಾರಿ ಕೈಗೊಂಡಿದ್ದು, ಅದರಲ್ಲಿ 179 ಗ್ರಾಮಗಳ ಕಾಮಗಾರಿ ಪೂರ್ಣಗೊಂಡಿರುವ ಕುರಿತು ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ, ಯಲಬುರ್ಗಾ, ಕುಷ್ಟಗಿ ಉಪ ವಿಭಾಗಗಳ ಶಾಖಾಧಿಕಾರಿಗಳು ಹಾಗೂ ಆಯಾ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ, ಸಮರ್ಪಕ ನೀರು ಸರಬರಾಜು ಆಗುತ್ತಿರುವ ಬಗ್ಗೆ ದೃಢೀಕರಿಸಿದ್ದಾರೆ. ಇನ್ನೂ ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳು ಪ್ರಸ್ತುತ ಇರುವ ಒಎಚ್‌ ಟಿಗಳಿಗೆ ಡಿಬಿಒಟಿಯ ನೀರನ್ನು ತುಂಬಿಸಲು ಒಎಚ್‌ಟಿವರೆಗೂ ಡಿಬಿಒಟಿ ನೀರಿನ ಪೈಪಲೈನ್‌ ಮಾಡವುದು ಬಾಕಿ ಇದೆ. ಯಲಬುರ್ಗಾದಲ್ಲಿ 98 ಹೊಸ ಒಎಚ್‌ಟಿ ಕಾಮಗಾರಿಗಳಲ್ಲಿ 61 ಪೂರ್ಣಗೊಂಡಿದ್ದು, ಕುಷ್ಟಗಿ ತಾಲೂಕಿನಲ್ಲಿ 138 ರಲ್ಲಿ 106 ಪೂರ್ಣಗೊಂಡು, ಒಟ್ಟು 236 ಹೊಸ ಒಎಚ್‌ಟಿಗಳ ಪೈಕಿ 167 ಒಎಚ್‌ಟಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದೆ ಎಂದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಜಿಲ್ಲಾ ಕಾರ್ಯನಿರ್ವಾಹಕ ಅಭಿಯಂತರರು, ಸಂಬಂಧಿಸಿದ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕುಷ್ಟಗಿ, ಯಲಬುರ್ಗಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು, ಎಲ್‌ ಎನ್‌ಟಿ ಕಂಪನಿಯ ಯೋಜನಾ ವ್ಯವಸ್ಥಾಪಕರು ಮತ್ತು ಪಿಎಂಸಿ ಹಾಗೂ ಎಸ್‌ಎಂಇ.ಸಿ ಏಜೆನ್ಸಿಗಳ ಪ್ರತಿನಿಧಿಗಳು ಉಪಸ್ಥಿರಿದ್ದರು.

ಟಾಪ್ ನ್ಯೂಸ್

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.