ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಕಾರಟಗಿ-ಗಂಗಾವತಿ-ಕನಕಗಿರಿಯಲ್ಲಿ 7944 ಪರೀಕ್ಷಾರ್ಥಿಗಳು
Team Udayavani, Mar 27, 2022, 4:32 PM IST
ಕಾರಟಗಿ: ತಾಲೂಕಿನಲ್ಲಿ ಮಾ. 28ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್, ಗ್ರೀನ್ ವ್ಯಾಲಿ ರೂರಲ್ ಪ್ರೌಢಶಾಲೆ, ಶ್ರೀ ಶರಣ ಬಸವೇಶ್ವರ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪರೀಕ್ಷಾ ಸಿದ್ಧತಾ ಕಾರ್ಯಗಳು ಭರದಿಂದ ನಡೆದಿವೆ.
ಕೋವಿಡ್ ಕರಿಛಾಯೆ ಇಲ್ಲದಿದ್ದರೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾಹಿತಿ ನೀಡಿ, ಕಾರಟಗಿ, ಗಂಗಾವತಿ, ಕನಕಗಿರಿ ತಾಲೂಕು ಸೇರಿ ಒಟ್ಟು 7944 ವಿದ್ಯಾರ್ಥಿಗಳು ಆಯಾ ತಾಲೂಕಿನ 29 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಖಾಸಗಿ ಅಭ್ಯರ್ಥಿಗಳಿಗಾಗಿ ಗಂಗಾವತಿಯಲ್ಲಿ ಒಂದು ಕೇಂದ್ರ ಸ್ಥಾಪಿಸಲಾಗಿದೆ. ಕಾರಟಗಿ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು. ಈಗಾಗಲೇ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವ ಮೂಲಕ ಸಿದ್ಧತಾ ಕಾರ್ಯ ನಡೆಸಿದ್ದಾರೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಮೂರು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆಗೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಎಲ್ಲಾ ಅಗತ್ಯ ಮುಂಜಾಗ್ರತೆ ವಹಿಸಲಾಗಿದೆ ಎಂದರು.
ಈ ಕುರಿತು ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಪ್ರಾಚಾರ್ಯ ವಿಜಯಕುಮಾರ ಮಾತನಾಡಿ, ತಾಲೂಕಿನಾದ್ಯಂತ 7 ಕಡೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ತಾಲೂಕು ಕೇಂದ್ರದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಶ್ರೀ ಶರಣಬಸವೇಶ್ವರ ವಿದ್ಯಾ ಸಂಸ್ಥೆ, ನ್ಯಾಶನಲ್ ಪಬ್ಲಿಕ್ ಸ್ಕೂಲ್, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆ, ಬೂದಗುಂಪಾ ಸರ್ಕಾರಿ ಪ್ರೌಢಶಾಲೆ, ರವಿನಗರದ ರೆಡ್ಡಿ ವೀರಣ್ಣ ಶಾಲೆ ಮತ್ತು ಸೋಮನಾಳ ಸರಕಾರಿ ಪ್ರೌಢಶಾಲೆ ಸೇರಿದಂತೆ ಈ 7 ಕೇಂದ್ರಗಳಲ್ಲಿ ಒಟ್ಟು 1690 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸೂತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.