ಪ್ರವೇಶ ಪತ್ರದ ಗೊಂದಲ: ವಿದ್ಯಾರ್ಥಿಗಳ ಪರದಾಟ
ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ
Team Udayavani, May 6, 2022, 3:20 PM IST
ಕೊಪ್ಪಳ: ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಮೊದಲ ಸೆಮ್‌ನ ಪರೀಕ್ಷೆ ಗುರುವಾರ ಆರಂಭವಾಗಿದ್ದು, ಹಾಲ್ ಟಿಕೆಟ್ ಸಂಖ್ಯೆಯ ಗೊಂದಲದಿಂದಾಗಿ ನೂರಾರು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳಲು ಪರದಾಡಿದರು.
ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಎನ್‌ಇಪಿ ಜಾರಿ ಬಳಿಕ ಮೊದಲ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೊದಲ ಸೆಮ್ ಕನ್ನಡ ವಿಷಯಕ್ಕೆ ಮಧ್ಯಾಹ್ನ 2ಕ್ಕೆ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ ಕಾಲೇಜು ವಿದ್ಯಾರ್ಥಿಗಳಿಗೆ ನೀಡಿದ ಪ್ರವೇಶಾತಿ ಪತ್ರದಲ್ಲಿನ ಸಂಖ್ಯೆಗೂ ಹಾಗೂ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಲಾದ ಪ್ರವೇಶಾತಿ ಪತ್ರದ ಸಂಖ್ಯೆಗೂ ತಾಳೆಯಾಗುತ್ತಿರಲಿಲ್ಲ. ಇದರಿಂದ ನೂರಾರು ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು.
ಕಾಲೇಜಿನ ನೋಟಿಸ್ ಬೋರ್ಡ್ ಮುಂದೆ ಮುಗಿ ಬಿದ್ದು ನೋಡುತ್ತಿದ್ದರು. ಯಾವ ವಿದ್ಯಾರ್ಥಿಗಳಿಗೂ ಸರಿಯಾದ ಪ್ರವೇಶಾತಿ ನಂಬರ್ ಸಿಗುತ್ತಿರಲಿಲ್ಲ. ಪರೀಕ್ಷಾ ಕೊಠಡಿ ಏಲ್ಲಿದೆ? ಯಾವ ಬ್ಲಾಕ್‌ನಲ್ಲಿದೆ? ಎಷ್ಟನೇ ಕೊಠಡಿಯಲ್ಲಿದೆ? ಎನ್ನುವ ಗೊಂದಲಕ್ಕೆ ಒಳಗಾಗಿದ್ದರು. ಮಧ್ಯಾಹ್ನ 3 ಗಂಟೆಯಾದರೂ ವಿದ್ಯಾರ್ಥಿಗಳಲ್ಲಿನ ಗೊಂದಲ ನಿವಾರಣೆಯಾಗಲಿಲ್ಲ. ಹೀಗಾಗಿ ನಾವು ಪರೀಕ್ಷೆಯಿಂದ ವಂಚಿತರಾಗಲಿದ್ದೇವೆ ಎನ್ನುವ ಆತಂಕದಲ್ಲಿದ್ದರು. ಕೊನೆಗೂ ಮಧ್ಯಾಹ್ನ 3 ಗಂಟೆಗೆ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು. ವಿವಿ ಎಡವಟ್ಟಿಗೆ ನೂರಾರು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಕಾಲೇಜಿನಲ್ಲಿ 1750 ವಿದ್ಯಾರ್ಥಿಗಳು ಪರೀಕ್ಷೆಗೆ ಪ್ರವೇಶಾತಿ ಪಡೆದುಕೊಂಡಿದ್ದು, ಇವರಲ್ಲಿ 100 ವಿದ್ಯಾರ್ಥಿಗಳು ತಮ್ಮ ಲಾಗಿನ್‌ನಲ್ಲಿ ಕೆಲವೊಂದು ಅಪ್ಡೆàಟ್ ಮಾಡಿಲ್ಲ. ಹೀಗಾಗಿ ಅವರ ಪ್ರವೇಶಾತಿ ಪತ್ರ ಬಂದಿಲ್ಲ. ಆದರೆ ವಿವಿಯು ಅಂತಹ ವಿದ್ಯಾರ್ಥಿಗಳಿಗೆ ಮ್ಯಾನುವಲ್ ಪ್ರವೇಶಾತಿ ಪತ್ರ ಕೊಡಲು ಅವಕಾಶ ನೀಡಿದ್ದು, ಆ ಎಲ್ಲ ವಿದ್ಯಾರ್ಥಿಗಳಿಗೂ ನಾವು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದೇವೆ. ಎನ್‌ಇಪಿ ಜಾರಿ ಬಳಿಕ ಇದು ಮೊದಲ ಪರೀಕ್ಷೆಯಾದ ಹಿನ್ನೆಲೆಯಲ್ಲಿ ಸ್ವಲ್ಪ ಗೊಂದಲವಾಯಿತು. ಬಳಿಕ ಎಲ್ಲವನ್ನೂ ಸರಿಮಾಡುವ ಪ್ರಯತ್ನ ಮಾಡಿದ್ದೇವೆ. -ಮಾರುತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.