![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 27, 2020, 12:21 PM IST
ಕೊಪ್ಪಳ: ಕೋವಿಡ್-19 ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ಆರೋಪಕ್ಕೆ ಐವರು ಸಚಿವರು ಲೆಕ್ಕ ಕೊಟ್ಟರೂ ಕೈ ನಾಯಕರು ಲೆಕ್ಕ ಲೆಕ್ಕ ಎನ್ನುತ್ತಿದ್ದಾರೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ವ್ಯಂಗ್ಯವಾಡಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅವರಿಗೆ ಮಾಡಲು ಬೇರೆ ಕೆಲಸವಿಲ್ಲ ಹಾಗಾಗಿ ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಅಕ್ರಮ ಅವ್ಯವಹಾರ ನಡೆದಿಲ್ಲ. ಕಾಂಗ್ರೆಸ್ ಜನರಿಗೆ ತಪ್ಪು ಮಾಹಿತಿ ನೀಡಿ, ಬಿಜೆಪಿ ಮತ್ತು ಸರ್ಕಾರಕ್ಕೆ ಕಪ್ಪು ಚುಕ್ಕೆ ಇಡಲು ಮುಂದಾಗಿದ್ದಾರೆ. ಇದು ಆಗದ ಕೆಲಸ. ಕೋವಿಡ್-19 ಜಗತ್ತಿಗೆ ಹೊಸದು ಆರೋಗ್ಯ ಇಲಾಖೆ ಉಪಕರಣದ ಬೇಡಿಕೆ ಮತ್ತು ಸಪ್ಲೈಯಲ್ಲಿ ಅಸಮತೋಲನ ಉಂಟಾಯ್ತು. ಈ ಕಾರಣಕ್ಕೆ ಒಂದಷ್ಟು ಹಣ ಹೆಚ್ಚು ನೀಡಿ ಖರೀದಿ ಮಾಡಲಾಗಿದೆ ಎಂದರು.
ಜುಲೈ 26ಕ್ಕೆ ಬಿಜೆಪಿ ಒಂದು ವರ್ಷದ ಆಡಳಿತ ಪೂರೈಸಿದೆ. ಈ ಒಂದು ವರ್ಷದಲ್ಲಿ ಎದುರಾದ ಸಂಕಷ್ಟ ಹಿಂದೆದೂ ಬಂದಿರಲಿಕ್ಕಿಲ್ಲ. ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡಾಗ ಬರ ತಾಂಡವವಾಡುತ್ತಿತ್ತು. ಅಧಿಕಾರ ವಹಿಸಿಕೊಂಡ ಕೆಲ ದಿನದಲ್ಲೇ ಅತಿವೃಷ್ಠಿ ಉಂಟಾಯಿತು. ಸಿಎಂ ಬಿಎಸ್ ವೈ ಒಬ್ಬರೇ ಮುಂದೆ ನಿಂತು ನೆರೆ ಹಾವಳಿ ಸಮಸ್ಯೆಯನ್ನು ಎದುರಿಸಿದರು. ಕೋವಿಡ್-19 ಸಂದರ್ಭದಲ್ಲೂ ಸಿಎಂ ಸಮಪರ್ಕವಾಗಿ ಕೆಲಸ ಮಾಡಿದ್ದಾರೆ ಎಂದರು.
ಸಿಎಂ ಮುಳ್ಳಿನ ಹಾಸಿಗೆಯನ್ನು ಸೂಕ್ಷ್ಮವಾಗಿ ನಿರ್ವಹಣೆ ಮಾಡಿದ್ದಾರೆ. ಸಿಎಂ ಸಮರ್ಥ ನಾಯಕತ್ವದಿಂದ ಕೆಲಸ ಮಾಡ್ತಿದ್ದಾರೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.