ಕಾಂಗ್ರೆಸ್‌ಗೆ 136 ಸ್ಥಾನ ಖಚಿತ: ಡಿ.ಕೆ.ಶಿವಕುಮಾರ್
Team Udayavani, Dec 17, 2022, 12:49 AM IST
ಕುಷ್ಟಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗೆ ವಿಶೇಷ ಆರ್ಥಿಕ ವಲಯ ಸ್ಥಾಪಿಸಲಾಗುವುದು. ಕೈಗಾರಿಕೆ ಸ್ಥಾಪಿಸಲು ಮುಂದೆ ಬಂದವರಿಗೆ ಕಡಿಮೆ ದರ ದಲ್ಲಿ ನೀರು, ವಿದ್ಯುತ್ ಮೂಲಸೌಕರ್ಯಗಳ ವಿಶೇಷ ಪ್ಯಾಕೇಜ್ ಕಲ್ಪಿಸಲಾಗುವುದು. ಆ ಧೈರ್ಯದಿಂದಲೇ ಮಾತನಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಅಮರೇಗೌಡ ಪಾಟೀಲ್ ಬಯ್ನಾಪುರ ಅವರ ಜನ್ಮದಿನೋತ್ಸವ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 136 ಸ್ಥಾನ ಗೆದ್ದು ಅ ಧಿಕಾರಕ್ಕೆ ಬರುವುದು ಬಹುತೇಕ ಖಚಿತ. ಎಲ್ಲರಿಗೂ ಸರಕಾರಿ ನೌಕರಿ ಕೊಡುವ ಭರವಸೆ ನೀಡುವುದಿಲ್ಲ. ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹಿಂದೆ ಇಂಧನ ಸಚಿವನಾಗಿದ್ದ ವೇಳೆ ಲೈನ್‌ಮೆನ್ ಹುದ್ದೆಗಳನ್ನು ಯಾರಿಗೂ ಲಂಚ ಇಲ್ಲದೇ ಭರ್ತಿ ಮಾಡಲಾಗಿತ್ತು ಎಂದರು.
ಬಿಜೆಪಿ ಸರಕಾರದಲ್ಲಿ ಪಿಎಸ್‌ಐ ಹುದ್ದೆಗೆ ಲಂಚ ತೆಗೆದುಕೊಂಡ ಐಎಎಸ್, ಐಪಿಎಸ್ ಅ ಧಿಕಾರಿ ಸಹಿತ ಈ ಪ್ರಕರಣದಲ್ಲಿ ಶಾಮೀಲಾದವರು ಕೋರ್ಟ್‌ನಲ್ಲಿ ಮಾತನಾಡುವುದಕ್ಕೂ ಅವಕಾಶ ನೀಡದೆ ಜೈಲಿಗೆ ಹೋಗಿ ಕೊಳೆಯಬೇಕಾಯಿತು. ಶಿಕ್ಷಕರ ಹಾಗೂ ಗುಮಾಸ್ತ ಹುದ್ದೆ ಕೂಡ ಲಂಚವಿಲ್ಲದೇ ಮಾತಿಲ್ಲ. ನಾವೇನಾದರೂ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಲಂಚ ತೆಗೆದುಕೊಂಡಿದ್ದರೆ ತನಿಖೆ ಮಾಡಲಿ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.