Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Team Udayavani, Apr 17, 2024, 6:48 PM IST
ಕೊಪ್ಪಳ: ಕರ್ನಾಟಕದಲ್ಲಿ ಬಿಜೆಪಿ ಸ್ವಚ್ಛ ಮಾಡುವೆವು ಎಂದಿರುವ ಡಿಕೆಶಿ ಹೇಳಿಕೆ ವಿಚಾರದಲ್ಲಿ, ನಾವೇ ಕಾಂಗ್ರೆಸ್ ಮುಕ್ತ ಮಾಡಿದ್ದೇವೆ. ಈಗ ನಮ್ಮ ಪಕ್ಷವನ್ನು ಸ್ವಚ್ಛ ಮಾಡುತ್ತೇವೆ ಎಂದಿದ್ದಾರೆ. ಅವರು ಈ ಬಾರಿ ಎರಡಂಕಿಯಷ್ಟು ಸ್ಥಾನಗಳನ್ನು ಅವರು ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.
ಕೊಪ್ಪಳದಲ್ಲಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಸ್ಪರ್ಧೆ ಮಾಡುವ ನಾಯಕರೇ ಇಲ್ಲ. ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಯಾರು ಸ್ಪರ್ಧೆ ಮಾಡುತ್ತಿಲ್ಲ. ಜನ ಈ ಬಾರಿ ಕಸಬರಗಿ ಹಿಡ್ಕೊಂಡು ಜಾಡಿಸಲಿದ್ದಾರೆ. ಈ ಬಾರಿ ಕಾಂಗ್ರೆಸ್‌ನವರಿಗೆ ವಿರೋದ ಪಕ್ಷದಲ್ಲಿ ಕುಳಿತುಕೊಳ್ಳುವಷ್ಟು ಸ್ಥಾನ ಸಿಗುತ್ತೋ ಇಲ್ಲವೋ ಗೊತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಬ್ರೇನ್ ಡೆಡ್ ಆದ ಪಕ್ಷವಾಗಿದೆ. ಅದನ್ನ ಮೇಲೆತ್ತಲು ಪ್ರಯತ್ನ ಮಾಡಿದರೂ ಆಗುತ್ತಿಲ್ಲ. ರೌವಡಿ ಸಂಸ್ಕೃತಿ ಕಾಂಗ್ರೆಸ್‌ನಲ್ಲಿದೆ. ಸುಳ್ಳು ಆಶ್ವಾಸನೆ ಕೊಟ್ಟು, ಜನರಲ್ಲಿ ಭ್ರಮೆ ಬರುವಂತೆ ಮಾಡಿದೆ. ನರೇಂದ್ರ ಮೋದಿ ಗ್ಯಾರಂಟಿ ಮೂಲಕ ಮೂಲಕ ದೇಶದ ಅಭಿವೃದ್ಧಿ ಸಾಧ್ಯವಿದೆ. ಈ ಬಾರಿ ನಮ್ಮ ಅಭ್ಯರ್ಥಿಗಳು ಗೆಲ್ಲಬೇಕು. ಕಳೆದ ಬಾರಿಯಂತೆ ಈ ಬಾರಿ ಕಲ್ಯಾಣ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಾನು ರೆಡ್ಡಿ ಬಿಜೆಪಿ ನಿಷ್ಟಾವಂತ ಕಾರ್ಯಕರ್ತರು, ಪಕ್ಷ ನಮ್ಮಂತವರನ್ನ ಕಳೆದುಕೊಳ್ಳಬಾರದು ಎಂದು ಮತ್ತೆ ಅವಕಾಶ ನೀಡದೆ. ನಾವಿಬ್ಬರು ಜೊತೆಯಾಗಿರುವುದು ಹೆಚ್ಚಿನ ಬಲ ಬಂದಿದೆ ಎಂದರು.
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಿವೆ. ಒಂದು ಕೆಲಸವನ್ನು ಮಾಡಿಲ್ಲ ಒಂದು ಪುಟ್ಟಿ ಮಣ್ಣು ಹಾಕಿಲ್ಲ. ನವಲಿ ಡ್ಯಾಂಗೆ ಸಾವಿರ ಕೋಟಿ ಇಟ್ಟಿದ್ದೆವು. ಅದನ್ನ ಇವರು ನುಂಗಿಬಿಟ್ಟಿದೆ ಎಂದು ಕೈ ವಿರುದ್ದ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.