ಆರೋಗ್ಯ ಇಲಾಖೆ ನಿಯಮ ಪಾಲಿಸಿ
Team Udayavani, Oct 18, 2020, 3:49 PM IST
ಕೊಪ್ಪಳ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಸೇರಿ ವಿವಿಧ ಇಲಾಖೆಗಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ “ಕೋವಿಡ್-19 ಪ್ರಚಾರಾಂದೋಲನ'”ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಎಂಬ ಜನ ಆಂದೋಲನ ಜಾಥಾಕ್ಕೆ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾ ಧೀಶರಾದ ಬಿ.ಎಸ್. ರೇಖಾ ಅವರು ಚಾಲನೆ ನೀಡಿದರು.
ನ್ಯಾ| ಬಿ.ಎಸ್. ರೇಖಾ ಅವರು ಮಾತನಾಡಿ, ಮಹಾಮಾರಿ ಕೋವಿಡ್-19 ಹರಡುವಿಕೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ಮತ್ತು ಎಲ್ಲೆಡೆ ಮಾಸ್ಕ್ ಹಾಕಿಕೊಳ್ಳದೇ ಇರುವವರಿಗೆ ಕಾನೂನಿನ ರೀತಿಯಲ್ಲಿ ತಿಳಿ ಹೇಳುವುದು, ಜನರಲ್ಲಿಇದರ ಬಗ್ಗೆ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ “ಕೋವಿಡ್-19 ಪ್ರಚಾರಾಂದೋಲನ’ “ಸುರಕ್ಷಿತರಾಗಿರಿ ಮತ್ತುಇತರರನ್ನು ಸುರಕ್ಷಿತವಾಗಿರಿಸಿ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೋವಿಡ್ ಸಾಂಕ್ರಾಮಿಕ ರೋಗವು ಶ್ರೀಮಂತ, ಬಡವ ಎಂಬ ಬೇಧವಿಲ್ಲದೇ ಎಲ್ಲರನ್ನೂ ಕಾಡುತ್ತಿರುವ ಮಹಾಮಾರಿಯಾಗಿದೆ. ಎಲ್ಲಿಯವರೆಗೆ ಔಷಧ ಲಭ್ಯವಾಗುವುದಿಲ್ಲವೋ, ಅಲ್ಲಿಯವರೆಗೆ ಜಾಗ್ರತೆಯಿಂದ ಮತ್ತು ಆರೋಗ್ಯದಕಡೆಗೆ ಗಮನಹರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ನ್ಯಾ| ಎಸ್.ಎಂ. ಜಾಲವಾದಿ, ನ್ಯಾ| ಕುಮಾರ ಎಸ್., ನ್ಯಾ| ಮನುಶರ್ಮಾ, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಉದಯ ಕುಲಕರ್ಣಿ ಸೇರಿದಂತೆ ವಕೀಲರು ಮತ್ತು ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ಮಾಸ್ಕ್ ವಿತರಿಸಲಾಯಿದೆ.
ವೈರಸ್ ಹತೋಟಿಗೆ ಜೀವನ ಶೈಲಿಗೆ ಬದಲಿಸಿಕೊಳ್ಳಿ :
ಕುಷ್ಟಗಿ: ಕೋವಿಡ್ ವೈರಸ್ ಸಮುದಾಯಿಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನ್ಯಾಯಾಲಯಗಳು ಕೋವಿಡ್-19 ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದನ್ವಯ ಜಾಗೃತಿ ಆಂದೋಲನಕ್ಕೆ ಹಿರಿಯ ಶ್ರೇಣಿ ನ್ಯಾಯಾಲಯಗಳ ನ್ಯಾಯಾಧೀಶರಾದಬಿ.ಎಸ್. ಹೊನ್ನುಸ್ವಾಮಿ ಚಾಲನೆ ನೀಡಿದರು.
ಈ ವೇಳೆ ಸಾರ್ವಜನಿಕರಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಪಾಲಿಸುವ ಕುರಿತು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಸಾಂಕೇತಿಕವಾಗಿ ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು.
ನಂತರ ಮಾತನಾಡಿದ ನ್ಯಾಯಾಧೀಶರಾದ ಹೊನ್ನುಸ್ವಾಮಿ ಅವರು, ಕೋವಿಡ್ ವೈರಸ್ ಶೂನ್ಯವಾಗುವವರೆಗೂ ಸಾರ್ವಜನಿಕರು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು, ಸೋಪಿನಿಂದ ಕೈ ತೊಳಿಯುವುದು ಜೀವನ ಶೈಲಿಗೆ ಬದಲಿಸಿಕೊಳ್ಳಬೇಕು ಎಂದರು.
ನ್ಯಾಯಾಧೀಶರಾದ ಚಂದ್ರಶೇಖರ ತಳವಾರ, ನ್ಯಾಯಾಧೀಶರಾದ ರಫೀಕ್ ಅಹ್ಮದ್, ತಹಶೀಲ್ದಾರ್ ಎಂ. ಸಿದ್ದೇಶ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ್, ವೈದ್ಯಾಧಿ ಕಾರಿಡಾ| ಕೆ.ಎಸ್. ರಡ್ಡಿ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಎಚ್.ಬಿ. ಕುರಿಮತ್ತಿತರಿದ್ದರು. ಜಾಥಾದಲ್ಲಿ ಅಂಗನವಾಡಿ, ಆಶಾಕಾರ್ಯಕರ್ತೆಯರು, ಗೃಹರಕ್ಷಕ ದಳ, ಕಲಾವಿದರು, ವಕೀಲರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.