ಪ್ರವಾಸಿ ತಾಣದಲ್ಲಿಲ್ಲ ಕೋವಿಡ್ ಭಯ!

­ಮುನ್ನೆಚ್ಚರಿಕೆ ಇಲ್ಲದೇ ನಿತ್ಯವೂ ಸಾವಿರಾರು ಜನರ ಆಗಮನ! ­ಸಬ್‌ರಿಜಿಸ್ಟರ್‌ ಕಚೇರಿಯಲ್ಲಿಲ್ಲ ಸಾಮಾಜಿಕ ಅಂತರ

Team Udayavani, Apr 20, 2021, 8:29 PM IST

ghfghrr

ವರದಿ : ಕೆ.ನಿಂಗಜ್ಜ

ಗಂಗಾವತಿ: ಕೊರೊನಾ ಎರಡನೇ ಅಲೆ ಜೋರಾಗಿದ್ದು, ತಾಲೂಕಿನ ಪ್ರವಾಸಿ ಕೇಂದ್ರಗಳಾದ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಪಂಪಾಸರೋವರ ಆನೆಗೊಂದಿಗೆ ನಿತ್ಯವೂ ಸಾವಿರಾರು ಜನ ಪ್ರವಾಸಿಗರು ಹನುಮಮಾಲಾಧಾರಿಗಳು ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿ ಪಾಲನೆ ಮಾಡದೇ ಆಗಮಿಸುತ್ತಿದ್ದಾರೆ.

ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಸ್ಥಳೀಯ ಆಡಳಿತವು ಕೊರೊನಾ ಮಾರ್ಗಸೂಚಿ ಪಾಲನೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಪ್ಲೇಕ್ಸ್‌ ಸೂಚನೆ ಹಾಕಿದ್ದರೂ ಇಲ್ಲಿಗೆ ಬರುವವರು ಇವುಗಳನ್ನು ಪಾಲನೆ ಮಾಡುವಲ್ಲಿ ಅಸಡ್ಡೆ ತೋರುತ್ತಿದ್ದಾರೆ.

ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ದೂರ ಊರುಗಳಿಂದ ಶನಿವಾರ ಮತ್ತು ಮಂಗಳವಾರ ಸಾವಿರಾರು ಜನ ಹನುಮಭಕ್ತರು ಹಾಗೂ ಹನುಮಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಬೆಟ್ಟದ ಕೆಳಗೆ ವಾಹನ ಹಾಗೂ ಹಣ್ಣು ಹೂವು ತೆಂಗಿನಕಾಯಿ ಮಾರಾಟ ಮಾಡುವವರು ಅಧಿ ಕ ಸಂಖ್ಯೆಯಲ್ಲಿರುತ್ತಾರೆ. ಇಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸುವುದಿಲ್ಲ. ಸ್ಯಾನಿಟೈಸರ್‌ ಸೇರಿ ಅಗತ್ಯ ಸುರಕ್ಷ ಕ್ರಮ ಇಲ್ಲದೇ ವ್ಯವಹಾರ ಮಾಡುತ್ತಾರೆ. ಇದರಿಂದ ಕೊರೊನಾ ರೋಗ ಹರಡುವ ಭಯ ಹೆಚ್ಚಾಗಿದೆ. ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಸುಮಾರು 6 ತಿಂಗಳ ಕಾಲ ಅಂಜನಾದ್ರಿ ಬೆಟ್ಟ ಸೇರಿ ಇಲ್ಲಿಯ ಎಲ್ಲ ಪುಣ್ಯ ಕ್ಷೇತ್ರಗಳಿಗೆ ಜನರ ಪ್ರವೇಶ ನಿಷೇಧ ಮಾಡಲಾಗಿತ್ತು.

ಕಳೆದ ಭಾರಿ ಹನುಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಹನುಮಮಾಲಾಧಾರಿಗಳು ಅಂಜನಾದ್ರಿಗೆ ಆಗಮಿಸದೇ ತಮ್ಮ ತಮ್ಮ ಊರುಗಳಲ್ಲಿ ಮಾಲಾ ವಿಸರ್ಜನೆ ಮಾಡುವಂತೆ ಜಿಲ್ಲಾಡಳಿತ ಮನವಿ ಮಾಡಿತ್ತು. ಪುನಃ ಎರಡನೇ ಅಲೆ ಜೋರಾಗಿದ್ದು ಈಗಲೂ ಸಾವಿರಾರು ಯುವಕರು ಹನುಮಮಾಲೆ ಧರಿಸಿದ್ದು ಏ.27 ರಂದು ಹನುಮಜಯಂತಿ ಜರುಗಲಿದೆ. ಸಾವಿರಾರು ಹನುಮಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹನುಮ ಭಕ್ತರು ಕಳೆದ ಭಾರಿ ಹನುಮಮಾಲಾಧರಿಗಳಿಗೆ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆಗೆ ಅವಕಾಶ ನೀಡಿರಲಿಲ್ಲ. ಈ ಬಾರಿ ಕೊರೊನಾ ಮಾರ್ಗಸೂಚಿ ಅನ್ವಯ ಅವಕಾಶ ಕಲ್ಪಿಸುವಂತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸಬ್‌ರಿಜಿಸ್ಟರ್‌, ನಗರಸಭೆಯಲ್ಲಿ ಜನಜಂಗುಳಿ: ಕೋವಿಡ್ ಎರಡನೇ ಅಲೆಯ ಮಧ್ಯೆದಲ್ಲೂ ಸಾರ್ವಜನಿಕರು ತಮ್ಮ ಸರಕಾರದ ಕೆಲಸ ಕಾರ್ಯಗಳಿಗೆ ಸಬ್‌ರಿಜಿಸ್ಟರ್‌, ತಹಶೀಲ್‌ ಕಚೇರಿ ಮತ್ತು ನಗರಸಭೆಗೆ ನಿತ್ಯವೂ ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಕೊರೊನಾ ಮಾರ್ಗಸೂಚಿ ಅನುಸರಿಸುತ್ತಿಲ್ಲ. ಇದರಿಂದ ಕೊರೊನಾ ರೋಗ ಹರಡುವ ಸಂಭವವಿದ್ದು, ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಗೆ ಕ್ರಮ ಅಗತ್ಯವಾಗಿದೆ.

ನರೇಗಾ ಕೂಲಿಕಾರರಲ್ಲಿ ಜಾಗೃತಿ: ತಾಲೂಕಿನ ಹಲವು ಗ್ರಾ.ಪಂಗಳ ವ್ಯಾಪ್ತಿಯ ಜನರಿಗೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಕೆಲಸವನ್ನು ಗ್ರಾ.ಪಂಗಳು ನೀಡುತ್ತಿವೆ. ಕೂಲಿಕಾರರು ತಮ್ಮ ಗ್ರಾಮಗಳಿಂದ ಕೆರೆ ಹೂಳೆತ್ತಲು ಬೇರೆ ಕಡೆ ಟ್ರಾÂಕ್ಟರ್‌ಗಳಲ್ಲಿ ಗುಂಪಾಗಿ ಕೊರೊನಾ ಮಾರ್ಗಸೂಚಿ ಇಲ್ಲದೇ ಮಾಸ್ಕ್ ಧರಿಸದೇ ಹೋಗುತ್ತಿರುವುದು ಕಂಡು ಬರುತ್ತಿದೆ. ಇಂತಹ ಪ್ರಕರಣಗಳು ಜರುಗದಂತೆ ಗ್ರಾ.ಪಂ ಪಿಡಿಒಗಳು ಸಂಬಂಧಪಟ್ಟವರು ಕೂಲಿಕಾರರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.