ಕೊಪ್ಪಳದಲ್ಲೂ ಕೋವಿಡ್‌ ಪರೀಕ್ಷಾ ಲ್ಯಾಬ್‌


Team Udayavani, Apr 19, 2020, 6:55 PM IST

kopala-tdy-1

ಕೊಪ್ಪಳ: ತಿಂಗಳಾಂತ್ಯದೊಳಗೆ ಜಿಲ್ಲಾ ಕೇಂದ್ರದಲ್ಲೇ ಕೋವಿಡ್‌-19 ಪರೀಕ್ಷಾ ಲ್ಯಾಬ್‌ ಪ್ರಾರಂಭಿಸಲಿದ್ದೇವೆ. ರ್ಯಾಪಿಡ್‌ ಟೆಸ್ಟ್‌ ಸಹಿತ ನಡೆಯಲಿದೆ. ಇದೆಲ್ಲದಕ್ಕೂ 1.50 ಕೋಟಿ ರೂ. ಅನುದಾನ ವೆಚ್ಚವಾಗಲಿದೆ ಎಂದು ಕೃಷಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯು ಈವರೆಗೂ ಗ್ರೀನ್‌ ಜೋನ್‌ನಲ್ಲಿ ಇರುವುದು ಸಮಾಧಾನದ ಸಂಗತಿಯಾಗಿದೆ. ಈವರೆಗೂ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲ. ಇಲ್ಲಿನ ಜಿಲ್ಲಾಡಳಿತ ಹಾಗೂ ಶಾಸಕ, ಸಂಸದರು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.

ಜಿಲ್ಲೆಯ ಜನರ ಗಂಟಲು ದ್ರವ ಪರೀಕ್ಷೆ ಬೇರೆಡೆ ನಡೆಯುತ್ತಿದ್ದವು. ಇನ್ಮುಂದೆ ಜಿಲ್ಲೆಯ ಜನರ ಗಂಟಲು ದ್ರವ ಸೇರಿ ಕೆಲವೊಂದು ಪರೀಕ್ಷೆಗಳನ್ನು ಜಿಲ್ಲೆಯಲ್ಲಿಯೇ ನಡೆಯಲಿವೆ. ಇದೇ ತಿಂಗಳಾಂತ್ಯದೊಳಗೆ ಕೋವಿಡ್‌ -19 ಲ್ಯಾಬ್‌ ಆರಂಭವಾಗಲಿದೆ. ಇದರೊಟ್ಟಿಗೆ ರ್ಯಾಪಿಡ್‌ ಟೆಸ್ಟ್‌ ಸಹಿತ ನಡೆಯಲಿದೆ. ಈಗಾಗಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೀವ್ರಗತಿಯಲ್ಲಿ ಕೆಲಸ ಆರಂಭಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಜಿಲ್ಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್‌ನ ಕೊರತೆಯಿಲ್ಲ. ಅಗತ್ಯಕ್ಕೆ ತಕ್ಕಂತೆ ಇವೆ ಎಂದರಲ್ಲದೇ, ಜಿಲ್ಲೆಯಲ್ಲಿ 286 ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈವರೆಗೂ 262 ಜನರ ವರದಿ ಬಂದಿದ್ದು, ಅವೆಲ್ಲವೂ ನೆಗಟಿವ್‌ ಆಗಿವೆ. ಇನ್ನೂ 24 ವರದಿ ಬರುವುದು ಬಾಕಿಯಿದೆ ಎಂದರು.

ಗಡಿಯಲ್ಲಿ ಇಬ್ಬರ ಆರೋಗ್ಯ ತಪಾಸಣೆ: ಇನ್ನೂ ಜಿಲ್ಲೆಯಲ್ಲಿ ಭತ್ತ ಬೆಳೆಯಾಗಿದ್ದು, ಅದನ್ನು ಅಂತಾರಾಜ್ಯಕ್ಕೆ ಮಾರಾಟ, ಸಾಗಾಟ ಮಾಡುವುದಕ್ಕೆ ತುಂಬಾ ಸಮಸ್ಯೆಯಾಗುತ್ತಿದ್ದು, ಇದನ್ನರಿತು ಕೃಷಿ ಸಂಬಂಧಿತ ಯಾವುದೇ ಉತ್ಪನ್ನಗಳನ್ನು ಸಾಗಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಭತ್ತ ಸೇರಿ ಯಾವುದೇ ಉತ ನ್ನವು ಜಿಲ್ಲೆಯ ಗಡಿ ಹಾಗೂ ಅಂತಾರಾಜ್ಯದ ಗಡಿಗೆ ತೆರಳಿದಾಗ ಅಲ್ಲಿ ವಾಹನ ಚಾಲಕ ಹಾಗೂ ಕ್ಲೀನರ್‌ ಇಬ್ಬರ ಆರೋಗ್ಯ ತಪಾಸಣೆ ಮಾಡಿಯೇ ಬಿಡಲಾಗುತ್ತದೆ. ಅವರಿಗೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್‌ ಬಳಕೆ ಮಾಡುವ ಕುರಿತು ಸೂಚನೆ ನೀಡಲಾಗಿದೆ. ಅನ್ಯ ಜಿಲ್ಲೆ ಅಥವಾ ಅನ್ಯ ರಾಜ್ಯಕ್ಕೆ ಉತನ್ನ ಮಾರಾಟದ ವೇಳೆ ವಾಹನದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಕಲ್ಪಿಸಿದೆ ಎಂದರು.

ಜಿಲ್ಲೆಯಲ್ಲಿ ಲಾಕ್‌ಡೌನ್‌ ಬಳಿಕ ಜನತೆಗೆ ಕಿರಾಣಿ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಬೆಳಗಿನ ಅವಧಿಗೆ ಕಿರಾಣಿ ಅಂಗಡಿ ತೆರೆಯಲು ಸೂಚಿಸಿದೆ. ಕೃಷಿಗೆ ಸಂಬಂಧಿತ ಕೆಲವೊಂದು ಕಾರ್ಯ ಚಟುವಟಿಕೆಗಳಿಗೂ ಲಾಕ್‌ಡೌನ್‌ನಿಂದ ವಿನಾಯತಿ ನೀಡಿದೆ. ಅಲ್ಲದೇ, ಮನೆ ಮನೆಗೂ ತರಕಾರಿ ಪೂರೈಕೆ ಕಾರ್ಯ ನಡೆದಿದೆ. ಈ ವೇಳೆ ಕೆಲವು ಕಿರಾಣಿ ಅಂಗಡಿ ಮಾಲೀಕರು ಜನರಿಂದ ಕಿರಾಣಿಗೆ ದುಬಾರಿ ದರ ಪಡೆಯುತ್ತಿರುವ ದೂರು ಕೇಳಿ ಬರುತ್ತಿವೆ. ಅಂಥವರ ಮೇಲೆ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು. ಇನ್ಮುಂದೆ ಕಡ್ಡಾಯವಾಗಿ ಎಲ್ಲ ಮಾಲೀಕರು ಅಂಗಡಿಗಳ ಮುಂದೆ ಎಂಆರ್‌ಪಿ ದರ ಪ್ರಕಟಿಸಬೇಕು. ಹೆಚ್ಚು ದರ ಪಡೆಯುವಂತಿಲ್ಲ. ಈ ಬಗ್ಗೆ ಅಧಿಕಾರಿಗಳು ಕೂಡಲೇ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.

ಸಂಸದ ಸಂಗಣ್ಣ ಕರಡಿ, ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ, ಶಾಸಕರಾದ ಹಾಲಪ್ಪ ಆಚಾರ್‌, ಪರಣ್ಣ ಮುನವಳ್ಳಿ, ಬಸವರಾಜ ದಡೆಸೂಗೂರು, ರಾಘವೇಂದ್ರ ಹಿಟ್ನಾಳ, ಡಿಸಿ ಸುನೀಲ್‌ ಕುಮಾರ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.