ಕೋವಿಡ್ ವೈರಸ್‌ಗೆ ಮೂರ್‍ನಾಲ್ಕು ತಿಂಗಳಲ್ಲಿ ಔಷಧಿ: ಬಯ್ಯಾಪೂರ
Team Udayavani, Aug 16, 2020, 4:45 PM IST
ಕುಷ್ಟಗಿ: ಕೋವಿಡ್ ವೈರಸ್ ಶಾಶ್ವತವಲ್ಲ, ಕೇವಲ ಕ್ಷಣಿಕವಾಗಿದೆ. ಇದು ಇನ್ನೂ ಮೂರ್‍ನಾಲ್ಕು ತಿಂಗಳು ಇರುತ್ತದೆಯೋ ಗೊತ್ತಿಲ್ಲ ಅಷ್ಟೊತ್ತಿಗೆ ಈ ವೈರಸ್‌ಗೆ ಮದ್ದು ಕಂಡು ಹಿಡಿಯುವ ಸಾಧ್ಯತೆಗಳಿವೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೊತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾರಕ ಕೋವಿಡ್ ವೈರಸ್‌ಗೆ ಮದ್ದು ಕಂಡು ಹಿಡಿಯಲು ಹಲವು ರಾಷ್ಟ್ರಗಳು ಸಂಶೋಧನೆಯಲ್ಲಿ ನಿರತವಾಗಿದ್ದು, ಅದರಲ್ಲಿ ನಮ್ಮ ರಾಷ್ಟ್ರವೂ ಒಂದಾಗಿದೆ. ಜಾಗತಿಕವಾಗಿ ಮಾರಾಕವಾದ ಕೋವಿಡ್ -19 ಮಹಾಮಾರಿ ತಲ್ಲಣಗೊಳಿಸಿದ್ದು, ಸಂಪೂರ್ಣ ನಿರ್ಮೂಲನೆಗೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ವತ್ಛತೆ ಕಾಯ್ದುಕೊಳ್ಳಬೇಕು. ಕೊರೊನಾ ವೈರಸ್ ತಗುಲಿದವರನ್ನು ಮಾನವೀಯತೆಯಿಂದ ಕಾಣಬೇಕು ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ವಿರುದ್ಧ ಹೋರಾಟ ಮಾಡಲೇಬೇಕಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಡುವ ಸಂದರ್ಭದಲ್ಲಿ ತ್ಯಾಗ ಬಲಿದಾನವಾಗಿವೆ. ಅದೇ ರೀತಿ ಕಣದ ಮಾರಕ ವೈರಸ್ ವಿರುದ್ಧ ಹಲವಾರು ವಾರಿಯರ್ಸ್ ಗಳು, ಅಧಿಕಾರಿಗಳು, ಸಚಿವರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದರು. ತಹಶೀಲ್ದಾರ್ ಎಂ. ಸಿದ್ದೇಶ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬಿಇಒ ಚನ್ನಬಸಪ್ಪ ಮಗ್ಗದ್, ಸಹಾಯಕ ಕೃಷಿ ಅಧಿಕಾರಿ ಮಹಾದೇವಪ್ಪ ನಾಯಕ್, ಸಿಡಿಪಿಒ ಜಯಶ್ರೀ ರಾಜಪುರೋಹಿತ, ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ, ಎಎಸ್‌ಐ ಹೀರಪ್ಪ ನಾಯಕ್, ರವೀಂದ್ರ ಬಾಕಳೆ ಮತ್ತಿತರಿದ್ದರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸರಳವಾಗಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.