CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

ಜಲಾಶಯ ನಿರ್ಮಾಣವಾಗಿ 68 ವರ್ಷ ; ಪ್ರತಿ 50 ವರ್ಷಕ್ಕೆ ಡ್ಯಾಂ ಗೇಟ್‌ ಬದಲಿಸಬೇಕು

Team Udayavani, Sep 22, 2024, 11:31 PM IST

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

ಕೊಪ್ಪಳ: ತುಂಗಭದ್ರಾ ಜಲಾಶಯ ನಿರ್ಮಾಣವಾಗಿ 68 ವರ್ಷ ಗತಿಸಿವೆ. ಪ್ರತಿ 50 ವರ್ಷಕ್ಕೆ ಡ್ಯಾಂ ಗೇಟ್‌ಗಳನ್ನು ಬದಲಿಸಬೇಕು. ಆದರೆ ತುಂಗಭದ್ರಾ ಡ್ಯಾಂ ಗೇಟ್‌ ನಿರ್ವಹಣೆ ಸರಿಯಾಗಿ ಮಾಡಿದ್ದರಿಂದ 68 ವರ್ಷಗಳ ಬಾಳಿಕೆ ಬಂದಿದೆ. ಗೇಟ್‌ ಮುರಿದ ಬಳಿಕ ತಜ್ಞರ ಸಮಿತಿ ರಚಿಸಿದ್ದು, ಅವರು ಕೊಟ್ಟಿರುವ ವರದಿ ಅನುಸಾರ ಮುಂದೆ ಗೇಟ್‌ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಡ್ಯಾಂ ಗೇಟ್‌ ಮುರಿದಾಗ ರೈತರಿಗೆ ತುಂಬಾ ಆತಂಕವಿತ್ತು. ಡ್ಯಾಂನಿಂದ 20 ಟಿಎಂಸಿಗೂ ಹೆಚ್ಚಿನ ನೀರು ಹರಿದು ಹೋಗಿತ್ತು. ಆಗ ಡ್ಯಾಂಗೆ ಭೇಟಿ ನೀಡಿದ್ದೆ. ಗೇಟ್‌ ರಿಪೇರಿಯಾಗಿ ಮತ್ತೆ ಡ್ಯಾಂ ತುಂಬುತ್ತದೆ ಎಂದಿದ್ದೆ. ಮಳೆಯ ಕೃಪೆಯಿಂದಾಗಿ ಮತ್ತೆ ಜಲಾಶಯ ತುಂಬಿದೆ. ಮುಂಗಾರಿನ ಬೆಳೆಗೆ ನೀರು ದೊರೆಯುತ್ತದೆ. ಹಿಂಗಾರು ಬೆಳೆಗೂ ನೀರು ಲಭಿಸುವ ಭರವಸೆಯಿದೆ ಎಂದರು.

ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಹಾಗೂ ಅಧಿಕಾರಿಗಳ ತಂಡದ ಶ್ರಮದಿಂದ ಗೇಟ್‌ ದುರಸ್ತಿ ಮಾಡಲಾಯಿತು. ಹಿಂದುಸ್ಥಾನ್‌, ನಾರಾಯಣ, ಜಿಂದಾಲ್‌ ಸಂಸ್ಥೆಗಳ ಸಹಾಯವೂ ದೊರೆಯಿತು. ಇದರಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮತ್ತೆ ಮಳೆ ಬಂದು ತುಂಗಭದ್ರೆ ತುಂಬಿದ್ದರಿಂದ ರೈತರಲ್ಲಿ ಸಂತಸ ತಂದಿದೆ. ಮಳೆರಾಯನಿಗೆ ಸರಕಾರದ ಪರವಾಗಿ ಧನ್ಯವಾದ ಹೇಳುವೆ ಎಂದರು.

ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳ ಕುರಿತು ಚರ್ಚೆ ಮಾಡಿದ್ದೇವೆ. ಇದರಲ್ಲಿ 46 ಕಲ್ಯಾಣ ಕರ್ನಾಟಕದ್ದಾಗಿವೆ ಎಂದು ಹೇಳಿದರು.

ಹಾಲು ದರ ಹೆಚ್ಚಳದ ಲಾಭ ಸಂಪೂರ್ಣ ರೈತರಿಗೆ
ಹಾಲಿನ ದರ ಹೆಚ್ಚಳದ ವಿಚಾರದಲ್ಲಿ ಮಾಗಡಿಗೆ ತೆರಳಿದ್ದ ವೇಳೆ ಅಲ್ಲಿನ ರೈತರು ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹಾಲಿನ ಪ್ರೋತ್ಸಾಹ ಧನ ಕಡಿಮೆಯಿದೆ ಎಂದು ಮನವಿ ಮಾಡಿದ್ದರು. ಹಾಲಿನ ದರ ಹೆಚ್ಚಳ ಮಾಡಿ ಎಂದು ನನಗೆ ಮನವಿ ಮಾಡಿದ್ದರು. ಆಗ ಒಂದು ವೇಳೆ ಸಚಿವ ಸಂಪುಟದಲ್ಲಿ ಇದನ್ನು ನಿರ್ಧರಿಸಿದರೆ ಹಾಲಿನ ದರದ ಹೆಚ್ಚಳದ ಲಾಭವನ್ನು ರೈತರಿಗೆ ಸಂಪೂರ್ಣವಾಗಿ ವರ್ಗಾಯಿಸಲಾಗುವುದು ಎಂದು ಭರವಸೆ ನೀಡಿದೆ. ಈ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಿದರೆ ಆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ

R-Ashok

C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.