ಡ್ಯಾಂ ಕಾಮಗಾರಿ ಪರಿಶೀಲನೆ
Team Udayavani, May 9, 2020, 4:05 PM IST
ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ನರೇಗಾ ಚೆಕ್ ಡ್ಯಾಂ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ಮಾಡಿದರು.
ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಕೂಲಿಕಾರರಿಗೆ ಇದೊಂದು ಒಳ್ಳೆಯ ಯೋಜನೆಯಾಗಿದೆ. ವೈಯಕ್ತಿಕ ಕಾಮಗಾರಿ ಹಾಗೂ ಸಾಮೂಹಿಕ ಕಾಮಗಾರಿಗಳಲ್ಲಿ ತೊಡಗಿಸಿಕೊಂಡು ಯೋಜನೆಯ ಲಾಭವನ್ನು ಪಡೆಯಬೇಕು. ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಿ ನಮ್ಮ ಹಾಗೂ ಕುಟುಂಬದ ಜೀವವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ನಂತರ ಕೂಲಿಕಾರರಿಗೆ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಿಸಿದರು. ತಾಪಂ ಇಒ ಟಿ. ವೆಂಕೋಬಪ್ಪ ಮಾತನಾಡಿ, ತಾಲೂಕಿನಲ್ಲಿ ಒಟ್ಟು 52,919 ಜಾಬ್ ಕಾರ್ಡ್ ನೀಡಲಾಗಿದ್ದು ಇದರಲ್ಲಿ ತಾಲೂಕಿನಲ್ಲಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವುದು ಹೀಗೆ ಒಟ್ಟು 458 ಕಾಮಗಾರಿ ಪ್ರಾರಂಭವಾಗಿವೆ. 3,847 ಕೂಲಿಕಾರರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 24,856 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ರೈತರು ಗಮನಹರಿಸಿ ವೈಯಕ್ತಿಕ ಕಾಮಗಾರಿಗಳಾದ ಬದು ನಿರ್ಮಾಣ, ಕೃಷಿಹೊಂಡ ಮಾಡಿಕೊಳ್ಳುವಂತೆ ತಿಳಿಸಿದರು.
ಜಿಪಂ ಸದಸ್ಯ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಯಿ, ಗ್ರಾಪಂ ಅಧ್ಯಕ್ಷೆ ಚೆನ್ನಮ್ಮ ವಾಲ್ಮೀಕಿ, ಉಪಾಧ್ಯಕ್ಷೆ ಗೀತಾ ಬಿದರೂರ, ಶರಣಯ್ಯ ಸಸಿಮಠ, ಕಿನ್ನಾಳ ಪಿಡಿಒ ವೀರನಗೌಡ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.