ಪ್ರೇಯಸಿ ಶವ ಕೊಳವೆ ಬಾವಿಯಲ್ಲಿ ಹೂತಿಟ್ಟ ಪ್ರೇಮಿ
Team Udayavani, Jun 25, 2021, 8:54 PM IST
ಯಲಬುರ್ಗಾ: ಅಪ್ರಾಪ್ತ ಯುವತಿಯನ್ನು ಪ್ರೇಮಿಯೇ ಹತ್ಯೆ ಮಾಡಿ ಶವವನ್ನು ಕೊಳವೆ ಬಾವಿಯಲ್ಲಿ ಹೂತಿಟ್ಟ ಘಟನೆ ತಾಲೂಕಿನ ಹುಲೆಗುಡ್ಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೃತಪಟ್ಟವಳನ್ನು ಹುಲೆಗುಡ್ಡ ಗ್ರಾಮದ ಮದ್ದಾನವ್ವಾ (17) ಎಂದು ಗುರುತಿಸಲಾಗಿದೆ. ಸಂಬಂಧಿಕಾರದ ಹುಲೆಗುಡ್ಡ ಗ್ರಾಮದ ಯುವಕ ಯಲ್ಲಪ್ಪ ಭೂಮನಗೌಡ್ರ ಹಾಗೂ ಮದ್ದಾನವ್ವಾ ಪರಸ್ಪರ ಪ್ರೀತಿಸುತ್ತಿದ್ದರು. ಇನ್ನೆರೆಡು ತಿಂಗಳ ನಂತರ ಯುವತಿಗೆ 18 ವರ್ಷ ವಯಸ್ಸಾದ ಮೇಲೆ ಮದುವೆ ಮಾಡುವುದಾಗಿ ಮನೆಯವರು ತಿಳಿಸಿದ್ದರು. ಆದ್ದರಿಂದ ಮದ್ದಾನವ್ವಳನ್ನು ಯಲ್ಲಪ್ಪ ಒಂದು ವರ್ಷದಿಂದ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಯುವತಿ ಮೇಲೆ ಅನುಮಾನಗೊಂಡು ಕತ್ತು ಹಿಸಕಿ ಹತ್ಯೆಗೈದಿದ್ದಾನೆ. ನಂತರ ಯುವತಿ ಶವವನ್ನು ಹುಲೆಗುಡ್ಡ ಗ್ರಾಮದ ಪಕ್ಕದಲ್ಲಿರುವ ಮುರಡಿ ಗ್ರಾಮದ ಹೊರವಲಯದಲ್ಲಿರುವ ಕೆರೆ ಪಕ್ಕದ ಜಮೀನಿನಲ್ಲಿ ಕೊರೆಸಿದ್ದ ವಿಫಲ ಕೊಳವೆಬಾವಿಯಲ್ಲಿ ಹೂತಿದ್ದಾನೆ. ಇದಕ್ಕೆ ಯುವಕನ ಸಹೋದರ ರಮೇಶ ಕೈ ಜೋಡಿದ್ದಾನೆ ಎನ್ನಲಾಗಿದೆ.
ಯುವತಿ ಕಾಣೆಯಾಗಿದ್ದನ್ನು ಗಮನಿಸಿದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯಲ್ಲಪ್ಪನನ್ನು ಬಂಧಿಸಿದ್ದು, ತಲೆಮರೆಸಿಕೊಂಡ ರಮೇಶನ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಸಿಬಿ ಮೂಲಕ ಯುವತಿ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ಡಿವೈಎಸ್‌ಪಿ ಗೀತಾ, ಎಸಿ ನಾರಾಯಣ ಕನಕರಡ್ಡಿ, ಸಿಪಿಐ ಎಂ. ನಾಗರಡ್ಡಿ, ಪಿಎಸ್‌ಐ ಶಿವಕುಮಾರ ಮುಗ್ಗಳ್ಳಿ ಶವ ಶೋಧ ಕಾರ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.