ಡೆಂಘೀಗೆ ಭಯ ಪಡುವ ಅಗತ್ಯವಿಲ್ಲ
•ನೀರಿನ ಪಾತ್ರೆಗಳನ್ನು ಸದಾ ಮುಚ್ಚಿಡಿ•ಜ್ವರ ಬಂದರೆ ವೈದ್ಯರಲ್ಲಿ ಶೀಘ್ರ ತಪಾಸಣೆ ಮಾಡಿಸಿಕೊಳ್ಳಿ
Team Udayavani, May 18, 2019, 2:25 PM IST
ಕೊಪ್ಪಳ: ನಗರದಲ್ಲಿ ಆರೋಗ್ಯ ಇಲಾಖೆ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಲಿಂಗರಾಜ್ ಚಾಲನೆ ನೀಡಿದರು.
ಕೊಪ್ಪಳ: ನಗರದ ಹಳೇ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಜನ ಜಾಗೃತಿ ಜಾಥಕ್ಕೆ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ| ಲಿಂಗರಾಜ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆಯಿಲ್ಲ. ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಂಬಯ್ಯ ಬಿ. ಮಾತನಾಡಿ, ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಇವು ಹಗಲು ಹೊತ್ತಿನಲ್ಲೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರ ವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು, ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಜನಸಮುದಾಯಕ್ಕೆ ತಿಳಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ರಮೇಶ್ ಕೆ. ಮಾತನಾಡಿ, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣೆ ಸಲಕರಣೆಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸಿ ನೀರು ತುಂಬಿ ಮುಚ್ಚಿಡಲು ಜನಸಮುದಾಯಕ್ಕೆ ಮನವಿ ಮಾಡಿದರು. ಡೆಂಘೀ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನ ಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.
ಕೊಪ್ಪಳ ತಾಲೂಕು ಆರೋಗ್ಯಾಧಿಕಾರಿ ಡಾ| ರಾಮಾಂಜನೇಯಲು, ರಸಾಯನಿಕ ಪರೀಕ್ಷಕ ಡಾ| ಪ್ರಶಾಂತ್, ಉಪ ಜಿಲ್ಲಾ ಆರೋಗ್ಯ ಶಿಕ¡ಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಿರಿಯ ಮಹಿಳಾ ತರಬೇತಿ ಕೇಂದ್ರದ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು, ಕೊಪ್ಪಳ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.