ಡೆಂಘೀ ನಿಯಂತ್ರಣ ಎಲ್ಲರ ಹೊಣೆ
ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ•ನೀರು ತುಂಬಿದ ಪಾತ್ರೆಗೆ ಮುಚ್ಚಳ ಹಾಕಿ
Team Udayavani, May 17, 2019, 5:40 PM IST
ಕೊಪ್ಪಳ: ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಆರ್.ಎಸ್. ಪೆದ್ದಪ್ಪಯ್ಯಮಾತನಾಡಿದರು.
ಕೊಪ್ಪಳ: ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಘೀ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಜಿಪಂ ಸಿಇಒ ಆರ್.ಎಸ್. ಪೆದ್ದಪ್ಪಯ್ಯ ಹೇಳಿದರು.
ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಗುರುವಾರ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆ ಹಾಗೂ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡೆಂಘೀ ಜ್ವರ ವೈರಸ್‌ನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕಿತ ಈಡೀಸ್ ಜಾತಿಯ ಸೊಳ್ಳೆಯ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನಿಂತ ನೀರಿನಲ್ಲಿ ಹಾಗೂ ನೀರು ಶೇಖರಣೆ ಸಲಕರಣೆಗಳಲ್ಲಿ ಮೊಟ್ಟೆ ಇಟ್ಟು ಸಂತನಾಭಿವೃದ್ಧಿ ಮಾಡುತ್ತವೆ. ಈ ಸೊಳ್ಳೆಯ ಬಹುತೇಕ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಹಾಗಾಗಿ ಡೆಂಘಿ ಜ್ವರ ಹತೋಟಿ ಪ್ರತಿಯೊಬ್ಬರ ಕೈಯಲ್ಲಿದೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ನಿಟ್ಟಿ ಅಗತ್ಯ ಜಾಗೃತಿ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡು ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪ್ರಭಾರಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಂಬಯ್ಯ ಮಾತನಾಡಿ, ಒಂದು ಸೋಂಕಿತ ಸೊಳ್ಳೆಯು ಮನುಷ್ಯನನ್ನು ಕಚ್ಚಿದ 8ರಿಂದ 14 ದಿನಗಳ ನಂತರ ಡೆಂಘೀ ಜ್ವರದ ಲಕ್ಷಣಗಳು ಕಂಡು ಬರುತ್ತವೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಚರ್ಮದ ಮೇಲೆ ಗುಳ್ಳೆಗಳು, ಮಾಂಸ ಖಂಡಗಳಲ್ಲಿ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಇಲ್ಲ. ಈ ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ನಿಂತ ನೀರು ಸೊಳ್ಳೆಯ ತವರು, ಆದ್ದರಿಂದ ಎಲ್ಲಾ ಬಗೆಯ ನೀರಿನ ತೊಟ್ಟಿ ಡ್ರಮ್, ಬ್ಯಾರಲ್, ಏರ್ ಕೂಲರ್‌ಗಳನ್ನು ವಾರಕೊಮ್ಮೆ ಖಾಲಿ ಮಾಡಿ ಮತ್ತು ಸ್ವಚ್ಛಗೊಳಿಸಿ ಒಣಗಿಸಿ ಪುನಃ ನೀರು ತುಂಬಿ ಸೊಳ್ಳೆಗಳು ನುಸುಳದಂತೆ ಮುಚ್ಚಳಿಕೆಯಿಂದ ಭದ್ರವಾಗಿ ಮುಚ್ಚಬೇಕು. ಮನೆಯ ಒಳಗೆ ಮತ್ತು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಬೇಕು. ಮನೆಯ ಸುತ್ತ ಬಯಲಿನಲ್ಲಿ ಮತ್ತು ಮಾಳಿಗೆ ಮೇಲೆ ಟೈರ್ ಟ್ಯೂಬ್, ಒಡೆದ ಬಕೆಟ್, ಎಳನೀರು ಚಿಪ್ಪು, ಹೂವಿನ ಕುಂಡ, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಈಡೀಸ್ ಸೊಳ್ಳೆಯು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಈ ಸಮಯದಲ್ಲಿ ಆದಷ್ಟು ಮೈತುಂಬಾ ಬಟ್ಟೆಯನ್ನು ಧರಿಸಬೇಕು. ಮನೆಯ ಒಳಗೆ ಸೊಳ್ಳೆ ಬರದಂತೆ ಕಿಟಕಿ, ಬಾಗಿಲುಗಳಿಗೆ ಜಾಲರಿ ಅಳಸುವುದು ಹಾಗೂ ಸೊಳ್ಳೆ ನಿರೋಧಕ ಬಳಸಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಸಾರ್ವಜನಿಕರು ಈ ಕ್ರಮಗಳನ್ನು ಅನುಸರಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ| ಲಿಂಗರಾಜ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಮಹೇಶ, ತಾಲೂಕು ಆರೋಗ್ಯಾಧಿಕಾರಿ ಡಾ| ರಾಮಾಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.