ಬಾಗಿಲು ತೆರೆಯುವ ಮೊದಲೇ ದೇವಸ್ಥಾನಕ್ಕೆ ಭಕ್ತರ ದಂಡು
Team Udayavani, Jun 2, 2020, 12:39 PM IST
ಕೊಪ್ಪಳ: ತಾಲೂಕಿನ ಹುಲಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಬಾಗಿಲು ತೆರೆಯುವ ಮೊದಲೇ ಜಿಲ್ಲೆಯ ವಿವಿಧಡೆಯಿಂದ ಭಕ್ತರ ದಂಡು ಆಗಮಸಿ ಬಾಗಿಲಲ್ಲಿ ದರ್ಶನ ಪಡೆದು ತೆರಳುತ್ತಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿತ್ತು. ಸರ್ಕಾರ ದೇವಸ್ಥಾನ ಸೇರಿದಂತೆ ಎಲ್ಲವನ್ನ ಬಂದ್ ಮಾಡಿತ್ತು. ಬಾಗಿಲು ಬಂದ್ ಮಾಡಿ ಯಾರೂ ದರ್ಶನಕ್ಕೆ ಬರದಂತೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಈಚೆಗೆ ಲಾಕ್ ಡೌನ್ ತೆರೆದು ವಿನಾಯತಿ ನೀಡಿದೆ. ಆದರೆ ಕೋವಿಡ್-19 ನಿಯಂತ್ರಣಕ್ಕಾಗಿ ಇನ್ನೂ ದೇವಸ್ಥಾನಗಳನ್ನು ತೆರೆದಿಲ್ಲ.
ಜೂನ್ 8 ರ ನಂತರ ದೇವಾಲಯ ಆರಂಭಕ್ಕೆ ಸಿದ್ದತೆ ನಡೆಸಿದೆ. ಆದರೆ ಕೊಪ್ಪಳ ತಾಲೂಕಿನ ಹುಲಗಿಯ ನಾಡಿನ ಪ್ರಸಿದ್ದ ಹುಲಿಗೆಮ್ಮ ದೇವಿ ದೇವಸ್ಥಾನದ ಬಾಗಿಲು ಬಂದ್ ಮಾಡಿದ್ದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಬಾಗಿಲಲ್ಲೆ ದೇವಿಯ ಭಾವಚಿತ್ರಕ್ಕೆ ಕಾಯಿ ಕರ್ಪೂರ ಮಾಡಿಸಿ ಪೂಜೆ ಸಲ್ಲಿಸಿ ತೆರಳುತ್ತಿದ್ದಾರೆ. ಅದರಲ್ಲೂ ಮಂಗಳವಾರ ದೇವಿ ವಾರವಾಗಿದ್ದರಿಂದ ಭಕ್ತರ ದಂಡು ಹೆಚ್ಚಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ಪದೇ ಪದೆ ಸೂಚನೆ ನೀಡಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚನೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.