ನಂದಿಹಳ್ಳಿಯಲ್ಲಿ ಜಿಲ್ಲಾಧಿಕಾರಿ ಸಂಧಾನ ಸಭೆ
ಗುಂಪು ಘರ್ಷಣೆಗೆ ಅಕ್ರಮ ಮರಳು ಸಾಗಾಟ ಕಾರಣ
Team Udayavani, May 24, 2022, 4:54 PM IST
ಕಾರಟಗಿ: ಗುಂಪು ಘರ್ಷಣೆ ನಡೆದ ತಾಲೂಕಿನ ನಂದಿಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹಾಗೂ ಅಧಿಕಾರಿಗಳು ಸೋಮವಾರ ಭೇಟಿ ಸಂಧಾನ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ, ಶನಿವಾರ ರಾತ್ರಿ ನಡೆದ ಘಟನೆ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ನಡೆದಿದ್ದು, ಇದು ಕಾನೂನು ಬಾಹಿರ ಚಟುವಟಿಕೆಯಾಗಿದೆ. ಗ್ರಾಮದ ಯಾರೇ ಆಗಲಿ ಮರಳು ಸಾಗಾಟದಲ್ಲಿ ತೊಡಗಿಸಿಕೊಳ್ಳಬಾರದು. ಈಗಾಗಲೇ ಜಿಲ್ಲಾಡಳಿತ ಸಂಪೂರ್ಣ ನಿಗಾವಹಿಸಿದ್ದು, ಅಕ್ರಮದಲ್ಲಿ ತೊಡಗುವವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.
ಹಲ್ಲೆಗೊಳಗಾದವರಿಗೆ ಪಶು ಇಲಾಖೆಯಿಂದ ಪಶುಪಾಲನೆಗೆ, ಕಿರಾಣಿ ಅಂಗಡಿ ತೆರೆಯುವವರಿಗೆ ಸೇರಿದಂತೆ ಯಾವುದೇ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವವರಿಗೆ ಆದಿ ಜಾಂಬವ ನಿಗಮದಿಂದ ಸಾಲ ಸೌಲಭ್ಯ, ಧನ ಸಹಾಯ, ಇನ್ನು ದಲಿತರು ಸೇರಿದಂತೆ ಎಲ್ಲರಿಗೂ ನಿವೇಶನ ನೀಡುವುದಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಿಗಳನ್ನು ಗುರುತಿಸಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ. ಘಟನೆ ಹಿನ್ನೆಲೆ ಜಿಲ್ಲಾಡಳಿತ ಸೂಕ್ತ ನಿಗಾ ವಹಿಸಿದೆ. ಸಾಮರಸ್ಯ ಮೂಡಿಸಲು ಇನ್ನೊಂದು ಸಾರಿ ಬೇಕಾದರೂ ಸಂಧಾನ ಸಭೆ ಏರ್ಪಡಿಸುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಸಮಸ್ಯೆಯನ್ನು ನಿಭಾಯಿಸಿ. ಘಟನೆ ಮರುಕಳಿಸದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.
ದಲಿತ ಮುಖಂಡರಾದ ಎಚ್.ಎನ್. ಬಡಿಗೇರ್ ಮತ್ತು ಯಲ್ಲಪ್ಪ ಕಟ್ಟಿಮನಿ ಮಾತನಾಡಿ, ಇತ್ತೀಚಿಗೆ ನಂದಿಹಳ್ಳಿ ಸೇರಿ ವಿವಿಧೆಡೆ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ದಲಿತರಿಗೆ ರಕ್ಷಣೆಯೊಂದಿಗೆ ಕೇರಿಗಳಿಗೆ ಮೂಲ ಸೌಕರ್ಯ ಹಾಗೂ ಹಲ್ಲೆಗೊಳಗಾದವರಿಗೆ ಆಹಾರ ಕಿಟ್, ಧನ ಸಹಾಯ, ಸ್ವಯಂ ಉದ್ಯೋಗಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಜಿಪಂ ಸಿಇಒ ಪೌಜಿಯಾ ತರನ್ನುಮ್, ಎಸ್‌ಪಿ ಅರುಣಾಂಗುÏ ಗಿರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದಪ್ಪ, ತಹಸೀಲ್ದಾರ್ ರವಿ ಅಂಗಡಿ, ಇಒ ಡಾ| ಆರ್. ಮೋಹನ್, ಡಿವೈಎಸ್‌ಪಿ ಆರ್.ಎಸ್. ಉಜ್ಜಿನಿಕೊಪ್ಪ, ಪಿಐ ವೀರಭದ್ರಯ್ಯ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ತುಗಲೆಪ್ಪ ದೇಸಾಯಿ, ಸಿಬ್ಬಂದಿ ಗಂಗಪ್ಪ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯ ಜಡಿಯಪ್ಪ ಬೂದಗುಂಪಾ, ಭರತರಾಜ್ ಗಂಗಾವತಿ ಇನ್ನಿತರರು ಇದ್ದರು.
ಕಾರಟಗಿ ತಾಲೂಕು ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಆದರೆ ಇತ್ತೀಚಿಗೆ ಮರಳು ತುಂಬುವ ಸಂಬಂಧ ಕೆಲವರು ಗಲಾಟೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ಈ ಅಕ್ರಮ ತಡೆಯಲು ಜಿಲ್ಲಾಡಳಿತ ಸದಾ ಎಚ್ಚರಿಕೆಯಿಂದ ಇರುತ್ತದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಎಲ್ಲರೂ ಸಹೋದರ ಭಾವನೆಯಿಂದ ಇರಬೇಕು. ಪರಸ್ಪರ ಗೌರವ ವಿನಿಮಯವಾಗಲೇಬೇಕು. ನಾವೆಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡೋಣ. ಶಾಂತಿಯನ್ನು ಕಾಪಾಡೋಣ. –ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.