ಹಬ್ಬದಾಚರಣೆ ವೇಳೆ ಕಾನೂನು ಉಲ್ಲಂಘಿಸದಿರಿ

•ಡಿಜೆ ಸೌಂಡ್‌-ಪಿಒಪಿ ಮೂರ್ತಿ ನಿಷೇಧ•ಗಣೇಶೋತ್ಸವದಲ್ಲಿ ಸಂಸ್ಕೃತಿ ಅನಾವರಣಗೊಳ್ಳಲಿ

Team Udayavani, Aug 28, 2019, 11:40 AM IST

kopala-tdy-2

ಕೊಪ್ಪಳ: ಮೊಹರಂ ಹಾಗೂ ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಶಾಂತಿಪಾಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಮಾತನಾಡಿದರು.

ಕೊಪ್ಪಳ: ಗೌರಿ-ಗಣೇಶ ಹಾಗೂ ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದತೆ ಹಾಗೂ ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್‌ ಹೇಳಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ನಡದ ಜಿಲ್ಲಾಮಟ್ಟದ ಶಾಂತಿಪಾಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯಲ್ಲಿ ಮೊಹರಂ ಹಾಗೂ ಗೌರಿ-ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಈ ವರ್ಷವೂ ಹೆಚ್ಚಿನ ಶಬ್ಧ ಹೊರಸೂಸುವ ಡಿಜೆ ಸೌಂಡ್‌ ಸಿಸ್ಟಮ್‌ ನಿಷೇಧಿಸಲಾಗಿದೆ. ಶಬ್ಧದ ತೀವ್ರತೆ ಅಳೆಯುವ ಮಾಪನ ಯಂತ್ರಗಳನ್ನು ಬಳಸಲಾಗುತ್ತಿದೆ. ಆದ್ದರಿಂದ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮಂಡಳಿ ಸಹಕರಿಸಬೇಕು. ಮೊಹರಂ ಹಬ್ಬ ಕೂಡ ಗಣೇಶ ಹಬ್ಬದ ಸಂದರ್ಭದಲ್ಲೇ ಆಚರಿಸಲಾಗುವುದರಿಂದ ಈ ಹಬ್ಬಗಳನ್ನು ಎಲ್ಲ ಸಮುದಾಯದವರು ಪರಸ್ಪರ ಸೌಹರ್ದದಿಂದ ಆಚರಿಸಬೇಕು ಎಂದರು.

ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಮೂರ್ತಿ ತಯಾರಿಸುವುದನ್ನು ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಣ್ಣಿನಿಂದಲೇ ಗಣೇಶ ಮೂರ್ತಿ ತಯಾರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸುವ ಸಂಘಟಕರು ನಗರಸಭೆ, ಜೆಸ್ಕಾಂ ಹಾಗೂ ಪೊಲೀಸ್‌ ಇಲಾಖೆಯಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಪೊಲೀಸ್‌ ಠಾಣೆಗಳಲ್ಲಿ ಏಕ-ಗವಾಕ್ಷಿ ಪದ್ಧತಿಯಲ್ಲಿ ಪರವಾನಗಿ ಒದಗಿಸಲಾಗುವುದು. ವಿದ್ಯುತ್‌ ತಂತಿ, ವಿದ್ಯುತ್‌ ಕಂಬಗಳಿಂದ ಸುರಕ್ಷಿತ ಅಂತರದಲ್ಲಿ ಚಿಕ್ಕ ಗಾತ್ರದ ಪರಿಸರ ಸ್ನೇಹಿ ಗಣೇಶ ಮೂರ್ತಿ ಕೂರಿಸಬೇಕು ಎಂದರು.

ಕೊಪ್ಪಳ ನಗರ ವ್ಯಾಪ್ತಿಯ ಗಣೇಶ ಮೂರ್ತಿ ವಿಸರ್ಜನೆಗೆ ಹುಲಿಕೆರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಕೆರೆಯ ಆಳ ಕಹಾಗೂ ನೀರಿನ ಪ್ರಮಾಣ ಹೆಚ್ಚಿರುವುದರಿಂದ ವಿಸರ್ಜನೆ ಸಂದರ್ಭ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಆಳದವರೆಗೆ ಬ್ಯಾರಿಕೇಡ್‌ ನಿರ್ಮಿಸಲು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು. ವಿಸರ್ಜನಾ ಮೆರವಣಿಗೆ ಸಂದರ್ಭ ಮಂಡಳಿ ಸದಸ್ಯರು ಮದ್ಯಪಾನ ಮಾಡಿ ಗಲಾಟೆ ಮಾಡುವುದು, ಅಶ್ಲೀಲ ನೃತ್ಯ ಮಾಡುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದೇಶ ಮೀರಿ ನಿಗದಿಗಿಂತ ಹೆಚ್ಚಿನ ಶಬ್ಧ ಹೊರಸೂಸುವ ಡಿಜೆ ಸಿಸ್ಟಂ ಬಳಸಿದರೆ ಅವುಗಳನ್ನು ಜಪ್ತಿ ಮಾಡಲಾಗುತ್ತದೆ ಎಂದರು. ವಿದ್ಯುತ್‌ ಸಂಪರ್ಕ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಮಣ್ಣಿನಿಂದ ಮಾಡಿದ ಗಣಪತಿ ಮೂರ್ತಿಯನ್ನೇ ಬಳಸಬೇಕು. ಕುಡಿಯುವ ನೀರಿನ ಮೂಲಗಳಾದ ಬಾವಿ, ಕೆರೆಗಳಲ್ಲಿ ರಾಸಾಯನಿಕ ಬಣ್ಣಯುಕ್ತ ಗಣೇಶ ಮೂರ್ತಿಗಳನ್ನು ವಿಸರ್ಜಿಸಬಾರದು. ಹೆಚ್ಚು ಶಬ್ಧ ಬರುವ ಪಟಾಕಿಗಳನ್ನು ಬಳಸಬೇಡಿ ಎಂದರು.

ಸಭೆಯಲ್ಲಿ ಎಸ್‌ಪಿ ರೇಣುಕಾ ಸುಕುಮಾರ, ಡಿವೈಎಸ್‌ಪಿ ವೆಂಕಟಪ್ಪ ನಾಯಕ, ನಗರಸಭೆ ಆಯುಕ್ತ ಸುನೀಲ್ ಕುಮಾರ, ತಹಶೀಲ್ದಾರ್‌ ಜೆ.ಬಿ. ಮಜ್ಜಿಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಗಣೇಶ ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಮತ್ತಿತರರಿದ್ದರು.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.