ದೋಟಿಹಾಳ: ಬಿರುಗಾಳಿ-ಮಳೆಗೆ ಜನ ತತ್ತರ
Team Udayavani, May 24, 2019, 3:55 PM IST
ದೋಟಿಹಾಳ: ಗ್ರಾಮದ ಸುತ್ತಮುತ್ತ ಭಾರಿ ಗಾಳಿ, ಮಳೆಗೆ ವಿದ್ಯುತ್ ಕಂಬ, ಗಿಡಮರಗಳು ನೆಲಕ್ಕುರುಳಿದ್ದು, ಮನೆ ಮೇಲ್ಛಾವಣಿಯ ಶೀಟ್ಗಳು ಹಾರಿ ಹೋಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಗುರುವಾರ ಸಂಜೆ ಬಿರುಗಾಳಿ ಸಮೇತ ಮಳೆಯಾಯಿತು. ಕೆಲವೇ ನಿಮಿಷಗಳಲ್ಲಿ ಬಿರುಗಾಳಿಯಿಂದ ಆಸ್ತಿಪಾಸ್ತಿ ಹಾನಿಯಾಯಿತು. ಬಿರುಗಾಳಿ ಪರಿಣಾಮ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಸಾಕಷ್ಟು ಗಿಡ ಮರಗಳು ನೆಲಕ್ಕುರುಳಿವೆ. ಗ್ರಾಮದ ಪ್ರಹ್ಲಾದ ಜನಿವಾರ ಮನೆಯ ಮೇಲ್ಛಾವಣಿ ಶೀಟ್ಗಳು ಗಾಳಿಗೆ ಹಾರಿಹೋಗಿವೆ. ಗ್ರಾಮದ ಮುಖ್ಯ ರಸ್ತೆ ಪಕ್ಕದ ಚರಂಡಿ ತುಂಬಿ ಹರಿದ ಕಾರಣ ಕೆಲವು ಕಾಲ ಸಂಚಾರಕ್ಕೆ ಅಡಚಣೆಯಾಯಿತು. ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿವೆ.
ಹನುಮಸಾಗರ: ಹನುಮಸಾಗರದಲ್ಲಿ ಬಿರುಗಾಳಿಯ ಸಹಿತ ಬಾರಿ ಮಳೆಗೆ ತಗಡುಗಳು ಹಾರಿ ಹೋದವು. ಸಂಜೆ ಬಿರುಗಾಳಿಯ ಸಹಿತ ಪ್ರಾರಂಭವಾದ ಮಳೆಯಿಂದಾಗಿ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಅಂಗಡಿಯ ತಗಡುಗಳು ಹಾರಿಹೋಗಿವೆ. ್ತ ಅರ್ದ ಗಂಟೆಗೂ ಹೆಚ್ಚು ಸಮಯ ಮಳೆಯಾಯಿತು. ಬಿರುಗಾಳಿ ಮಳೆಗೆ ತಗಡುಗಳು ಹಾರಿ ಬಾಲಕಿಯರ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಿದ್ದಿವೆ. ಶಾಲೆಯಲ್ಲಿ ಯಾರು ಇರದ ಕಾರಣ ಅನಾಹುತ ಸಂಭವಿಸಿಲ್ಲ. ಶಾಲಾ ಆವರಣ ಮಳೆ ನೀರಿನಿಂದ ಕೆರೆಯಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.