ದೋಟಿಹಾಳ: ಚೆರಗ ಚೆಲ್ಲುವ ಹಬ್ಬ ಆಚರಿಸಿದ ಮುಸ್ಲಿಂ ಸಮುದಾಯ

ಮುಸ್ಲಿಂ ಬಾಂಧವರಿಂದ ಭೂಮಿತಾಯಿಗೆ ಪೂಜೆ

Team Udayavani, Dec 23, 2022, 4:11 PM IST

news10

ದೋಟಿಹಾಳ: ರಾಜ್ಯ ದೇಶದಲ್ಲಿ ಧರ್ಮದ ದಂಗಲ್ ಆರಂಭವಾದರೂ, ಇಂದು ಮಾತ್ರ ಈ ಹಬ್ಬ ಆಚರಣೆಯಲ್ಲಿ ಎಲ್ಲರೂ ಒಂದೇ, ಉತ್ತರ ಕರ್ನಾಟಕದಲ್ಲಿ ಹಿಂದು ಧರ್ಮದವರು ಮಾತ್ರ ಭೂತಾಯಿಗೆ ಪೂಜೆ ಸಲ್ಲಿಸುವದಲ್ಲ. ಅನೇಕ ಕಡೆಗಳಲ್ಲಿ ಎಳ್ಳ ಅಮಾವಾಸ್ಯೆ ದಿನದಂದು “ಚೆರಗ ಚೆಲ್ಲುವ ಹಬ್ಬ” ಎಂದೇ ಪ್ರಸಿದ್ಧಿಯಾದ ಈ ಹಬ್ಬವನ್ನು ಕೇವಲ ಹಿಂದುಗಳು ಮಾತ್ರವಲ್ಲದೆ ಮುಸ್ಲಿಂ ಬಾಂಧವರು ಕೂಡ ತಮ್ಮ ಹೊಲಗಳಲ್ಲಿ ಭೂತಾಯಿಗೆ ಪೂಜೆ ಸಲ್ಲಿಸುವ ಮೂಲಕ ಈ ಹಬ್ಬವನ್ನು ಆಚರಿಸಿರುವುದು ಕಂಡು ಬಂತು.

ಗ್ರಾಮದ ಅನೇಕ ಮುಸ್ಲಿಂ ಬಾಂಧವರು ತಮ್ಮ ಹೊಲಗಳಲ್ಲಿ ಭೂತಾಯಿ ಪೂಜೆ ಸಲ್ಲಿಸಲು ಹಿಂದೂ ಧರ್ಮಗಳ ಮನೆಗಳಿಂದ ಮತ್ತು ಅಂಗಡಿಯಲ್ಲಿ ಕುಂಕುಮ ಹರಿಶಿಣ ಹಾಗೂ ವಿಭೂತಿಯನ್ನು ಕರೆದಿಸಿಕೊಂಡು ಅವುಗಳನ್ನು ತಮ್ಮ ಹೊಲದಲ್ಲಿರುವ ಬನ್ನಿ ಮಹಾಕಾಳಿಗೆ ಶೀರಿ ಕಣ ಏರಿಸಿ ವಿಶೇಷ ಪೂಜೆ ಸಲ್ಲಿಸಿ, ಈ ಹಬ್ಬವನ್ನು ಆಚರಿಸುತ್ತಾರೆ.

ಉತ್ತರ ಕರ್ನಾಟಕದ ಭಾಗದಲ್ಲಿ ಆಚರಿಸಲ್ಪಡುವ ಜಾನಪದ ಹಬ್ಬಗಳು ಅನೇಕ. ಅವುಗಳಲ್ಲಿ ಎಳ್ಳ ಅಮವಾಸ್ಯೆಯಂದು ಶುಕ್ರವಾರ ಗ್ರಾಮ ಮತ್ತು ಗ್ರಾಮದ ಸುತ್ತಮುತ್ತ ಗ್ರಾಮಗಳ ಸೀಮಿಯಲ್ಲಿ ‘ಚೆರಗ ಚೆಲ್ಲುವ ಹಬ್ಬ’ವಿಶಿಷ್ಟವಾಗಿ ಆಚರಿಸುವುದು ಕಂಡು ಬಂತು.

ತಾವು ನಂಬಿರುವ ಮಣ್ಣನ್ನು ದೈವಭಾವದಿಂದ ಪೂಜಿಸುವ ಆಚರಣೆ ಇದಾಗಿದೆ. ತಮ್ಮ ಶ್ರಮಕ್ಕೆ ತಕ್ಕಂತೆ ಉತ್ತಮ ಫಸಲನ್ನು ಕೊಡುವ ಭೂಮಿತಾಯಿಯನ್ನು ಪೂಜಿಸಿ, ಹೊಲದ ತುಂಬೆಲ್ಲಾ ಚೀಲಗಳು ಪೂರ್ತಿತುಂಬಿ ಹೊರಗೆ ಚೆಲ್ಲುವಷ್ಟು ಫಸಲನ್ನು ನೀಡಲಿ ಎಂದು ಆಚರಿಸುವ ಹಬ್ಬವೇ ಗ್ರಾಮೀಣ ಭಾಗದ ರೈತರ ‘ಚೆರಗ ಚೆಲ್ಲುವ ಹಬ್ಬ’ವಾಗಿದೆ.

ರೈತರು ತಮ್ಮ ತಮ್ಮ ಹೊಲಗಳಲ್ಲಿ ‘ಚೆರಗ ಚೆಲ್ಲುವ ಹಬ್ಬ’ವನ್ನು ಆಚರಿಸುತ್ತಿದರುವದು ಶುಕ್ರವಾರ ಗ್ರಾಮದ ಸುತ್ತಮುತಲು ಗ್ರಾಮಗಳ ಹೊಲಗಳಲ್ಲಿ ಕಂಡುಬಂತು. ಮಾರ್ಗಶಿರ ಮಾಸದಲ್ಲಿ ಬರುವ ಎಳ್ಳು ಅಮಾವಾಸ್ಯೆ ಅಪ್ಪಟ ರೈತರ ಹಬ್ಬ ಹೊಲಗಳಲ್ಲಿ ಬೆಳೆದು ನಿಂತಿರುವ ಹಿಂಗಾರು ಪೈರುಗಳ ನಡುವೆ ಬನ್ನಿ ಮರಗಳಿಗೆ, ಬನ್ನಿಕಂಟಿಗೆ ಸೀರೆ ಉಡಿಸಿ, ಐದು ಕಲ್ಲುಗಳನ್ನು ಇಟ್ಟು ಭೂ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ “ಹುಲ್ ಹುಲ್‌ಗೋ ಚಲಾಂಬರಗೋ’ಎಂದು ಕೂಗುತ್ತ ಮನೆಯಿಂದ ತಂದ ಆಹಾರವನ್ನು ಹೊಲದಲ್ಲಿ ಚೆಲುತ್ತಾರೆ. ಇದನೇ ಚರಗ ಚೆಲ್ಲುವುದು ಎಂದು ಕರೆಯುತ್ತಾರೆ. ಈ ಹಬ್ಬದ ವಿಶೇಷ. ಅಮವಾಸ್ಯೆ 3-4 ದಿನ ಇರುವಾಗಲೇ ರೈತರ ಮನೆಗಳಲ್ಲಿ ಹಬ್ಬದ ತಯಾರಿ ನಡೆಯುತ್ತದೆ. ಎಳ್ಳು ಹಚ್ಚಿದ ಸಜ್ಜೆ, ಜೋಳದ ರೋಟ್ಟಿ ತಯಾರಿಸುವುದು, ನಾನಾ ಬಗೆಯ ಚಟ್ನಿ, ಕಾಳು, ಎಣ್ಣೆಗಾಯಿ, ಎಳ್ಳು ಮತ್ತು ಸೇಂಗಾ ಹೋಳಿಗೆ ತಯಾರಿಸಲಾಗುತ್ತದೆ.

ಅಮಾವಾಸ್ಯೆ ದಿನ ಬೆಳಗ್ಗೆ ಎದ್ದವರೇ ರೈತರು ಬಂಡಿ ಸಿದ್ಧಗೊಳಿಸಿದರು. ಮನೆಯಲ್ಲಿ ಮಾಡಿದ್ದ ಬಗೆ ಬಗೆಯ ಸಿಹಿಯನ್ನು ದೊಡ್ಡ ಬುತ್ತಿಯ ಗಂಟು ಕಟ್ಟಿಕೊಂಡು ಕುಟುಂಬದವರೆಲ್ಲರೂ ಎತ್ತಿನ ಬಂಡಿಯನ್ನು ಕುಳಿತು ಹೊಲಕ್ಕೆ ಹೋಗುವುದು ದೊಡ್ಡ ಸಡಗರದಂತೆ ಸುತ್ತ-ಮುತ್ತ ಗ್ರಾಮಗಳಲ್ಲಿ ಕಾಣುತ್ತದೆ. ಜತೆಗೆ ತಮ್ಮ ಸಂಬಂಧಿಗಳು, ಊರಿನ ಇತರರು, ಹಿತೈಷಿಗಳನ್ನು ಹೊಲಕ್ಕೆ ಕರೆದೊಯ್ದು, ಚರಗ ಚೆಲ್ಲಿದ ನಂತರ ಹೊಲಗಳಲ್ಲಿ ಸಾಮೂಹಿಕ ಊಟ ಸವಿದು ಆತ್ಮೀಯತೆ ಮೆರೆತರು.

ಎತ್ತಿನ ಬಂಡಿಯ ಅಲಂಕಾರ: ಎತ್ತುಗಳಿಗೆ ಝೂಲ ಹಾಕಿ ಕೋಡಣಸು, ಗೊಂಡೆ, ಹಣೆಕಟ್ಟುಗಳಿಂದ ಶೃಂಗರಿಸುವುದು ಒಂದು ವಿಶೇಷವಾಗಿರುತ್ತದೆ. ಎತ್ತುಗಳು ಕೊರಳ ಮತ್ತು ಹಣೆಗೆಜ್ಜೆಯನ್ನು ನುಡಿಸುತ್ತ ಹೊಲಗಳ ಕಡೆಗೆ ಬಂಡಿ ಎಳೆದುಕೊಂಡು ಸಾಗುವುದು ಗ್ರಾಮೀಣ ಸೊಗಡು ಶುಕ್ರವಾರ ಮತ್ತೆ ಕಂಡು ಬಂತು.

ಈ ಹಬ್ಬ ರೈತರ ಹಬ್ಬವಾಗಿದ್ದು, ಜಾತಿ, ಮತ ಭೇದವಿಲ್ಲ. ಒಕ್ಕಲುತನ ಅವಲಂಬಿಸಿರುವ ಮುಸ್ಲಿಂ ಕುಟುಂಬಗಳೂ ಎಳ್ಳು ಅಮಾವಾಸ್ಯೆಯಂದು ಹೊಲಕ್ಕೆ ಹೋಗಿ ಚರಗ ಚೆಲ್ಲುವುದು ಈ ಭಾಗದಲ್ಲಿ ಕಂಡುಬರುತ್ತದೆ. ಹಿರಿಯ ರೈತರಿಗೆ ಭೂವಿಗೆ ಪೂಜೆ ಸಲ್ಲಿಸಿದ ಧನ್ಯತೆಯಾದರೆ ಮಕ್ಕಳಿಗೆ ಹಸಿ ಕಡಲೆ ಕಿತ್ತು ತಿನ್ನುವ ಸಂಭ್ರಮ. ಹೀಗೆ ಹೊಲದಲ್ಲಿ ಸಂಜೆವರೆಗೆ ಆಟವಾಡುವ ಖುಷಿ ಇರುತ್ತದೆ. ಹೆಚ್ಚಾಗಿ ಎರೆ ಭೂಮಿ ಪ್ರದೇಶದಲ್ಲಿ ಈ ಹಬ್ಬ ಸಾಕಷ್ಟು ವಿಜೃಂಭಣೆಯಿಂದ ಆಚರಿಸಿದರು.

-ಮಲ್ಲಿಕಾರ್ಜುನ ಮೆದಿಕೇರಿ, ದೋಟಿಹಾಳ, ಕೊಪ್ಪಳ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.