ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಕ್ಯಾಂಡಲ್ ಹೊತ್ತಿಸಿ ಸ್ಮರಣೆ
Team Udayavani, Dec 6, 2021, 6:46 PM IST
ಗಂಗಾವತಿ: ಸಂವಿಧಾನಶಿಲ್ಪಿ ಸಮಸಮಾಜದ ಕನಸುಗಾರ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ನಿಮಿತ್ಯ ನಗರದ ಕೋರ್ಟ್ ಎದುರುಗಡೆ ಇರುವ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಚಿಂತಕರು ಮತ್ತು ಸಾಹಿತಿಗಳ ನೇತೃತ್ವದಲ್ಲಿ ಕ್ಯಾಂಡಲ್ ಗಳನ್ನು ಹೊದಿಸಿ ಸ್ಮರಣೆ ಮಾಡಲಾಯಿತು .
ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಜೆ ಭಾರದ್ವಾಜ್ ಮಾತನಾಡಿ,ಅಂಬೇಡ್ಕರ್ ಸಂವಿಧಾನವನ್ನು ದೇಶಕ್ಕೆ ನೀಡುವ ಮೂಲಕ ದೇಶದಲ್ಲಿ ಶೋಷಿತರು ದಲಿತರು ಹಿಂದುಳಿದವರು ಮತ್ತು ಮಹಿಳೆಯರಿಗೆ ಅಲ್ಪಸಂಖ್ಯಾತರಿಗೆ ತಮ್ಮ ಹಕ್ಕುಗಳನ್ನು ದೊರಕಿಸಿಕೊಟ್ಟಿದ್ದಾರೆ. ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರನ್ನು ಸ್ಮರಣೆ ಮಾಡುವ ಮೂಲಕ ಅವರ ಜ್ಞಾನವನ್ನು ಭರಿಸಲಾಗುತ್ತದೆ ಮತ್ತು ಅವರು ಸಂವಿಧಾನ ರಚನೆಯ ಸಂದರ್ಭದಲ್ಲಿ ಮಾಡಿದ ಕಾರ್ಯಗಳು ಎಲ್ಲಾ ಭಾರತೀಯರು ನಿತ್ಯವೂ ಸ್ಮರಿಸಬೇಕು. ಅಂಬೇಡ್ಕರ್ ಸಂವಿಧಾನವನ್ನು ರಚನೆ ಮಾಡುವ ಮೂಲಕ ಈ ದೇಶದ ಮೂಲನಿವಾಸಿಗಳ ಹಕ್ಕುಗಳನ್ನು ಮತ್ತು ದೇಶದ ಆಸ್ತಿಯಲ್ಲಿ ಎಲ್ಲರ ಪಾಲೂ ಇದೆ ಎಂದು ಮನವರಿಕೆ ಮಾಡಿದ್ದಾರೆ .ಪ್ರಸ್ತುತ ಇರುವ ಸರ್ಕಾರಗಳಿಗೆ ಸಂವಿಧಾನದ ಅದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಆದ್ದರಿಂದ ಚುನಾವಣೆ ಸಂದರ್ಭಗಳಲ್ಲಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಈ ದೇಶವನ್ನ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಂಡು ಹೋಗುವವರಿಗೆ ಬೆಂಬಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಡಾ. ರಾಜಶೇಖರ್ ನಾರಿನಾಳ,ರುದ್ರಮ್ಮ ಹಾಸಿನಾಳ ,ರಮೇಶ ಗಬ್ಬೂರ್, ಪತ್ರಕರ್ತ ಕೆ. ನಿಂಗಜ್ಜ ,ಶರಣಪ್ಪ ಸಹಿದಾಬಾನು ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.