ಉದಯವಾಣಿ ಫಲಶ್ರುತಿ: ವೀಲ್‍ಚೇರ್ ನಲ್ಲಿ ಬಂದು ಪರೀಕ್ಷೆ ಬರೆದವನ ನೆರವಿಗೆ ಶಿಕ್ಷಣ ಇಲಾಖೆ
Team Udayavani, Apr 4, 2022, 12:52 PM IST
ದೋಟಿಹಾಳ: ಕಳೆದ ಸೋಮವಾರ ಆರಂಭವಾದ ಎಸ್ಎಸ್ಎಲ್‍ಸಿ ಪರೀಕ್ಷೆಗೆ ಹೆಸರೂರು ಗ್ರಾಮದ ವಿಶೇಷ ಚೇತನ ವಿದ್ಯಾರ್ಥಿ ಮೂರು ಕಿ.ಮೀ ದೂರ ವೀಲ್‍ಚೇರ್ ನಲ್ಲಿ ಬಂದು ಪರೀಕ್ಷೆ ಬರೆದಿರುವ ಕುರಿತಾಗಿ ಉದಯವಾಣಿ ವೆಬ್‍ಸೈಟ್‍ನ ವರದಿಯ ಬೆನ್ನಲ್ಲೇ ಶಿಕ್ಷಣ ಇಲಾಖೆ ವಿದ್ಯಾರ್ಥಿಯ ನೆರವಿಗೆ ನಿಂತಿದೆ.
ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ವಿಶೇಷಚೇತನ ವಿದ್ಯಾರ್ಥಿ ಮಲೇಗೌಡನನ್ನು ಕರೆದುಕೊಂಡು ಹೋಗಿ ಬರಲು ಹೆಸರೂರು ಗ್ರಾಮದ ಸರಕಾರಿ ಶಾಲಾ ಶಿಕ್ಷಕರೊಬ್ಬರಿಗೆ ಜವಾಬ್ದಾರಿಯನ್ನು ನೀಡಿದ್ದಾರೆ. ಸೋಮವಾರ ಖಾಸಗಿ ವಾಹನದ ಮೂಲಕ ಹೆಸರೂರು ಗ್ರಾಮದಿಂದ ಪರಿಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ.
ಮಲೇಗೌಡ ಹೆಸರೂರು ಗ್ರಾಮದಿಂದ ದೋಟಿಹಾಳ ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ಸುಮಾರು ಮೂರು ಕಿಲೋಮೀಟರ್ ದೂರದಿಂದ ವೀಲ್ ಚೇರಿನಲ್ಲಿ ಕುಳಿತುಕೊಂಡು ತಂದೆಯ ಸಹಾಯದಿಂದ ಆಗಮಿಸಿ ಪರೀಕ್ಷೆ ಬರೆಯುತ್ತಿದ್ದ.
ಇದನ್ನೂ ಓದಿ:ವಿಟ್ಲ : ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ 112 ತುರ್ತು ಸೇವೆಯ ವಾಹನ, ಇಬ್ಬರಿಗೆ ಗಾಯ
ವಿದ್ಯಾರ್ಥಿಯ ತಂದೆ ಚಂದ್ರಪ್ಪ ಮಾತನಾಡಿ, ಬಿಸಿಲಲ್ಲಿ ಮಗನನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಮೂರು ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ನನ್ನ ಮಗನ ಪರೀಕ್ಷೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾರಿಗೆ ವ್ಯವಸ್ಥೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇಲಾಖೆಯ ಅಧಿಕಾರಿಗಳು ಮಲೇಗೌಡನನ್ನು ಉಳಿದ ಪರೀಕ್ಷಾ ದಿನಗಳಲ್ಲಿ ಕರೆದುಕೊಂಡು ಹೋಗಿ ಬರುವ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ಹೆಸರೂರು ಗ್ರಾಮದ ಸರಕಾರಿ ಶಾಲೆ ಶಿಕ್ಷಕ ವೀರಭದ್ರಗೌಡ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.