ಭಾರತದ ವಿಶ್ವಮಟ್ಟದ ಸಾಧನೆಗೆ ಶಿಕ್ಷಣವೇ ಮೂಲ ಕಾರಣ
Team Udayavani, Sep 4, 2020, 6:01 PM IST
ಸಾಂದರ್ಭಿಕ ಚಿತ್ರ
ಯಲಬುರ್ಗಾ: ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಯಾವುದೇ ಕಾರಣಕ್ಕೂದುಡಿಮೆಗೆ ಕಳುಹಿಸಬಾರದು ಎಂದು ಯುಪಿಎಲ್ ಅಡ್ವಾಂಟಾ ಕಂಪನಿಯ ಆರ್‌ಜಿ ಎಂ. ಶ್ರೀಕಾಂತ ಕೆ.ಎಸ್. ಹೇಳಿದರು.
ತಾಲೂಕಿನ ಜಿ. ವೀರಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಯುಪಿಎಲ್ ಅಡ್ವಾಂಟಾ ಕಂಪನಿಯಿಂದ ವತಿಯಿಂದ ವಿದ್ಯಾರ್ಥಿಗಳ ಡೆಸ್ಕ್ ವಿತರಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಅತ್ಯಂತ ವೇಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದಕ್ಕೆ ಶಿಕ್ಷಣವೇ ಮೂಲ ಕಾರಣವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೇ ಶಿಕ್ಷಣವಂತರನ್ನಾಗಿ ಮಾಡಿ. ನಮ್ಮ ಕಂಪನಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ರೈತರಿಗಾಗಿ ಹಲವಾರು ಯೊಜನೆಗಳ ಮುಖಾಂತರ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕ್ರಮವಹಿಸಲಾಗುತ್ತಿದೆ. ಪ್ರತಿವರ್ಷ ಇಂತಹ ಹಲವಾರು ಕಾರ್ಯಗಳನ್ನು ಮಾಡಲಾಗುತ್ತಿದೆ. ಶಾಲಾ ಮಕ್ಕಳಿಗೆ ಡಸ್ಕ್, ಸಮವಸ್ತ್ರ, ಕಂಪ್ಯೂಟರ್, ಪ್ರೋಜೆಕ್ಟರ್ ಸ್ಕ್ರೀನ್ ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಹಲವಾರು ಶಾಲೆಗಳಿಗೆ ವಿತರಿಸಲಾಗಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಮ್ಮ ಕಾರನೂರು ಮಾತನಾಡಿ, ಸಂಘ ಸಂಸ್ಥೆಯವರು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ವಸ್ತು ದೇಣಿಗೆ ನೀಡುತ್ತಿದ್ದಾರೆ. ಇದರಿಂದ ಮಕ್ಕಳ ಕಲಿಕೆಗೆ ತುಂಬಾ ಅನುಕೂಲವಾಗುತ್ತದೆ. ಮಕ್ಕಳು ಸಾಮಾಗ್ರಿಗಳ ಪ್ರಯೋಜನ ಪಡೆದುಕೊಂಡು ಉತ್ತಮ ನಾಗರಿಕರಾಗಬೇಕು ಎಂದರು. ಗಿರೀಶ ಯಲಬುರ್ಗಾ, ಸುರೇಶ ಕುಷ್ಟಗಿ, ನಾಗರಾಜ ಸಾಲೇರ, ಕೋಟ್ರೇಶ ಹಿರೇಮಠ, ಉಮೇಶ ಹಡಪದ, ನಿಂಗರಾಜ ಬಿಸನಳ್ಳಿ, ವಿಜಯ ರಜಪೂತ, ಬಸು ಬಡಗಿ, ನಾಗರಾಜ ಹರಿಜನ, ಖಾದರಸಾಬ ನದಾಫ್, ಈಶಪ್ಪ ಹೋಳಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.