![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Dec 23, 2019, 1:13 PM IST
ಕೊಪ್ಪಳ: ನನ್ನ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರತಿ ಗ್ರಾಮಕ್ಕೂ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಮುದ್ದಾಬಳ್ಳಿ ಹಾಗೂ ಗೊಂಡಬಾಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬರುವ ಆರ್ಥಿಕ ವರ್ಷದಲ್ಲಿ ಸರಕಾರದಿಂದ ಸುಮಾರು 1000 ಕೋಟಿ ಅನುದಾನ ಮಂಜೂರು ಮಾಡಿಸಿ, ಗ್ರಾಮಗಳ ಜೊತೆಗೆ ಕೊಪ್ಪಳ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಗ್ರಾಮದ ಸೌಂದರ್ಯ ಹೆಚ್ಚಿಸಲಾಗುವುದು. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಈ ಬಾರಿ ಕ್ಷೇತ್ರದಲ್ಲಿ ಮಳೆಯ ಪ್ರಮಾಣ ಅ ಧಿಕವಾಗಿರುವುದರಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಪ್ರತಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರ ಆರೋಗ್ಯ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಆರೂವರೆ ವರ್ಷದಲ್ಲಿ ಹೆಚ್ಚು ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಪರ್ವವೇ ಸೃಷ್ಟಿಸಲಾಗಿದೆ ಎಂದರು.
ಜಿಪಂ ಸದಸ್ಯ ಗೂಳಪ್ಪ ಹಲಗೇರಿ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ಕೆ.ಒ.ಎಫ್ ಅಧ್ಯಕ್ಷ ಸುರೇಶರಡ್ಡಿ ಮಾಡಿನೂರ, ತಾಪಂ ಅಧ್ಯಕ್ಷ ಬಾಲಚಂದ್ರನ್, ತಾಪಂ ಸದಸ್ಯ ರಾಜೀವರಡ್ಡಿ, ನಿಂಗಪ್ಪ ಯತ್ನಟ್ಟಿ, ನಗರಸಭೆ ಸದಸ್ಯ ಅಕ್ಬರ್‌ಪಾಷಾ ಪಲ್ಟನ್, ಮುಖಂಡರಾದ ಬಸವರಡ್ಡೆಪ್ಪ ಹಳ್ಳಿಕೇರಿ, ಪ್ರಸನ್ನ ಗಡಾದ, ನವೋದಯ ವಿರೂಪಣ್ಣ, ಕೇಶವರಡ್ಡಿ, ಕೃಷ್ಣಾರಡ್ಡಿ ಗಲಿಬಿ, ಶರಣಪ್ಪ ಸಜ್ಜನ್, ಹನುಮೇಶ ಹೊಸಳ್ಳಿ, ಶಿವಕುಮಾರ, ಎಂ.ಡಿ. ಜಹೀರಅಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ ರಡ್ಡಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.