ಉದ್ಯೋಗ ಖಾತ್ರಿ ಯೋಜನೆ ಅಕ್ರಮ ತನಿಖೆಗೆ ಒತ್ತಾಯ
Team Udayavani, Jun 7, 2020, 2:40 PM IST
ಕುಷ್ಟಗಿ: ತಾಲೂಕಿನ ಕ್ಯಾದಿಗುಪ್ಪ ಗ್ರಾಪಂನಲ್ಲಿ 2019-20ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂದಾಜು 7 ಕೋಟಿ ರೂ. ಬೋಗಸ್ ಬಿಲ್ ಸೃಷ್ಟಿಸಿ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ವಿಶೇಷ ತನಿಖಾಧಿಕಾರಿಯನ್ನು ನೇಮಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರಕಾಶ ದಾಸರ್, ಮಹಾಂತೇಶ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಅಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಾಲಬಿ ಹುಸೇನಸಾಬ್ ಬೇವಿನಗಿಡ, ಪಿಡಿಒ, ಜೆಇ, ಕಾರ್ಯದರ್ಶಿ, ಕಂಪ್ಯೂಟರ್ ಆಪರೇಟರ್ ಭಾಗಿಯಾಗಿ ಅಂದಾಜು 7 ಕೋಟಿ ರೂ. ಕಾಮಗಾರಿ ನಡೆಸದೇ ಬೋಗಸ್ ಬಿಲ್ಲುಗಳನ್ನು ಸೃಷ್ಟಿಸಿದ್ದಾರೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಭ್ರಷ್ಟಾಚಾರ ಕುರಿತು ಪೂರಕ ದಾಖಲೆಗಳ ಸಮೇತ ಕುಷ್ಟಗಿ ತಾಪಂ ಹಿಡಿದು, ಜಿಪಂ ಸಿಇಒ, ಓಂಬುಡ್ಸಮನ್ ಜಿಪಂ ಕೊಪ್ಪಳ ಅವರಿಗೆ ಮನವಿ ಸಲ್ಲಿಸಿದರೂ ತನಿಖೆಗೆ ಮುಂದಾಗಿಲ್ಲ. ಈ ಅಕ್ರಮದಲ್ಲಿ ಭಾಗಿಯಾದ ಕ್ಯಾದಿಗುಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಲಾಲಬಿ ಬೇಗಂ ಹುಸೇನಸಾಬ್ ಬೇವಿನಗಿಡ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.