ತುಂಗಭದ್ರೆ ಒಡಲು ಖಾಲಿ ಖಾಲಿ
•ಮಳೆಯಬ್ಬರಕ್ಕೆ ರಾಜ್ಯದ ಹಲವು ಡ್ಯಾಂ ಭರ್ತಿ•ಅರ್ಧ ಕೂಡ ಭರ್ತಿಯಾಗಿಲ್ಲ ತುಂಗಭದ್ರಾ ಡ್ಯಾಂ
Team Udayavani, Aug 7, 2019, 1:11 PM IST
ಕೊಪ್ಪಳ: ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ವರುಣನ ಅಬ್ಬರಕ್ಕೆ ಹಲವು ಡ್ಯಾಂಗಳು ಭರ್ತಿಯಾಗಿವೆ. ಆದರೆ ತುಂಗಭದ್ರಾ ಜಲಾಶಯಕ್ಕೆ ಇನ್ನೂ ನಿರೀಕ್ಷಿತ ಪ್ರಮಾಣದ ನೀರು ಹರಿದು ಬರುತ್ತಿಲ್ಲ. ಮಂಗಳವಾರ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಭತ್ತದ ನಾಡಿನ ರೈತರು ಡ್ಯಾಂ ಭರ್ತಿಯಾಗಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.
ಕಳೆದ ವರ್ಷ ಮಲೆನಾಡು, ಕರಾವಳಿ ಪ್ರದೇಶ ಸೇರಿದಂತೆ ಶಿವಮೊಗ್ಗ ಭಾಗದಲ್ಲಿ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅತ್ಯಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು. ಜುಲೈ ಅಂತ್ಯಕ್ಕೆ ಜಲಾಶಯ ಭರ್ತಿಯಾಗಿ ರೈತರಿಗೆ ಖುಷಿ ತಂದಿತ್ತು. ಆದರೆ ಕಳೆದ ಬಾರಿ ಅಧಿಕಾರಿಗಳ ಅವೈಜ್ಞಾನಿಕ ನೀರು ನಿರ್ವಹಣೆಯ ನೀತಿಯಿಂದ ಎರಡನೇ ಬೆಳೆಗೆ ಪರಿಪೂರ್ಣ ನೀರು ಸಿಗಲೇ ಇಲ್ಲದಂತ ಸ್ಥಿತಿ ಎದುರಾಯಿತು.
ರಾಜ್ಯದೆಲ್ಲೆಡೆ ಮಳೆ ಅಬ್ಬರ: ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಹಲವು ಡ್ಯಾಂಗಳು ಭರ್ತಿಯಾಗಿವೆ. ಲಕ್ಷಾಂತರ ಕ್ಯೂಸೆಕ್‌ನಷ್ಟು ನೀರನ್ನು ಡ್ಯಾಂನಿಂದ ಹರಿ ಬಿಡಲಾಗಿದೆ. ಆದರೆ ಜುಲೈ ಕಳೆದರೂ ಜಲಾಶಯದ ಒಡಲಲ್ಲಿ ಕೇವಲ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಮಂಗಳವಾರ ಒಳ ಹರಿವಿನ ಪ್ರಮಾಣ 23,051 ಕ್ಯೂಸೆಕ್‌ನಷ್ಟಿದ್ದು ನಿರೀಕ್ಷೆಯನ್ನಿಡಲಾಗಿದೆ.
ರೈತರಲ್ಲಿ ನಿರೀಕ್ಷೆ: ಲಕ್ಷಾಂತರ ರೈತರು ಡ್ಯಾಂ ನೀರನ್ನೇ ನೆಚ್ಚಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ 36 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ಭತ್ತ ನಾಟಿಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಕಾಲುವೆಗೆ ನೀರು ಹರಿಸುವುದನ್ನೇ ಕಾಯುತ್ತಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ಡ್ಯಾಂ ಭರ್ತಿಯಾಗಿ ನಮ್ಮ ಬದುಕು ಸಾಗಲಿ ಎಂದೆನ್ನುತ್ತಿದ್ದಾರೆ. ಕಳೆದ ವರ್ಷ ಡ್ಯಾಂ ಭರ್ತಿಯಾಗಿದ್ದರೂ ಎರಡನೇ ಬೆಳೆಗೆ ನೀರು ಸಂಪೂರ್ಣ ಲಭಿಸಲಿಲ್ಲ. ನೀರಾವರಿ ಇಲಾಖೆಯ ಅಧಿಕಾರಿಗಳ ಅವೈಜ್ಞಾನಿಕ ನಿರ್ವಹಣೆಯಿಂದ ಹೀಗಾಗಿದೆ. ಈ ವರ್ಷವಾದರೂ ಎಚ್ಚರಿಕೆಯಿಂದ ನೀರು ನಿರ್ವಹಣೆ ಮಾಡಲಿ ಎಂದು ರೈತರು ಒತ್ತಾಯಿಸುತ್ತಿದ್ದಾರೆ.
ನೀರು ಹರಿಸಲು ಸೂಚನೆ: ಚಡ್ಯಾಂನಲ್ಲಿ 36 ಅಡಿ ನೀರು ಸಂಗ್ರಹವಾಗುತ್ತಿದ್ದಂತೆ ಈ ಭಾಗದ ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ, ಶಾಸಕ ಬಸವರಾಜ ದಢೇಸುಗೂರು ಸೇರಿ ಇತರೆ ಶಾಸಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿಎಂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಕಾಲುವೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಕಾಲುವೆಗೆ ಹಂತ ಹಂತವಾಗಿ ನೀರು ಹರಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಏನೇ ಆಗಲಿ, ಎಲ್ಲ ಡ್ಯಾಂಗಳಂತೆ ತುಂಗಭದ್ರಾ ಜಲಾಶಯಕ್ಕೂ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿ, ಡ್ಯಾಂ ಭರ್ತಿಯಾಗಲಿ. ಅನ್ನದಾತನ ಬಾಳು ಬೆಳಕಾಗಲಿ, ನೀರಾವರಿ ಅಧಿಕಾರಿಗಳು ಸರಿಯಾಗಿ ನೀರು ನಿರ್ವಹಣೆ ಮಾಡಲಿ ಎನ್ನುವ ಮಾತು ಅಚ್ಚುಕಟ್ಟು ಪ್ರದೇಶದ ರೈತಾಪಿ ವಲಯದಿಂದ ಕೇಳಿ ಬಂದಿದೆ.
ಐಸಿಸಿ ಇಲ್ಲದ ಕಾರಣ ಕಾಲುವೆಗೆ ನೀರು ಹರಿಸುವ ಕುರಿತಂತೆ ಕಾರ್ಯದರ್ಶಿಗಳಿಂದ ಅನುಮತಿ ಪಡೆಯುತ್ತಿದ್ದೇವೆ. ನಾನು ಬೆಂಗಳೂರಿನಲ್ಲಿಯೇ ಇದ್ದು ಅನುಮತಿಗಾಗಿ ಕಾಯುತ್ತಿದ್ದೇನೆ. ಇನ್ನೂ ಕಾಲುವೆಗೆ ನೀರು ಹರಿಸಿಲ್ಲ. ಸದ್ಯ ಡ್ಯಾಂನಲ್ಲಿ 36 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.•ಮಂಜಪ್ಪ, ಸಿಇ ತುಂಗಭದ್ರಾ ಡ್ಯಾಂ
•ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.