ಫೇಸ್ ಬುಕ್ ನಲ್ಲಿ ಪರಿಚಯ: ಬಳಿಕ ಪ್ರೀತಿ-ಮದುವೆ; ಯುವತಿಯ ಮೃತದೇಹ ಪತ್ತೆ !
Team Udayavani, Jun 23, 2021, 11:52 AM IST
ಗಂಗಾವತಿ: ಪ್ರೀತಿಸಿ ಮದುವೆಯಾದ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲ್ಲೂಕಿನ ಸಣಾಪುರದಲ್ಲಿ ಜರುಗಿದೆ.
ಶಿಲ್ಪಾ (19) ಶವವಾಗಿ ಪತ್ತೆಯಾದ ಯುವತಿ. ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಳೆಹೊನ್ನೂರು ಹೋಬಳಿಯ ಹೊಸಕೊಪ್ಪ ಗ್ರಾಮದ ವಾಸವಿದ್ದ ಈಕೆ ಕಳೆದ ಡಿಸೆಂಬರ್ ನಲ್ಲಿ ಫೇಸ್ ಬುಕ್ ಮೂಲಕ ಪರಿಚಯವಾದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಕಳೆದ ಮಂಗಳವಾರ (22 ಜೂನ್) ರಾತ್ರಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವತಿಯ ದೇಹ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ ಪಾಲಕರು ಇದನ್ನು ಕೊಲೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಕಳೆದ 1 ವರ್ಷದ ಹಿಂದೆ ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್, ಮುಖಾಂತರ ಗಂಗಾವತಿ ತಾಲ್ಲೂಕಿನ ಸಾಣಾಪುರದ ವಿಕ್ರಂ (22) ಎಂಬ ಯುವಕನ ಜೊತೆ ಪರಿಚಯವಾಗಿ 2020 ಡಿಸೆಂಬರ್ 20 ರಂದು ಇಬ್ಬರು ಮದುವೆಯಾಗಿದ್ದಾರೆ. ನಂತರ ಇಬ್ಬರೂ ಸಾಣಾಪುರದ ಯುವಕನ ಮನೆಯಲ್ಲಿ ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ: ‘ಸಂಚಾರಿ’ ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!
ಇತ್ತೀಚೆಗೆ ವರದಕ್ಷಿಣೆ ಮತ್ತು ಪ್ರೀತಿಸಿ ಮದುವೆಯಾಗಿರುವ ಕುರಿತು ಯುವಕನ ಪಾಲಕರು ಯುವತಿಗೆ ಕಿರುಕುಳ ನೀಡುತ್ತಿದ್ದರು. ಈ ಕುರಿತು ಯುವತಿ ಮುಂಚಿತವಾಗಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ.
ಆದರೆ ಮಂಗಳವಾರ ರಾತ್ರಿ ತಮ್ಮ ಮಗಳ ಕೊಲೆ ನಡೆದಿದೆ ಎಂದು ಯುವತಿಯ ಪಾಲಕ ಸಂತೋಷ್ ಪೀಟರ್ ಸನ್ ಗ್ರಾಮೀಣ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಯು. ನಾಗರಾಜ, ಡಿಎಸ್ ಪಿ ರುದ್ರೇಶ್ ಉಜ್ಜನಕೊಪ್ಪ, ಗ್ರಾಮೀಣ ಪಿಎಸ್ ಐ ಜೆ. ದೊಡ್ಡಪ್ಪ ಭೇಟಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.