ಹತ್ತು ಸಾವಿರ ರೈತರಿಂದ ಹೆದ್ದಾರಿ ಬಂದ್
Team Udayavani, Aug 17, 2017, 7:50 AM IST
ಗಂಗಾವತಿ: ಕೊಪ್ಪಳ-ರಾಯಚೂರು ಜಿಲ್ಲೆಯ ತುಂಗಭದ್ರಾ ಎಡದಂಡೆ ಕಾಲುವೆಗೆ ಕೂಡಲೇ ನೀರು ಹರಿಸಲು ಆಗ್ರಹಿಸಿ 10 ಸಾವಿರಕ್ಕೂ ಹೆಚ್ಚು ರೈತರು ಬುಧವಾರ 8 ತಾಸಿಗೂ ಅಧಿಕ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ
ನಡೆಸಿದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 50 ಟಿಎಂಸಿ ನೀರಿದ್ದರೂ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ನಿರ್ಣಯಿಸಿರುವುದು ಅವೈಜ್ಞಾನಿ. ಕಳೆದ ವರ್ಷ 39 ಟಿಎಂಸಿ ನೀರಿದ್ದ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸಲಾಗಿತ್ತು.
ಈಗ 50 ಟಿಎಂಸಿ ನೀರಿದ್ದರೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಸಂತೋಷ ಲಾಡ್ ಮತ್ತು ಸಚಿವ ಬಸವರಾಜ ರಾಯರಡ್ಡಿ ಕುತಂತ್ರ ನಡೆಸಿ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ರೈತರು ನೀರು ಬಿಡಿಸಲು ಹಲವು ಸಲ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರಲ್ಲದೇ ಈಗಲಾದರೂ ಕಾಲುವೆಗೆ ನೀರು ಹರಿಸುವಂತೆ ರೈತ ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಗಂಗಾವತಿ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಮಾತನಾಡಿ, ಸರಕಾರ ರೈತರ ಜೀವನದೊಂದಿಗೆ ಚೆಲ್ಲಾಟವಾಡಬಾರದು.ನೀರಿದ್ದರೂ ಕಾಲುವೆಗೆ ನೀರು ಹರಿಸದೆ ರೈತರನ್ನು ದಾರಿ ತಪ್ಪಿಸಲು ಅ ಧಿಕಾರಿಗಳು ಸಿದಟಛಿತೆ ನಡೆಸಿದ್ದಾರೆ. ಸುಳ್ಳು ಲೆಕ್ಕ ಹೇಳುವ ಮೂಲಕ ನೀರನ್ನು ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಮಲ-ಕೈ ಕಾರ್ಯಕರ್ತರ ನೂಕಾಟ
ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರಿಂದ ತಳ್ಳಾಟ-ನೂಕಾಟ ನಡೆದಿದ್ದರಿಂದ ಕೆಲ ಹೊತ್ತು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಹೋರಾಟದಲ್ಲಿ ಪಾಲ್ಗೊಂಡ ಕನಕಗಿರಿ ಶಾಸಕ ಶಿವರಾಜ್‌ತಂಗಡಗಿ ಪ್ರತಿಭಟನಾ ನಿರತ ರೈತರನ್ನುದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ ಕನಕಗಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ-ಜೆಡಿಎಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಪರಿಣಾಮ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.