ಜಿಂಕೆಗಳ ಕಾಟಕ್ಕೆ ಕಂಗಾಲಾದ ರೈತರು


Team Udayavani, Jul 29, 2019, 9:21 AM IST

hv-tdy-02

ಕುಕನೂರು: ಭೀಕರ ಬರ ಜೀವ ಸಂಕುಲವನ್ನು ಸಂಕಷ್ಟಕ್ಕೆ ದೂಡಿರುವುದಕ್ಕೆ ತಾಲೂಕು ಸಾಕ್ಷಿಯಾಗುತ್ತಿದ್ದು, ಆಹಾರಕ್ಕಾಗಿ ಜಿಂಕೆಗಳು ನಡೆಸುತ್ತಿರುವ ಹೋರಾಟ ರೈತರಿಗೆ ಪ್ರಾಣ ಸಂಕಟವಾಗಿದೆ. ತಾಲೂಕು ಬರದಿಂದ ತತ್ತರಿಸಿದ್ದು, ಕುಡಿವ ನೀರು ಹಾಗೂ ಆಹಾರಕ್ಕಾಗಿ ಜಿಂಕೆಗಳ ಪರದಾಡುತ್ತಿವೆ. ಈ ನಡುವೆ ಅಲ್ಪಸ್ವಲ್ಪ ಸುರಿದ ಮಳೆಯನ್ನು ನಂಬಿ ಬಿತ್ತನೆಯಾದ ಬೆಳೆಗಳಿಗೆ ತೇವಾಂಶ ಕೊರತೆ ಎದುರಾಗಿದೆ. ಹೇಗಾದರೂ ಮಾಡಿ ಬೆಳೆ ರಕ್ಷಿಸಿಕೊಳ್ಳಬೇಕೆಂದು ಶ್ರಮಿಸುತ್ತಿರುವ ರೈತರಿಗೆ ಜೆಂಕೆಗಳ ಕಾಟ ನಿದ್ದೆಗೆಡಿಸಿದೆ. ರಾತ್ರಿ ಜಮೀನುಗಳಿಗೆ ನುಗ್ಗುವ ಜಿಂಕೆಗಳು ಬೆಳೆ ಹಾಳು ಮಾಡುತ್ತಿದ್ದು, ರೈತರು ನಿದ್ದೆಗೆಟ್ಟು ಬೆಳೆ ಕಾಯುವಂತಾಗಿದೆ.

ನಿಯಂತ್ರಣಕ್ಕೆ ಕಸರತ್ತು:

ಸತತ ಬರಗಾಲದಿಂದ ತತ್ತರಿಸಿರುವ ರೈತರಿಗೆ ಬೆಳೆಗಳನ್ನು ಉಳಿಸಿಕೊಳ್ಳುವುದು ಸವಾಲಾಗಿಗೆ. ಹೀಗಾಗಿ, ಕೆಲ ರೈತರು ಬೆಳೆಗಳ ರಕ್ಷಣೆಗಾಗಿ ನಾನಾ ಕಸರತ್ತು ಮಾಡುತ್ತಿದ್ದಾರೆ. ಕೆಲವರು ಜಮೀನಿನ ಸುತ್ತ ಬೇಲಿ ಹಾಕಿ, ಜಮೀನಿನಲ್ಲೇ ಒಂದು ಗುಡಿಸಲು ನಿರ್ಮಿಸಿಕೊಂಡು ಜಿಂಕೆಗಳನ್ನು ಓಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಜಿಂಕೆಗಳನ್ನು ಹೆದರಿಸಲು ನಾನಾ ವಸ್ತುಗಳನ್ನೂ ಬಳಸುತ್ತಾ ರೈತರು ನಿದ್ದೆ ಮರೆತಿದ್ದಾರೆ. ಜಿಂಕೆಗಳನ್ನು ಕಾಯುವುದೇ ನಿತ್ಯ ಕಾಯಕವಾಗಿದೆ.
ನಿರಂತರ ಹೋರಾಟ:

ತಾಲೂಕಿನ ಯರೇಹಂಚಿನಾಳ, ಬಿನ್ನಾಳ, ಸಿದ್ನೆಕೊಪ್ಪ, ಸೋಂಪುರ, ಚಿಕ್ಕೇನಕೊಪ್ಪ, ಭಟ್ಟಪನಹಳ್ಳಿ, ಮಂಡಲಗೇರಿ, ಮಸಬಹಂಚಿನಾಳ, ಬೆಣಕಲ್, ಕುಕನೂರು, ದ್ಯಾಂಪುರ, ರಾಜೂರು, ಸಂಗನಹಾಳ, ತೊಂಡಿಹಾಳ, ಬಂಡಿಹಾಳ, ಕರಮುಡಿ ಹಾಗೂ ಇನ್ನಿತರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆ ಪ್ರಕಾರ ಕುಕನೂರು ಮತ್ತು ಯಲಬುರ್ಗಾ ತಾಲೂಕಿನಲ್ಲಿ ಸುಮಾರು 20,572 ಕೃಷ್ಣಮೃಗ, 16,420 ಜಿಂಕಾರ, 10,856 ಲಾಂಗಚಾಪರ ಎಂಬ ಮೂರು ಪ್ರಜಾತಿಯ ಜಿಂಕೆಗಳಿವೆ.
ಜಿಂಕೆ ವನದ ಬದಲು ಪರ್ಯಾಯ ಆಗಲಿಲ್ಲ:

ಜಿಂಕೆ ವನದ ಬದಲು ಪರ್ಯಾಯವಾಗಿ ಹೊಸ ಯೋಜನೆ ರೂಪಿಸಿದ್ದರು. ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಮಧ್ಯ ಹಳ್ಳದ ದಂಡೆಯಲ್ಲಿ ಜಿಂಕೆಗಳಿಗೆ ಆಹಾರ ಬೆಳೆಯುವುದು ಹಾಗೂ ಹಳ್ಳದಲ್ಲಿ ನೀರು ಸಂಗ್ರಹವಾಗುವಂತೆ ನೋಡಿಕೋಳ್ಳುವುದಕ್ಕೆ ಪ್ರಸ್ತಾವನೆ ಸಿದ್ಧಪಡಿಸಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅದಕ್ಕೆ ಸಬೂಬು ಎನ್ನುವಂತೆ ಜಿಂಕೆಗಳು ಅಂಜುಬುರಕ ಪ್ರಾಣಿ. ಬೇಸಿಗೆಯಲ್ಲಿ ಬಿಸಿಲು ತಡೆದುಕೊಳ್ಳಲು ಆಗುವುದಿಲ್ಲ. ಒಂದು ಬಾರಿ ಮನುಷ್ಯರನ್ನು ಕಂಡರೆ 15 ದಿನಗಳವರೆಗೆ ಆ ಭಾಗಕ್ಕೆ ಹೋಗುವುದಿಲ್ಲ. ಆದ್ದರಿಂದ ಹಳ್ಳದ ದಂಡೆ ಮೇಲೆ ಆಹಾರ, ಕುಡಿಯಲು ನೀರು ಸಿಕ್ಕರೆ ರೈತರ ಜಮೀನುಗಳಿಗೆ ನುಗ್ಗುವುದು ತಪ್ಪುತ್ತದೆ ಎನ್ನುತ್ತಿದ್ದಾರೆ.

ಸುಮಾರು ವರ್ಷಗಳಿಂದ ಜಿಂಕೆವನ ನಿರ್ಮಿಸುವಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೆ ಇದುವರೆಗೂ ಎಲ್ಲ ಸರಕಾರಗಳು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿವೆ. ಇನ್ನಾದರೂ ರೈತರ ಗೋಳಾಟ ಅಂತ್ಯವಾಗುತ್ತದೆ ಎಂಬುವ ನಂಬಿಕೆ ನನ್ನದು ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಾಗಿದೆ.•ಅಂದಪ್ಪ ಕೊಳೂರು ರೈತ ಸಂಘದ ಜಿಲ್ಲಾಧ್ಯಕ್ಷ

ಈ ಬಾರಿ ಆಡಳಿತಕ್ಕೆ ಬಂದ ತಕ್ಷಣ ಕೊಪ್ಪಳ ಜಿಲ್ಲೆಯಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರೈತರು ಜಿಂಕೆಗಳಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಿಜೆಪಿ ಆಡಳಿತದ ಸಂದರ್ಭದಲ್ಲಿ ಜಿಂಕೆ ವನಕ್ಕೆ ಸುಮಾರು 50 ಲಕ್ಷ ರೂ. ಬಿಡುಗಡೆ ಮಾಡಿತ್ತು.•ಹಾಲಪ್ಪ ಆಚಾರ್‌ ಯಲಬುರ್ಗಾ ಶಾಸಕ

 

•ಎಲ್. ಮಂಜುನಾಥಪ್ರಸಾದ್‌

ಟಾಪ್ ನ್ಯೂಸ್

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.