ನೀರಿಗಾಗಿ ರಾಜೂರು-ಆಡೂರ ಗ್ರಾಮಸ್ಥರ ಹೋರಾಟ


Team Udayavani, Jun 4, 2019, 12:52 PM IST

kopala-tdy-3..

ಕುಕನೂರು: ಆಡೂರು ಗ್ರಾಮಕ್ಕೆ ನೀರು ಪೂರೈಕೆ ವಿರೋಧಿಸಿ ರಾಜೂರು ಗ್ರಾಮಸ್ಥರು ಗ್ರಾಪಂ ಎದುರು ಪ್ರತಿಭಟನೆ ನಡೆಸಿದರು.

ಕುಕನೂರು: ಇರುವ ಒಂದೇ ಬೋರ್‌ವೆಲ್ ನೀರನ್ನು ತಮ್ಮ ಗ್ರಾಮಕ್ಕೆ ಪೂರೈಸಬೇಕೆಂದು ಒತ್ತಾಯಿಸಿ ರಾಜೂರು ಹಾಗೂ ಆಡೂರು ಗ್ರಾಮಸ್ಥರು ರಾಜೂರು ಗ್ರಾಪಂ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ತಮ್ಮ ಗ್ರಾಮದ ನೀರು ಶುದ್ಧೀಕರಣ ಘಟಕಕ್ಕೆ ನೀರು ಪೂರೈಸಬೇಕೆಂದು ಆಡೂರು ಗ್ರಾಮದ ಗ್ರಾಪಂ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸೋಮವಾರ ಪಂಚಾಯತ್‌ ಎದುರು ಪ್ರತಿಭಟನೆ ಮಾಡುವ ನಿರ್ಧಾರ ಮಾಡಿದ್ದರು. ಇದನ್ನು ಅರಿತ ತಹಶೀಲ್ದಾರ್‌ ಹಾಗೂ ತಾಪಂ ಇಒ ಅವರು ಮೇಲಾಧಿಕಾರಿಗಳ ಆದೇಶವಾಗಿದೆ ಎಂದು ತಿಳಿಸಿ ಪೊಲೀಸ್‌ ಬಂದೋಬಸ್ತ್ನಲ್ಲಿ ಆಡೂರು ಗ್ರಾಮಕ್ಕೆ ಪೂರೈಕೆಯಾಗುವ ನೀರಿನ ಪೈಪ್‌ಲೈನ್‌ ಮರು ಜೋಡನೆ ಮಾಡಿದರು.

ಇದಕ್ಕೆ ರಾಜೂರು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, ಹಿರಿಯ ಅಧಿಕಾರಿಗಳ ಆದೇಶ ಪ್ರತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜೂರುನಿಂದ ಆಡೂರು ಗ್ರಾಮದ ಓವರ್‌ ಟ್ಯಾಂಕ್‌ಗೆ ಹೋಗುವ ಮಧ್ಯದಲ್ಲಿ ಪ್ರಭಾವಿ ವ್ಯಕ್ತಿಗಳು ತಮ್ಮ ತೋಟಕ್ಕೆ ನೀರು ಬಳಕೆ ಮಾಡಿಕೊಳ್ಳತ್ತಿದ್ದಾರೆ. ಆದ್ದರಿಂದ ಆಡೂರು ಗ್ರಾಮಕ್ಕೆ ನೀರು ಪೂರೈಸದಿರಿ ಎಂದು ರಾಜೂರು ಗ್ರಾಮಸ್ಥರು ಪಟ್ಟು ಹಿಡಿದು ತಡರಾತ್ರಿವರೆಗೂ ಪ್ರತಿಭಟನೆ ನಡೆಸಿದರು. ರಾಜೂರು ಹಾಗೂ ಆಡೂರು ಗ್ರಾಮಗಳ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕೊರೆಸಿದ 5 ಬೋರ್‌ವೆಲ್ಗಳಲ್ಲಿ ರಾಜೂರು ಗ್ರಾಮದಲ್ಲಿ ಕೊರೆಸಿದ 3ರಲ್ಲಿ ಎರಡಕ್ಕೆ ಹಳೆಯ ಮೋಟರ್‌ ಅಳವಡಿಸಿ ಬಿಲ್ ಪಡೆಯಲಾಗಿದೆ ಎಂದು ರಾಜೂರು ಗ್ರಾಮಸ್ಥರು ಆರೋಪಿಸಿದರು.

ಹಿನ್ನೆಲೆ: ರಾಜೂರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ಶುದ್ಧ ಕುಡಿವ ನೀರಿನ ಘಟಕಕ್ಕೆ ಹಾಗೂ ಆಡೂರು ಗ್ರಾಮಕ್ಕೆ ನೀರು ಪೂರೈಕೆಯಾಗುವ ಒಂದೇ ಪೈಪ್‌ಲೈನ್‌ ಇರುವ ಕಾರಣ ಆಡೂರು ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗುತ್ತದೆ ಎಂದು ಆರೋಪಿಸಿ ಮೂರು ದಿನಗಳ ಹಿಂದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಗ್ರಾಪಂ ಅಧಿಕಾರಿಗಳು ರಾಜೂರು ಗ್ರಾಮಕ್ಕೆ ನೀರು ಪೂರೈಕೆಯಾಗದಂತೆ ಕ್ರಮ ಕೈಗೊಂಡಿದ್ದರು. ಇದರಿಂದ ಆಕ್ರೋಶಗೊಂಡ ಕೆಲ ಕಿಡಿಕೇಡಿಗಳು ಎರಡು ಗ್ರಾಮಕ್ಕೆ ಪೂರೈಕೆ ಮಾಡುವ ಬೋರ್‌ವೆಲ್ನ ಮೋಟರ್‌ ಹಾಗೂ ಪೈಪ್‌ಲೆನ್‌ನ್ನು ರಾತ್ರಿ ವೇಳೆ ಕಿತ್ತು ಹೋಗಿದ್ದರು. ಈ ಎಲ್ಲ ಬೆಳವಣಿಗೆ ನಂತರ ಅಧಿಕಾರಿಗಳು ಹಾಗೂ ಗ್ರಾಮಕ್ಕೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿದ್ದರು.

ಎರಡು ದಿನದ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಲಾಗಿತ್ತು. ಎರಡು ಗ್ರಾಮಸ್ಥರು ಶಾಸಕರ ಬಳಿ ಹೋಗಿ ಹೊಂದಾಣಿಕೆ ಮಾಡಿಕೊಂಡು ಯಾವುದೇ ತಕರಾರು ಮಾಡುವುದಿಲ್ಲ ಎಂದಿದ್ದಾರೆ. ಈಗ ಗ್ರಾಮಕ್ಕೆ ಬಂದು ಮತ್ತೆ ಸಮಸ್ಯೆ ಸೃಷ್ಟಿಸಿದ್ದಾರೆ.•ನೀಲಪ್ರಭ, ತಹಶೀಲ್ದಾರ್‌

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.