ಹೊನ್ನ ಹುಡಿ ಫೋಟೋಗೆ ಪ್ರಥಮ ಬಹುಮಾನ
Team Udayavani, Feb 10, 2019, 11:54 AM IST
ಕೊಪ್ಪಳ: ಖ್ಯಾತ ಕಲಾ ವಿಮರ್ಶಕ ಎ. ಈಶ್ವರಯ್ಯ ಸ್ಮರಣಾರ್ಥ ‘ನೆಲದ ನೆಲೆ-ಗ್ರಾಮೀಣ ಸೊಬಗಿನ ನೈಜ ಚಿತ್ರಣ’ ವಿಷಯದಡಿ ನಡೆದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಾಹಕ ಭರತ್ ಕಂದಕೂರಗೆ ಪ್ರಥಮ ಬಹುಮಾನ ಲಭಿಸಿದೆ.
ಉಡುಪಿಯ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಬಿಳಿಕಲ್ಲು ಪ್ರಕಾಶನ ಹಾಗೂ ಫೋಕಸ್ ಸ್ಟುಡಿಯೋದ ಸಹಯೋಗದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 115ಕ್ಕೂ ಹೆಚ್ಚು ಛಾಯಾಗ್ರಾಹಕರ ಸುಮಾರು 400ಕ್ಕೂ ಹೆಚ್ಚು ಛಾಯಾಚಿತ್ರಗಳಿದ್ದವು. ಕೊಪ್ಪಳದ ಭರತ್ ಕಂದಕೂರ ಅವರ ‘ಹೊನ್ನ ಹುಡಿ’ ಶೀರ್ಷಿಕೆಯ ಛಾಯಾಚಿತ್ರ ಅಂತಿಮ ಸುತ್ತಿನಲ್ಲಿ ಬಹುಮಾನ ಪಡೆದುಕೊಂಡಿದೆ. ಶುಕ್ರವಾರ ನಡೆದ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ 5 ಸಾವಿರ ರೂ. ನಗದು, ಪಾರಿತೋಷಕ ನೀಡಿ ಗೌರವಿಸಲಾಯಿತು.
ಖ್ಯಾತ ಅಂತಾರಾಷ್ಟ್ರೀಯ ಛಾಯಾಗ್ರಾಹಕ ಗುರುದಾಸ್ ಕಾಮತ್ ಹಾಗೂ ಫೋಕಸ್ ರಘು ಸ್ಪರ್ಧೆಯ ತೀರ್ಪುಗಾರರಾಗಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಸ್. ಲಿಂಗದೇವರು, ಸಿನಿಮಾ ವಿಮರ್ಶಕ, ಪತ್ರಕರ್ತ ಗಿರೀಶ್‌ರಾವ್ (ಜೋಗಿ), ಕಾಲೇಜಿನ ಆಡಳಿತಾಧಿಕಾರಿ ಡಾ| ಎಚ್. ಶಾಂತಾರಾಮ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ ಕಾಮತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ